ವಾರಣಾಸಿಯಿಂದ ಗೆಲುವು ಸಾಧಿಸಿದ ನರೇಂದ್ರ ಮೋದಿ: ಗೆಲುವಿನ ಅಂತರದಲ್ಲಿ ಭಾರಿ ಇಳಿಕೆ

Date:

Advertisements

ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಣಾಸಿಯಿಂದ ಮೂರನೇ ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಮೋದಿ ಅವರು ಕಾಂಗ್ರೆಸ್‌ನ ಅಜಯ್‌ ರಾಯ್‌ ಅವರನ್ನು 1,52,513 ಮತಗಳ ಅಂತರದಿಂದ ಸೋಲಿಸಿದ್ದಾರೆ.

ನರೇಂದ್ರ ಮೋದಿ 6,129,70 ಮತಗಳನ್ನು ಪಡೆದರೆ, ಅಜಯ್‌ ರಾಯ್‌ 4,604,57 ಮತಗಳನ್ನು ಪಡೆದಿದ್ದಾರೆ ಎಂದು ಚುನಾವಣಾ ಆಯೋಗದ ಅಂಕಿಅಂಶಗಳಿಂದ ತಿಳಿದುಬಂದಿದೆ. ನರೇಂದ್ರ ಮೋದಿ ಗೆಲುವು ಪಡೆದರೂ ಕಳೆದ ಎರಡು ಚುನಾವಣೆಗಳಲ್ಲಿ ಪಡೆದ ಮತಗಳಿಗೆ ಹೋಲಿಸಿದರೆ ಭಾರಿ ಅಂತರದಲ್ಲಿ ಇಳಿಕೆಯಾಗಿದೆ.

ಈ ಸುದ್ದಿ ಓದಿದ್ದೀರಾ? ಇಂಡಿಯಾ ಒಕ್ಕೂಟದ ಬಹುಮತ ಸಂಖ್ಯೆಗೆ ತೊಡಕಾದ ಕರ್ನಾಟಕ, ದೆಹಲಿ

Advertisements

ನರೇಂದ್ರ ಮೋದಿ 2019ರ ಚುನಾವಣೆಯಲ್ಲಿ 6,74,664 ಮತಗಳನ್ನು ಪಡೆದು ಸಮಾಜವಾದಿ ಪಕ್ಷದ ಅಭ್ಯರ್ಥಿಯ ವಿರುದ್ಧ 4,79,505 ಮತಗಳ ಅಂತರದಿಂದ ಜಯಗಳಿಸಿದ್ದರು. 2014ರಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿದ್ದ ಚುನಾವಣೆಯಲ್ಲಿ 5,81,022 ಮತಗಳನ್ನು ಪಡೆದು 3,71, 784 ಮತಗಳ ಅಂತರದಲ್ಲಿ ಗೆಲುವು ದಾಖಲಿಸಿದ್ದರು.

ಈ ಬಾರಿ ಒಂದೂವರೆ ಲಕ್ಷ ಮತಗಳ ಅಂತರದಿಂದ ಮಾತ್ರ ಗೆಲುವು ಗಳಿಸಿರುವುದು ಮೋದಿ ಜನಪ್ರಿಯತೆ ಕಡಿಮೆಯಾಗಿರುವ ಸೂಚಕವಾಗಿದೆ. ಅದಲ್ಲದೆ ಮೊದಲ ಆರಂಭಿಕ ಹಂತದ ಕೆಲವು ಸುತ್ತುಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದರು.

ಬಿಜೆಪಿ ಉತ್ತರ ಪ್ರದೇಶದಲ್ಲಿ 80 ಸದಸ್ಯ ಸಂಖ್ಯೆಯಲ್ಲಿ ಭಾರಿ ಹಿನ್ನಡೆಯಲ್ಲಿದೆ.2019ರಲ್ಲಿ  62 ಹಾಗೂ 2014ರಲ್ಲಿ 71 ಸ್ಥಾನಗಳನ್ನು ಪಡೆದಿತ್ತು. ಈ ಬಾರಿ 35 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಕಾಯ್ದುಕೊಂಡಿದೆ. ಕೇಂದ್ರ ಸಚಿವೆ ಸ್ಮೃತಿ ಇರಾನಿ ಸೇರಿದಂತೆ ಹಲವರು ಪರಾಭವಗೊಂಡಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X