ಹರಿಯಾಣಕ್ಕೆ ಪೂರ್ವ ಸೂಚನೆ ನೀಡಿ ದೆಹಲಿಗೆ ತಕ್ಷಣ ನೀರು ಬಿಡುವಂತೆ ಹಿಮಾಚಲ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.
ತೀವ್ರ ಬೇಸಿಗೆ ಹಿನ್ನಲೆಯಲ್ಲಿ ನೀರಿನ ಅಭಾವ ಎದುರಿಸುತ್ತಿರುವ ದೆಹಲಿಯು ಹಿಮಾಚಲ ಪ್ರದೇಶದಿಂದ ಹೆಚ್ಚುವರಿ ನೀರನ್ನು ಪಡೆದುಕೊಳ್ಳಲಿದೆ. ಕಣಿವೆ ರಾಜ್ಯವು ಕಡ್ಡಾಯವಾಗಿ 125 ಕ್ಯೂಸೆಕ್ಸ್ ಹೆಚ್ಚುವರಿ ನೀರನ್ನು ಪಡೆಯಲಿದೆ ಎಂದು ಸುಪ್ರೀಂ ಕೋರ್ಟ್ ಇಂದು ಆದೇಶಿಸಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಿತ್ರಪಕ್ಷಗಳಿಗೆ ಮಣಿಯುವರೇ ಅಥವಾ ‘ಆಪರೇಷನ್ ಕಮಲ’ಕ್ಕೆ ಶರಣಾಗುವರೇ?
ನೀರಿನ ವಿಚಾರದಲ್ಲಿ ಯಾವುದೇ ರಾಜಕೀಯ ಮಾಡಬೇಡಿ ಎಂದು ಬೇಸಿಗೆಕಾಲದ ಪೀಠದ ನ್ಯಾಯಾಧೀಶರಾದ ಪ್ರಶಾಂತ್ ಕೆ ಮಿಶ್ರಾ ಮತ್ತು ಕೆ ವಿ ವಿಶ್ವನಾಥನ್ ಆದೇಶಿಸಿದ್ದಾರೆ.
ದೆಹಲಿಗೆ ನೀರು ಹರಿಸಲು ತಮ್ಮದು ಯಾವುದೇ ಅಭ್ಯಂತರವಿಲ್ಲ ಎಂದು ಹಿಮಾಚಲ ಪ್ರದೇಶ ತಿಳಿಸಿದೆ. ಹಿಮಾಚಲದಿಂದ ಬಿಡುಗಡೆಯಾಗುವ ನೀರನ್ನು ಪ್ರತ್ಯೇಕಗೊಳಿಸಿ ದೆಹಲಿಗೆ ಹರಿಸಲು ಯಾವುದೇ ಯಾಂತ್ರಿಕ ಮಾನದಂಡಗಳಿಲ್ಲ ಎಂದು ಹರಿಯಾಣ ತಿಳಿಸಿದೆ.
ರಾಷ್ಟ್ರ ರಾಜಧಾನಿ ನೀರಿನ ಸಮಸ್ಯೆಯಿಂದ ತತ್ತರಿಸುತ್ತಿರುವ ಕಾರಣ ಹರಿಯಾಣ ಸರ್ಕಾರಕ್ಕೆ ತುರ್ತಾಗಿ ನೀರು ಹರಿಸಲು ನಿರ್ದೇಶಿಸುವಂತೆ ದೆಹಲಿ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು.
ತೀವ್ರ ಬಿಸಿಲಿನ ಪರಿಣಾಮಗಳಿಂದಾಗಿ ನಗರದಲ್ಲಿ ನೀರಿನ ಬೇಡಿಕೆ ಗಮನಾರ್ಹವಾಗಿ ಹೆಚ್ಚಾಗಿದೆ. ನೆರೆಯ ರಾಜ್ಯ ಹರಿಯಾಣಕ್ಕೆ ಒಂದು ತಿಂಗಳು ಹೆಚ್ಚುವರಿ ನೀರು ಹರಿಸಲು ನಿರ್ದೇಶಿಸುವಂತೆ ಆಪ್ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.
ದೆಹಲಿಯ ನೀರಿನ ಅಗತ್ಯತೆಗಳನ್ನು ಪರಿಪೂರ್ಣಗೊಳಿಸುವುದು ಎಲ್ಲರ ಜವಾಬ್ದಾರಿಯಾಗಿದೆ. ಇದೇ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯು ತೀವ್ರ ಬಿಸಿಲಿನಿಂದಾಗಿ ನೀರಿನ ಕೊರತೆಯನ್ನು ಅನುಭವಿಸುತ್ತಿದೆ ಎಂದು ದೆಹಲಿ ಸರ್ಕಾರ ಕೋರ್ಟ್‌ಗೆ ತಿಳಿಸಿತ್ತು.