ಎನ್‌ಡಿಎ ಮೈತ್ರಿಕೂಟಕ್ಕೆ ಬೆಂಬಲ ಮುಂದುವರಿಸಿದ ನಿತೀಶ್, ಚಂದ್ರಬಾಬು ನಾಯ್ದು: ಶೀಘ್ರವೇ ರಾಷ್ಟ್ರಪತಿ ಭೇಟಿ

Date:

Advertisements

ಲೋಕಸಭೆ ಚುನಾವಣೆ ಫಲಿತಾಂಶ  ಪ್ರಕಟವಾಗಿದೆ. ಈ ಬಾರಿ ಯಾವುದೇ ಪಕ್ಷಕ್ಕೆ ಬಹುಮತ ದೊರೆತಿಲ್ಲ. ಆದರೆ, ಬಿಜೆಪಿ ನೇತೃತ್ವದ ಮೈತ್ರಿಕೂಟವು 292 ಸ್ಥಾನಗಳನ್ನು ಪಡೆದುಕೊಂಡಿದೆ. ಇದೇ ವೇಳೆ, ಇಂಡಿಯಾ ಒಕ್ಕೂಟವು 234 ಸ್ಥಾನಗಳನ್ನು ಪಡೆದುಕೊಂಡಿದೆ.

ಈ ನಡುವೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಇಂಡಿಯಾ ಮೈತ್ರಿಕೂಟಕ್ಕೆ ಬೆಂಬಲ ನೀಡುವ ಸಾಧ್ಯತೆ ಇದೆ ಎಂದು ವರದಿಯಾಗಿತ್ತು. ಆದರೆ, ಇಂದು ದೆಹಲಿಯಲ್ಲಿ ನಡೆದ ಎನ್‌ಡಿಎ ಸಭೆಯಲ್ಲಿ ಇಬ್ಬರೂ ಕೂಡ ಭಾಗವಹಿಸಿದ್ದರು. ಅಲ್ಲದೇ, ಎನ್‌ಡಿಎ ಮೈತ್ರಿಕೂಟಕ್ಕೆ ನೀಡಿರುವ ಬೆಂಬಲವನ್ನೇ ಮುಂದುವರಿಸುವ ಭರವಸೆ ನೀಡಿದ್ದಾರೆ ಎಂದು ವರದಿಯಾಗಿದೆ.

ಅಲ್ಲದೇ, ನಿತೀಶ್ ಕುಮಾರ್ ಹಾಗೂ ಚಂದ್ರಬಾಬು ನಾಯ್ಡು ಅವರು ಬೆಂಬಲ ಪತ್ರವನ್ನು ನೀಡಿರುವ ಬಗ್ಗೆ ಕೂಡ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ನೂತನ ಸರ್ಕಾರ ರಚಿಸುವ ನಿಟ್ಟಿನಲ್ಲಿ ಶೀಘ್ರದಲ್ಲೇ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಎನ್‌ಡಿಎ ಮಿತ್ರಕೂಟದ ಸದಸ್ಯರು ಭೇಟಿಯಾಗಿ. ಸರ್ಕಾರ ರಚಿಸಲು ಅವಕಾಶ ಕೇಳಲಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

Advertisements

ನಿತೀಶ್ ಕುಮಾರ್ ಅವರ ಜೆಡಿಯು 12 ಮತ್ತು ಚಂದ್ರಬಾಬು ನಾಯ್ಡು ಅವರ ಟಿಡಿಪಿ 16 ಸ್ಥಾನಗಳನ್ನು ಪಡೆದಿವೆ. ಒಟ್ಟು 28 ಸ್ಥಾನಗಳಿದ್ದು, ಸದ್ಯದ ಪರಿಸ್ಥಿತಿಯಲ್ಲಿ ಬಹುಮುಖ್ಯವಾಗಿ ಪರಿಣಮಿಸಿದೆ.

NDA MEETING

ಇಬ್ಬರನ್ನೂ ಪಕ್ಕದಲ್ಲೇ ಕೂರಿಸಿಕೊಂಡಿದ್ದ ನರೇಂದ್ರ ಮೋದಿ

ಇಂದು ನಡೆದ ಎನ್‌ಡಿಎ ಮೈತ್ರಿಕೂಟದ ಸಭೆಯಲ್ಲಿ ನಿತೀಶ್ ಕುಮಾರ್ ಹಾಗೂ ಚಂದ್ರಬಾಬು ನಾಯ್ಡು ಅವರನ್ನು ನರೇಂದ್ರ ಮೋದಿಯವರು ತಮ್ಮ ಪಕ್ಕದಲ್ಲೇ ಕೂರಿಸಿಕೊಂಡಿದ್ದರು. ಈ ಬೆಳವಣಿಗೆಯು ಇವರಿಬ್ಬರೂ ಕೂಡ ಎನ್‌ಡಿಎ ಮೈತ್ರಿಕೂಟಕ್ಕೆ ಎಷ್ಟು ಅಗತ್ಯ ಎಂಬುದನ್ನು ತೋರಿಸಿಕೊಟ್ಟಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X