ಕರ್ನಾಟಕದಲ್ಲಿ 29 ಮತ ಎಣಿಕೆ ಕೇಂದ್ರಗಳಲ್ಲಿ ಮತ ಎಣಿಕೆ ಪ್ರಕ್ರಿಯೆ ಭರದಿಂದ ಸಾಗಿದೆ. ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಅಭ್ಯರ್ಥಿಗಳು ಹಾವು ಏಣಿ ಆಟದಲ್ಲಿ ಸಿಲುಕಿಕೊಂಡಿದ್ದಾರೆ. ಸದ್ಯದ ಚಿತ್ರಣ ಇಲ್ಲಿದೆ.
ದೇಶದ ಗಮನ ಸೆಳೆದಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಹಿನ್ನಡೆ ಅನುಭವಿಸಿದ್ದು, ಜೆಡಿಎಸ್ ಅಭ್ಯರ್ಥಿಯಾಗಿರುವ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಒಂದು ಲಕ್ಷ ಮತಗಳ ಅಂತರದ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಚಾಮರಾಜನಗರ ಎಸ್‌ಸಿ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಚಿವ ಹೆಚ್ ಸಿ ಮಹದೇವಪ್ಪ ಪುತ್ರ ಸುನೀಲ್ ಬೋಸ್ ಅವರು 50 ಸಾವಿರ ಮತಗಳ ಮುನ್ನಡೆ ಸಾಧಿಸಿದ್ದು, ಬಿಜೆಪಿ ಅಭ್ಯರ್ಥಿ ಎಸ್ ಬಾಲರಾಜ್ ಹಿನ್ನಡೆ ಅನುಭವಿಸಿದ್ದಾರೆ.
ಮೈಸೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ ಲಕ್ಷ್ಮಣ ಹಿನ್ನಡೆ ಅನುಭವಿಸಿದ್ದು, ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ 53 ಸಾವಿರ ಮತಗಳ ಮುನ್ನಡೆ ಸಾಧಿಸಿದ್ದಾರೆ.
ಬೀದರ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಚಿವ ಈಶ್ವರ್ ಖಂಡ್ರೆ ಪುತ್ರ ಸಾಗರ್ ಖಂಡ್ರೆ ಅವರು 24 ಸಾವಿರ ಮತಗಳ ಮುನ್ನಡೆಯಲ್ಲಿದ್ದಾರೆ. ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಹಿನ್ನಡೆ ಅನುಭವಿಸಿದ್ದಾರೆ.
ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ. ಜಯಪ್ರಕಾಶ್ ಹೆಗಡೆ ಹಿನ್ನಡೆ ಅನುಭವಿಸಿದ್ದು, ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಒಂದು ಲಕ್ಷ ಮತಗಳ ಮುನ್ನಡೆಯಲ್ಲಿದ್ದಾರೆ.
ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಹಿನ್ನಡೆ ಅನುಭವಿಸಿದ್ದು, ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಅವರು 21 ಸಾವಿರ ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಬಳ್ಳಾರಿ ಎಸ್‌ಟಿ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇ. ತುಕಾರಾಮ್ ಅವರು 34 ಸಾವಿರ ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಬಿ ಶ್ರೀರಾಮುಲು ಹಿನ್ನಡೆ ಅನುಭವಿಸಿದ್ದಾರೆ.
ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರು 31 ಸಾವಿರ ಮತಗಳ ಮುನ್ನಡೆಯಲ್ಲಿದ್ದು, ಬಿಜೆಪಿ ಅಭ್ಯರ್ಥಿ ಅಣ್ಣಾ ಸಾಹೇಬ್ ಜೊಲ್ಲೆ ಹಿನ್ನಡೆ ಅನುಭವಿಸಿದ್ದಾರೆ.
