ಚಾರಣಕ್ಕೆ ತೆರಳಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರದಿಂದ ಪ್ರಯತ್ನ: ಸಿದ್ದರಾಮಯ್ಯ

Date:

Advertisements

ಉತ್ತರಾಖಂಡದ ಶಾಸ್ತ್ರತಾಳ್ ನಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಚಾರಣಕ್ಕೆ ತೆರಳಿದ್ದ ರಾಜ್ಯದ ಐವರು ಚಾರಣಿಗರು ಮೃತಪಟ್ಟ ಸುದ್ದಿ ತಿಳಿದು ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು “ಈಗಾಗಲೇ ರಕ್ಷಣಾ ಕಾರ್ಯಾಚರಣೆಯ ಮೂಲಕ 11 ಜನರನ್ನು ಸುರಕ್ಷಿತ ಪ್ರದೇಶಕ್ಕೆ ವಾಪಸು ಕರೆತರಲಾಗಿದ್ದು, ಇನ್ನೂ ಕೆಲವು ಚಾರಣಿಗರ ರಕ್ಷಣೆ ಆಗಬೇಕಿದೆ. ಪ್ರತಿಕೂಲ ಹವಾಮಾನವು ರಕ್ಷಣಾ ಕಾರ್ಯಕ್ಕೆ ತೀವ್ರ ಅಡಚಣೆ ಉಂಟುಮಾಡುತ್ತಿದ್ದು, ಎಲ್ಲರನ್ನೂ ಸುರಕ್ಷಿತವಾಗಿ ಕರೆತರಲು ನಮ್ಮ ಸರ್ಕಾರವು ಶಕ್ತಿಮೀರಿ ಪ್ರಯತ್ನಿಸುತ್ತಿದೆ” ಎಂದು ಹೇಳಿದ್ದಾರೆ.

“ಸಚಿವರಾದ ಕೃಷ್ಣ ಬೈರೇಗೌಡ ಅವರಿಗೆ ಇಂದೇ ಡೆಹ್ರಾಡೂನ್‌ಗೆ ತೆರಳಿ ರಕ್ಷಣಾ ಕಾರ್ಯದ ಉಸ್ತುವಾರಿ ವಹಿಸುವಂತೆ ಸೂಚಿಸಿದ್ದೇನೆ. ಸ್ಥಳೀಯವಾಗಿ ಲಭ್ಯವಿರುವ ಹೆಲಿಕಾಪ್ಟರ್‌ಗಳು ಹಾಗೂ ಸೇನಾ ಹೆಲಿಕಾಪ್ಟರ್ ಗಳನ್ನು ಬಳಕೆ ಮಾಡಿಕೊಂಡು ಅಪಾಯದಲ್ಲಿ ಸಿಲುಕಿರುವ ಕನ್ನಡಿಗರನ್ನು ಮರಳಿ ಗೂಡು ಸೇರಿಸಲಾಗುವುದು” ಎಂದು ಭರವಸೆ ನೀಡಿದ್ದಾರೆ.

Advertisements
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X