ಕೋಲಾರದಲ್ಲಿ ನಮ್ಮ ಅಭ್ಯರ್ಥಿ ಸೋಲಿಗೆ ನನ್ನಿಂದ ಒಳ ಏಟು ಬಿದ್ದಿಲ್ಲ: ಸಚಿವ ಕೆ ಎಚ್ ಮುನಿಯಪ್ಪ

Date:

Advertisements

ನಾನು ಪಕ್ಷದ ಶಿಸ್ತಿನ ಸಿಪಾಯಿ. ಹೈಕಮಾಂಡ್ ಹೇಳಿದ ನಂತರ ಕೋಲಾರ ಚುನಾವಣಾ ಪ್ರಚಾರಕ್ಕೆ ಹೋಗಿದ್ದೆ. ಸೋಲಿಗೆ ಯಾರು ಕಾರಣ ಅನ್ನೋದು ಜನಜನಿತವಾಗಿದೆ. ಇದನ್ನು ಹೈಕಮಾಂಡ್, ರಾಜ್ಯ ನಾಯಕರು ಕೇಳಬೇಕು.‌ ಅವರನ್ನು ಕರೆಸಿ ಬುದ್ದಿ ಹೇಳಬೇಕು. ನನ್ನ ಕಡೆಯಿಂದ ಯಾವುದೇ ಕಾರಣಕ್ಕೂ ಒಳ ಏಟು ಬಿದ್ದಿಲ್ಲ ಎಂದು ಸಚಿವ ಕೆ ಎಚ್ ಮುನಿಯಪ್ಪ ಹೇಳಿದರು.

ಬೆಂಗಳೂರಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿ, “ಕೋಲಾರ ಸೋಲಿನ ಬಗ್ಗೆ ಜವಾಬ್ದಾರಿ ತೆಗೆದುಕೊಂಡ ಜನರು ಇದಕ್ಕೆ ಉತ್ತರ ಹೇಳಬೇಕಿದೆ. ಯಾರು ನಮ್ಮ‌ ಕುಟುಂಬಕ್ಕೆ ಟಿಕೆಟ್ ಕೊಡಬಾರದು ಎಂದರೋ ಅವರು ಹೇಳಬೇಕು. ಮುನಿಯಪ್ಪಗೆ ಬೇಡ ನಾವು ಗೆಲ್ಲಿಸಿಕೊಂಡು ಬರುತ್ತೇವೆ ಎಂದಿದ್ದರು. ಆ ನಾಯಕರು ಉತ್ತರಿಸಲಿ” ಎಂದರು.

“ನಮಗೆ ರಾಜ್ಯದಲ್ಲಿ 15ರಿಂದ 20 ಸ್ಥಾನಗಳು ಬರಬಹುದೆಂಬ ನಿರೀಕ್ಷೆ ಇತ್ತು. ಬಿಜೆಪಿ- ಜೆಡಿಎಸ್ ಒಂದಾದ ಕಾರಣಕ್ಕೆ ನಮ್ಮ ಫಲಿತಾಂಶದಲ್ಲಿ ವ್ಯತ್ಯಾಸವಾಗಿದೆ. ಕೋಲಾರ, ಚಿಕ್ಕಬಳ್ಳಾಪುರ ಮಾತ್ರವಲ್ಲ ಇನ್ನೂ ಕೆಲವು ಕಡೆ ಫಲಿತಾಂಶದಲ್ಲಿ ವ್ಯತ್ಯಾಸವಾಗಿದೆ. ಸ್ಥಳೀಯವಾಗಿ ಕೆಲವರು ಒಟ್ಟಾಗಿ ಕೆಲಸ ಮಾಡಿಲ್ಲ. ಈ ಕಾರಣಕ್ಕೂ ಫಲಿತಾಂಶದಲ್ಲಿ ವ್ಯತ್ಯಾಸವಾಗಿದೆ. ಇದನ್ನು ಹೈಕಮಾಂಡ್ ಗಮನಕ್ಕೂ ತಂದಿದ್ದೇನೆ’ ಎಂದು ಹೇಳಿದರು.

Advertisements

“ಚುನಾವಣೆಯಲ್ಲಿ ಸಿಎಂ, ಡಿಸಿಎಂ ಎಲ್ಲರೂ ಒಟ್ಟಾಗಿ ಕೆಲಸ ಮಾಡಿದ್ದಾರೆ.‌ ನಾಯಕತ್ವ ಬದಲಾವಣೆ ಕೂಗಿಗೂ ಫಲಿತಾಂಶಕ್ಕೂ ಸಂಬಂಧ ಇಲ್ಲ. ಕೆಲವೊಮ್ಮೆ ರಾಜಕೀಯವಾಗಿ ಫಲಿತಾಂಶದಲ್ಲಿ ಬದಲಾವಣೆ ಆಗುತ್ತದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬದಲಾವಣೆ ವಿಷಯ ನಮ್ಮ ಮುಂದೆ ಇಲ್ಲ. ಕೋರ್‌ ಕಮಿಟಿ ಮಾಡಬೇಕೆಂದು ಮೊದಲಿನಿಂದಲೂ ಹೇಳುತ್ತಿದ್ದೇನೆ. ಅದು ಬೇಕೇ ಬೇಕು ಎಂದು ಹೈಕಮಾಂಡ್ ಗೆ ಹೇಳಿದ್ದೇನೆ. ನೀತಿ, ನಿರ್ಣಯಗಳನ್ನು ಕೈಗೊಳ್ಳುವ ವಿಚಾರದಲ್ಲಿ ಅದು ಬಹಳ ಮುಖ್ಯ” ಎಂದು ತಿಳಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

Download Eedina App Android / iOS

X