ಚಿಕ್ಕಬಳ್ಳಾಪುರ ಗೌರಿಬಿದನೂರು ತಾಲ್ಲೂಕಿನ ವಾಟದಹೊಸಹಳ್ಳಿ ಬಳಿ ಗುರುವಾರ ನಡುರಾತ್ರಿ ಸಂಭವಿಸಿದ ಅಪಘಾತದಲ್ಲಿ ಮೂವರು ಬೆಸ್ಕಾಂ ಸಿಬ್ಬಂದಿ ಮೃತಪಟ್ಟಿದ್ದಾರೆ.
ವಾಟದಹೊಸಹಳ್ಳಿ ಉಪವಿದ್ಯುತ್ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೇಣುಗೋಪಾಲ್, ಮಂಜುನಾಥ್, ಶ್ರೀಧರ್ ಮೃತರು. ಶಿವಕುಮಾರ್ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜನರೊಂದಿಗೆ ನೊಂದು ಬೆಂದು ಬಂಗಾರವಾದ ರಾಹುಲ್ ಗಾಂಧಿ
ಕಾರಿನಲ್ಲಿ ಈ ನಾಲ್ಕು ಮಂದಿ ನಗರಗೆರೆಯಿಂದ ವಾಟದ ಹೊಸಹಳ್ಳಿ ಉಪವಿದ್ಯುತ್ ಕೇಂದ್ರಕ್ಕೆ ಬರುತ್ತಿದ್ದರು. ಗ್ರಾಮದ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದಿದೆ. ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಗೌರಿಬಿದನೂರು ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ
