ಪಿಎಸ್ ತಮಾಂಗ್ ಜೂನ್ 9ರಂದು ಸಿಕ್ಕಿಂ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ

Date:

Advertisements

ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ ಮುಖ್ಯಸ್ಥ ಪ್ರೇಮ್ ಸಿಂಗ್ ತಮಾಂಗ್ (ಪಿಎಸ್ ತಮಾಂಗ್) ಅವರು ಜೂನ್ 9ರಂದು ಎರಡನೇ ಅವಧಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಬುಧವಾರ ಹೇಳಿದ್ದಾರೆ.

ತಮಾಂಗ್ ಮತ್ತು ಅವರ ಸಂಪುಟದ ಪ್ರಮಾಣ ವಚನ ಸಮಾರಂಭವು ರಾಜ್ಯ ರಾಜಧಾನಿ ಗ್ಯಾಂಗ್ಟಾಕ್‌ನ ಪಾಲ್ಜೋರ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ಐದು ವರ್ಷಗಳ ಹಿಂದೆ ನಡೆದಂತೆ ಜೂನ್ 9ರಂದು ಪಾಲ್ಜೋರ್ ಸ್ಟೇಡಿಯಂನಲ್ಲಿ ನೂತನ ಸಚಿವ ಸಂಪುಟದ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಪ್ರೇಮ್ ಸಿಂಗ್ ತಮಾಂಗ್ ಮಾಧ್ಯಮಕ್ಕೆ ತಿಳಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ?  ವಿಧಾನಸಭೆ ಫಲಿತಾಂಶ: ಅರುಣಾಚಲ ಪ್ರದೇಶದಲ್ಲಿ ಬಿಜೆಪಿ, ಸಿಕ್ಕಿಂನಲ್ಲಿ ಎಸ್ಕೆಎಂಗೆ ಗೆಲುವು

ಸಿಕ್ಕಿಂನ ವಿವಿಧ ಭಾಗಗಳಿಂದ ಜನರು ಬರುವ ನಿರೀಕ್ಷೆಯಿದೆ. ಜೊತೆಗೆ ಎಸ್‌ಕೆಎಂ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮಕ್ಕೆ ಆಗಮಿಸುವ ನಿರೀಕ್ಷೆಯಿದೆ ಎಂದು ಪಿಎಸ್‌ ತಮಾಂಗ್‌ ಹೇಳಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ಮತ್ತು ಸಿಕ್ಕಿಂನ ಏಕೈಕ ಲೋಕಸಭಾ ಕ್ಷೇತ್ರದಲ್ಲಿ ಆಡಳಿತಾರೂಢ ಎಸ್‌ಕೆಎಂ ಗೆಲುವು ಸಾಧಿಸಿದೆ. ಪಕ್ಷದ ಮೇಲೆ ಮತ್ತೊಮ್ಮೆ ನಂಬಿಕೆ ಇಟ್ಟಿದ್ದಕ್ಕಾಗಿ ಜನರಿಗೆ ತಮಾಂಗ್ ಧನ್ಯವಾದ ಅರ್ಪಿಸಿದ್ದಾರೆ.

ಲೋಕಸಭೆ ಚುನಾವಣೆಯ ಜೊತೆ ಏಕಕಾಲದಲ್ಲಿಯೇ ನಡೆದ ವಿಧಾನಸಭೆ ಚುನಾವಣೆಯಲ್ಲಿ 32 ಸ್ಥಾನಗಳ ಪೈಕಿ 31 ಸ್ಥಾನಗಳನ್ನು ಎಸ್‌ಕೆಎಂ ಗೆದ್ದುಕೊಂಡಿದೆ.

ಇನ್ನು ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಎಸ್‌ಕೆಎಂ ಮುಖ್ಯಸ್ಥ, ಸಂಸದ ಇಂದ್ರ ಹ್ಯಾಂಗ್ ಸುಬ್ಬ ಎಸ್‌ಕೆಎಂ ಎನ್‌ಡಿಎ ಭಾಗವಾಗಲಿದೆ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X