ಬಿಟ್ ಕಾಯಿನ್ ಹಗರಣ | ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ ಎಸ್​ಐಟಿ

Date:

Advertisements

ಬಿಟ್ ಕಾಯಿನ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಇದೀಗ, ಎಸ್‌ಐಟಿ ಮೊದಲನೇ ಎಸಿಎಂಎಂ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ.

ಕೆಜಿ ನಗರ ಡ್ರಗ್ಸ್ ಕೇಸ್ನಲ್ಲಿ ಶ್ರೀಕಿ, ರಾಬಿನ್ ಖಂಡೇವಾಲ ಹಾಗೂ ಸುನೀಶ್ ಹೆಗ್ಡೆ ಸೇರಿ ಒಟ್ಟು 6 ಜನರ ವಿರುದ್ಧ ಜೂ.6ರಂದು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ.

ಎಸ್‌ಐಟಿ ಮೂರು ಎಫ್‌ಐಆರ್‌ಗಳನ್ನು ತನಿಖೆ ನಡೆಸುತ್ತಿತ್ತು. ಮೊದಲಿಗೆ ಡ್ರಗ್ಸ್‌ ಪ್ರಕರಣ ಬಂದಿತ್ತು. ಆ ಕುರಿತು ತನಿಖೆ ನಡೆಸಿದಾಗ ಬಿಟ್ ಕಾಯಿನ್ ಹಗರಣ ಬೆಳಕಿಗೆ ಬಂದಿತ್ತು.

Advertisements

2015ರಲ್ಲಿ ಬೆಂಗಳೂರಿನ ಕೆಂಪೇಗೌಡನಗರ ಪೊಲೀಸ್ ಠಾಣೆಯಲ್ಲಿ ಡ್ರಗ್ಸ್‌ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಕಿಯನ್ನು ಪೊಲೀಸರು ಬಂಧನ ಮಾಡಿದ್ದರು. ಅದರಂತೆ 2020ರಲ್ಲಿ ಸುಮಾರು ಸಾವಿರ ಕೋಟಿ ಹಗರಣದ ಬಿಟ್ಕಾಯಿನ್ ಪ್ರಕರಣದಲ್ಲಿ ಶ್ರೀಕಿ ಬಂಧನವಾಗಿತ್ತು.

ಈ ಸುದ್ದಿ ಓದಿದ್ದೀರಾ? ಬಿಜೆಪಿಯಿಂದ ಮಾನನಷ್ಟ ಪ್ರಕರಣ: ನಾಳೆ ಬೆಂಗಳೂರಿನ ಸಿವಿಲ್ ಕೋರ್ಟ್‌ಗೆ ರಾಹುಲ್ ಗಾಂಧಿ ಹಾಜರು

ಕಳೆದ ಐದಾರು ವರ್ಷಗಳಿಂದ ನಾನಾ ಕ್ರಿಪ್ಟೋ ಕರೆನ್ಸಿ ಮಾರಾಟ ಪ್ಲಾಟ್‌ಫಾರ್ಮ್‌ಗಳನ್ನು ಆರೋಪಿ ಶ್ರೀಕಿ ಹ್ಯಾಕ್ ಮಾಡಿ ಅವುಗಳಿಂದ ಸಾವಿರಾರು ಬಿಟ್‌ ಕಾಯಿನ್‌ಗಳನ್ನು ಎಗರಿಸಿದ್ದನು. ರಾಜ್ಯ ಸರ್ಕಾರದ ಸಂಗ್ರಹಣಾ ಪೋರ್ಟಲ್ಜಾಲತಾಣವನ್ನು ಹ್ಯಾಕ್ಮಾಡಿದ್ದನು. ಸಿಸಿಬಿ ಪೊಲೀಸರು ಈ ಪ್ರಕರಣವನ್ನು ತನಿಖೆ ನಡೆಸಿ, ಆರೋಪಿಯನ್ನು ಬಂಧಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

Download Eedina App Android / iOS

X