ಮೂರನೇ ಬಾರಿ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಅವರು ಜೂನ್ 8 ರಂದು ಸಂಜೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಎನ್‌ಡಿಎ ಒಕ್ಕೂಟ 292 ಕ್ಷೇತ್ರಗಳಲ್ಲಿ ಜಯಗಳಿಸಿ ಬಹುಮತಗಳಿಸಿದೆ. ಒಂದು ವೇಳೆ ಎನ್‌ಡಿಎ ಸರ್ಕಾರ ರಚಿಸಿದರೆ ಮಾಜಿ ಪ್ರಧಾನಿ ಜವಹರ್‌ಲಾಲ್ ನೆಹರು ನಂತರ ಸತತ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗುವ ಎರಡನೇ ನಾಯಕರಾಗಲಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಜಾಪ್ರಭುತ್ವದ ಮೇಲೆ ಸವಾರಿ ಮಾಡುವವರಿಗೆ ಪಾಠ ಕಲಿಸಿದ ಫಲಿತಾಂಶ
2024ರ ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಒಕ್ಕೂಟದ ಪಕ್ಷಗಳಾದ ಬಿಜೆಪಿ 240, ಟಿಡಿಪಿ 16, ಜೆಡಿಯು 12, ಶಿಂಧೆ ಶಿವಸೇನೆ 7 ಸ್ಥಾನ ಸೇರಿದಂತೆ ಒಟ್ಟು 292 ಕ್ಷೇತ್ರಗಳಲ್ಲಿ ಜಯ ಸಾಧಿಸಿವೆ.
ಇಂಡಿಯಾ ಒಕ್ಕೂಟದ ಪಕ್ಷಗಳಲ್ಲಿ ಕಾಂಗ್ರೆಸ್ 99, ಎಸ್‌ಪಿ 37, ಟಿಎಂಸಿ 29, ಡಿಎಂಕೆ 22 ಸ್ಥಾನಗಳು ಸೇರಿ 234 ಸ್ಥಾನಗಳಲ್ಲಿ ಜಯಗಳಿಸಿವೆ.
