‌ಧಾರವಾಡ | ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ: ಹರೀಶ್ ಕೆಂಚಣ್ಣವರ

Date:

Advertisements

ಪರಿಸರ ನಮ್ಮ ಬದುಕಿನ ಅವಿಭಾಜ್ಯ ಅಂಗ. ಅದನ್ನು ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಹೊಣೆ ಎಂದು ಮೇರು ಐಎಎಸ್ ಮತ್ತು ಕೆಎಎಸ್ ಸ್ಟಡಿ ಸೆಂಟರ್‌ನ ತರಬೇತುದಾರ ಹರೀಶ್‌ ಕೆಂಚಣ್ಣನವರು ಅಭಿಪ್ರಾಯಪಟ್ಟರು.

ಧಾರವಾಡದ ಅಂಜುಮನ್ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಧಾರವಾಡದಲ್ಲಿ ವಿಶ್ವ ಪರಿಸರ ದಿನವನ್ನು ಉದ್ದೇಶಿಸಿ ಮಾತನಾಡಿದರು.

“ಮೊಟ್ಟಮೊದಲ ಬಾರಿಗೆ 1972 ಜೂನ್ 5ರಂದು ನಡೆದ ಯುನೈಟೆಡ್ ನೇಷನ್ ಕಾನ್ಫರೆನ್ಸ್ ಎನ್ವಿರಾನ್ವೆಂಟ್ ಸಭೆಯ ನಿಮಿತ್ತ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಪ್ರತಿ ವರ್ಷವೂ ಪರಿಸರ ದಿನಾಚರಣೆಯನ್ನು ಅದರ ಧ್ಯೇಯ ವಾಕ್ಯದೊಂದಿಗೆ ಆಚರಿಸುತ್ತಾ ಬರುವುದು, “Land Restoration, Desertification, and Drought Resilience.” ಪರಿಸರ ಎಂಬ ಪದವನ್ನು ಮೊಟ್ಟಮೊದಲ ಬಾರಿಗೆ ವಿಲಿಯಂ ಕಾರ್ಲೈಲ್ ಎಂಬ ವಿಜ್ಞಾನಿ ಬಳಸಿದನು” ಎಂದು ತಿಳಿಸಿದರು.

Advertisements

ಪರಿಸರ ದಿನ 1 1

“ಮನೆಗೆ ಮಗಳು ನೆರಳಾದರೆ, ಧರೆಗೆ ಮರಗಳು ನೆರಳಾಗುತ್ತವೆ ಎಂಬ ವ್ಯಾಕರಣ ಮನದಲ್ಲಿಟ್ಟುಕೊಂಡು ಪರಿಸರವನ್ನು ಸಂರಕ್ಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. 2015ರ ಪ್ಯಾರಿಸ್ ಒಪ್ಪಂದವನ್ನು ನಾವು ಬದ್ಧವಾಗಿ ನೋಡಿಕೊಳ್ಳಬೇಕು. ಸಾಧ್ಯವಾದಷ್ಟು ಪರಿಸರದ ಜಾಗೃತಿಯ ಬಗ್ಗೆ ಯುವಜನರಲ್ಲಿ ಶಿಕ್ಷಣ ಮೂಡಿಸಬೇಕು” ಎಂದರು.

“ರಾಷ್ಟ್ರೀಯ ಪರಿಸರ ನೀತಿ, ಪರಿಸರ ಸಂರಕ್ಷಣಾ ಕಾಯ್ದೆ, ವನ್ಯಜೀವಿ ಸಂರಕ್ಷಣಾ ಕಾಯ್ದೆ, ರಾಷ್ಟ್ರೀಯ ಅರಣ್ಯ ನೀತಿ ಮುಂತಾದ ಪರಿಸರ ಸಂಬಂಧಿತ ಕಾಯಿದೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು” ಎಂದು ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ಉಪನ್ಯಾಸ ನೀಡಿದರು.

ಪರಿಸರ ದಿನಾಚರಣೆ

ಕಾರ್ಯಕ್ರಮದ ಅಧ್ಯಕ್ಷತೆ ಸ್ಥಾನವನ್ನು ಅಲಂಕರಿಸಿದ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎನ್ ಎಮ್ ಮಕಾಂದಾರ ಮಾತನಾಡಿ, “ಪ್ರತಿಯೊಬ್ಬರ ಜೀವನ ಎಷ್ಟು ಮುಖ್ಯವೋ ಪರಿಸರವೂ ಅಷ್ಟೇ ಮುಖ್ಯ. ಪ್ರತಿಯೊಬ್ಬ ವಿದ್ಯಾರ್ಥಿಗಳು ಪ್ರತಿ ವರ್ಷ ಒಂದೊಂದು ಸಸಿ ನೆಟ್ಟರೆ ಬಹುಶಃ ಪರಿಸರ ದಿನಾಚರಣೆ ಆಚರಣೆ ಮಾಡಿದ್ದಕ್ಕೂ ಸಾರ್ಥಕವಾಗುತ್ತದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಕಾಮುಕ ಪ್ರೇಮಿಯಿಂದ ಪ್ರೇಯಸಿ ಮೇಲೆ ನಿರಂತರ ಅತ್ಯಾಚಾರ

ಈ ಕಾರ್ಯಕ್ರಮದಲ್ಲಿ ಡಾ. ಐ ಎ ಮುಲ್ಲಾ, ಡಾ ಎನ್ ಬಿ ನಾಲತವಾಡ, ಡಾ ರಾಹುತುನಿಸಾ, ಡಾ. ಎ ಎಸ್ ಬೆಳ್ಳಾರಿ ಹಾಗೂ ಮಹಾವಿದ್ಯಾಲಯದ ಎಲ್ಲ ವಿದ್ಯಾರ್ಥಿ-ವಿದ್ಯಾರ್ಥಿನಿಯರು, ಪ್ರಾಧ್ಯಾಪಕರು ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X