ಪಂಜಾಬ್ | ರೈತ ಹೋರಾಟದ ಕಣದಲ್ಲಿ ಬಿಜೆಪಿ ಭವಿಷ್ಯ? 

Date:

Advertisements

ಪಂಜಾಬ್‌ನಲ್ಲಿ ಎಎಪಿ, ಕಾಂಗ್ರೆಸ್, ಶಿರೋಮಣಿ ಅಕಾಲಿ ದಳ (ಎಸ್‌ಎಡಿ), ಮತ್ತು ಬಿಜೆಪಿ ನಡುವಿನ ಚತುಷ್ಕೋನ ಸ್ಪರ್ಧೆಗೆ ಜೂನ್‌ 4 ಉತ್ತರ ನೀಡಲಿದೆ. ರಾಜ್ಯದಲ್ಲಿ ಕೆಲವು ಸ್ಥಾನಗಳಲ್ಲಿ ಪಂಚಮುಖ ಸ್ಪರ್ಧೆಯೂ ನಡೆದಿದೆ. ರಾಜ್ಯದ ಯಾವುದೇ ಮಹತ್ವದ ಅಲೆ ಇಲ್ಲದಿದ್ದರೂ, ರೈತ ಹೋರಾಟದ ಬಿಸಿಯಲ್ಲಿ ಚುನಾವಣೆ ನಡೆದಿದ್ದು, ಫಲಿತಾಂಶದತ್ತ ಎಲ್ಲರ ಚಿತ್ತವಿದೆ.

ಪಂಜಾಬ್‌ನಲ್ಲಿ, ಹೆಚ್ಚಿನ ರಾಜಕೀಯ ಪಕ್ಷಗಳು ನಿರುದ್ಯೋಗ, ಅಕ್ರಮ ಮರಳು ಗಣಿಗಾರಿಕೆ ಮತ್ತು ಮಾದಕ ದ್ರವ್ಯ ಸೇವನೆಯಂತಹ ನಿರ್ಣಾಯಕ ವಿಷಯಗಳ ಬಗ್ಗೆ ಮಾತನಾಡಿಲ್ಲ. SYL ಕಾಲುವೆ ವಿವಾದ ಮತ್ತು ಚಂಡೀಗಢದ ಮೇಲಿನ ನಿಯಂತ್ರಣ ಸೇರಿದಂತೆ ನದಿ ನೀರಿನ ಹಂಚಿಕೆಯಂತಹ ಹಳೆಯ ಸಮಸ್ಯೆಗಳ ಬಗ್ಗೆ ಎಸ್‌ಎಡಿ ಬಿಟ್ಟರೆ, ಬೇರೆ ಪಕ್ಷಗಳು ಹೆಚ್ಚಾಗಿ ಮಾತನಾಡಿಲ್ಲ.

ಈ ನಡುವೆ, 2020-21ರ ರೈತ ಆಂದೋಲನದ ಸಂದರ್ಭದಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಕೇಂದ್ರ ವಿಫಲವಾಗಿದೆ ಎಂದು ಆರೋಪಿಸಿ ರೈತರು ಬಿಜೆಪಿ ಅಭ್ಯರ್ಥಿಗಳ ವಿರುದ್ಧ ಚುನಾವಣೆಯುದ್ದಕ್ಕೂ ಪ್ರತಿಭಟಿಸಿದ್ದಾರೆ. ವಿಶೇಷವಾಗಿ ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನು ಖಾತರಿಗೆ ಸಂಬಂಧಿಸಿದಂತೆ ಬಿಜೆಪಿಯ ಮೋಸದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತ ಹೋರಾಟದ ಪರಿಣಾಮ, ಎನ್‌ಡಿಎ ಭಾಗವಾಗಿದ್ದ ಎಸ್‌ಎಡಿ ಮೈತ್ರಿ ತೊರೆದಿದ್ದು, ಬಿಜೆಪಿ ಏಕಾಂಗಿ ಹೋರಾಟ ನಡೆಸುತ್ತಿದೆ. 45% ಮತದಾರರಿರುವ ಹಿಂದು ಮತ್ತು ಎಸ್‌ಸಿ ಜಾಟ್‌ ಸಮುದಾಯವನ್ನು ಸೆಳೆಯಲು ಬಿಜೆಪಿ ಯತ್ನಿಸಿದೆ.

Advertisements

ಕಾಂಗ್ರೆಸ್‌ ಮತ್ತು ಎಎಪಿ ‘ಇಂಡಿಯಾ’ ಒಕ್ಕೂಟದ ಭಾಗವಾಗಿದ್ದರೂ, ಬಿಜೆಪಿಗೆ ಹೆಚ್ಚಿನ ಅವಕಾಶ ನೀಡಬಾರದು ಎಂಬ ಕಾರಣಕ್ಕೆ ಪಂಜಾಬ್‌ನಲ್ಲಿ ಎರಡು ಪಕ್ಷಗಳು ಸ್ವತಂತ್ರವಾಗಿ ಸ್ಪರ್ಧೆ ಮಾಡಿವೆ. ಎರಡೂ ಪಕ್ಷಗಳ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆಸಿದೆ. ಭ್ರಷ್ಟಾಚಾರ, ನಿರುದ್ಯೋಗದ ಬಗ್ಗೆ ಎಎಪಿ ಹೆಚ್ಚು ಮಾತನಾಡುತ್ತಿದ್ದರೆ, ರೈತರ ಸಮಸ್ಯೆಗಳು, ಎಂಎಸ್‌ಪಿ, ಸಾಲಮನ್ನಾ, ಮಹಾಲಕ್ಷ್ಮಿ ಯೋಜನೆ, ನಿರುದ್ಯೋಗದ ಬಗ್ಗೆ ಕಾಂಗ್ರೆಸ್‌ ಅತಿ ಹೆಚ್ಚು ಗಮನ ಹರಿಸಿದೆ.  ಎಸ್‌ಎಡಿ ಕೂಡ ತನ್ನ ಹಳಯ ಪ್ರಾಬಲ್ಯವನ್ನ ಮರಳಿ ಪಡೆಯಲು ರಾಜ್ಯ ಎದುರಿಸುತ್ತಿರುವ ಎಲ್ಲ ವಿಷಯಗಳ ಬಗ್ಗೆ ಮಾತನಾಡುತ್ತಿದೆ.

ಪ್ರಮುಖ ರಾಜಕೀಯ ವಿಶ್ಲೇಷಕ ಪ್ರೊಫೆಸರ್ ಕುಲದೀಪ್ ಸಿಂಗ್, “ಪಂಜಾಬ್‌ನಲ್ಲಿ ಕಾಂಗ್ರೆಸ್ ಮತ್ತು ಎಎಪಿ ನಡುವೆ ತೀವ್ರ ಪೈಪೋಟಿ ಇದೆ. ಎಎಪಿ ಸರ್ಕಾರದ ವಿರುದ್ಧ ಆಡಳಿತ ವಿರೋಧಿ ಅಲೆ ಇದ್ದರೂ, ವಿರೋಧವನ್ನು ಎಎಪಿ ಉತ್ತಮವಾಗಿ ನಿರ್ವಹಿಸುವ ನಿರೀಕ್ಷೆಯಿದೆ. ಬಿಜೆಪಿಯಿಂದ ಗಮನಾರ್ಹ ಪರಿಣಾಮವನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ಅಕಾಲಿದಳವು ತನ್ನ ಮತಗಳ ಶೇಕಡಾವಾರು ಪ್ರಮಾಣವನ್ನು ಸುಧಾರಿಸಬಹುದಾದರೂ, ಅದು ತನ್ನ ಕಳೆದುಕೊಂಡ ನೆಲೆಯನ್ನು ಮರಳಿ ಪಡೆಯಲು ಇನ್ನೂ ಬಹಳ ದೂರವಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಅಧಿಕಾರ ಕಳೆದುಕೊಂಡ ಕಾಂಗ್ರೆಸ್‌, ತನ್ನ ಪ್ರಬಲ್ಯವನ್ನು ಹೆಚ್ಚಿಸಿಕೊಳ್ಳಬಹುದು” ಎಂದು ಹೇಳಿದ್ದಾರೆ.

ಎಎಪಿ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಕೆಲವು ಪ್ರಮುಖ ಭರವಸೆಗಳನ್ನು ಈಡೇರಿಸಿಲ್ಲ. ಉಚಿತ ವಿದ್ಯುತ್ (300 ಯೂನಿಟ್), ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿಯ ಮೇಲೆ ತನ್ನ ಅಭಿಯಾನವನ್ನು ಕೇಂದ್ರೀಕರಿಸಿ ಲೋಕಸಭಾ ಚುನಾವಣೆಯನ್ನು ಎದುರಿಸುತ್ತಿದೆ. ಪಕ್ಷವು ಗೆಲುವಿಗಾಗಿ ಐದು ಹಾಲಿ ರಾಜ್ಯ ಕ್ಯಾಬಿನೆಟ್ ಸಚಿವರು ಸೇರಿದಂತೆ ಪ್ರಭಾವಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ

ಶಿರೋಮಣಿ ಅಕಾಲಿ ದಳ (ಎಸ್‌ಎಡಿ)ಗೆ ಈ ಚುನಾವಣೆಯು ಅಸ್ತಿತ್ವದ ವಿಷಯವಾಗಿದೆ. ಎರಡು ದಶಕಗಳಲ್ಲಿ ಮೊದಲ ಬಾರಿಗೆ ಎಸ್‌ಎಡಿ ಮತ್ತು ಬಿಜೆಪಿ ಸ್ವತಂತ್ರವಾಗಿ ಚುನಾವಣೆಗೆ ಸ್ಪರ್ಧಿಸುತ್ತಿವೆ. ಪಂಜಾಬ್ ಜನತೆಗೆ ಇತ್ತೀಚೆಗೆ ಪತ್ರ ಬರೆದಿರುವ 82 ವರ್ಷದ ಅಮರಿಂದರ್ ಅವರು ಈಗ ಬಿಜೆಪಿಯಲ್ಲಿದ್ದಾರೆ. ರಾಜ್ಯದ ಭವಿಷ್ಯದ ಅಭ್ಯುದಯಕ್ಕಾಗಿ ಬಿಜೆಪಿಗೆ ಮತ ಚಲಾಯಿಸುವಂತೆ ಅವರು ಕೋರಿದ್ದಾರೆ.

2019ರ ಚುನಾವಣೆಯಲ್ಲಿ, ಕಾಂಗ್ರೆಸ್ ಎಂಟು ಸ್ಥಾನಗಳನ್ನು ಗೆದ್ದುಕೊಂಡಿತು. ಎಸ್‌ಎಡಿ ಎರಡು, ಬಿಜೆಪಿ ಎರಡು ಮತ್ತು ಎಎಪಿ ಒಂದು ಸ್ಥಾನವನ್ನು ಗೆದ್ದಿದ್ದವು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X