ಕರ್ನಾಟಕ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾಗಿ ನಿವೃತ್ತ ಐಜಿಪಿ ಯು ನಿಸಾರ್ ಅಹ್ಮದ್

Date:

Advertisements

ಇತ್ತೀಚೆಗಷ್ಟೇ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರ ಹುದ್ದೆಯಿಂದ ವಿಧಾನ ಪರಿಷತ್‌ನ ಮಾಜಿ ಸದಸ್ಯ ಅಬ್ದುಲ್ ಅಝೀಮ್ ಅವರ ನಾಮ ನಿರ್ದೇಶನವನ್ನು ರಾಜ್ಯ ಸರ್ಕಾರವು ಹಿಂಪಡೆದಿತ್ತು. ಈ ಕ್ರಮವನ್ನು ಹೈಕೋರ್ಟ್ ಕೂಡ ಎತ್ತಿ ಹಿಡಿದಿತ್ತು. ಈಗ ತೆರವಾಗಿರುವ ಅಧ್ಯಕ್ಷರ ಸ್ಥಾನಕ್ಕೆ ನಿವೃತ್ತ ಐಜಿಪಿ ಯು ನಿಸಾರ್ ಅಹ್ಮದ್ ಅವರನ್ನು ನಾಮನಿರ್ದೇಶನಗೊಳಿಸಿ ಆದೇಶ ಹೊರಡಿಸಿದೆ.

ಈ ಸಂಬಂಧ  ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಾಗರಾಜ್ ಅವರು ಜೂನ್ 7ರಂದು ಅಧಿಸೂಚನೆ ಹೊರಡಿಸಿದ್ದಾರೆ.

ಈ ಅಧಿಸೂಚನೆಯಲ್ಲಿ, “ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಕಾಯ್ದೆ 1994 ರ ಸೆಕ್ಷನ್ 3(1) ಮತ್ತು 4(1) ರ ಅಡಿಯಲ್ಲಿ ಸರ್ಕಾರಕ್ಕೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ನಿವೃತ್ತ ಐಜಿಪಿ ಯು. ನಿಸಾರ್ ಅಹ್ಮದ್, ಬೆಂಗಳೂರು ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರನ್ನಾಗಿ ನಾಮನಿರ್ದೇಶನಗೊಳಿಸಲಾಗಿದೆ” ಎಂದು ಉಲ್ಲೇಖಿಸಿದ್ದಾರೆ.

Advertisements

ಯು. ನಿಸಾರ್ ಅಹ್ಮದ್ ಪರಿಚಯ

ಯು ನಿಸಾರ್ ಅಹ್ಮದ್ ಅವರು ಕರ್ನಾಟಕದಲ್ಲಿ 2012ರಲ್ಲಿ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್( ಐಜಿಪಿ) ಆಗಿ ಸೇವೆ ಸಲ್ಲಿಸಿದ ಬಳಿಕ ನಿವೃತ್ತಿ ಹೊಂದಿದ್ದರು. ಅದಕ್ಕೂ ಮೊದಲು 2007ರಿಂದ 2011ರವರೆಗೆ ಬೆಂಗಳೂರು ನಗರದಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು.

ನಿವೃತ್ತರಾದ ಬಳಿಕ ಬೆಂಗಳೂರಿನಲ್ಲೇ ನೆಲೆಸಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಯು. ನಿಸಾರ್ ಅಹ್ಮದ್ ಅವರು, ನ್ಯಾಷನಲ್ ಸೆಂಟರ್ ಫಾರ್ ರಿಸರ್ಚ್ ಆ್ಯಂಡ್ ಡೆವಲಪ್‌ಮೆಂಟ್ ಎಂಬ ಸಂಸ್ಥೆಯನ್ನು ಹುಟ್ಟು ಹಾಕಿದ್ದಾರೆ. ಈ ಸಂಸ್ಥೆಯ ಮೂಲಕ ಸ್ಲಮ್‌ಗಳಲ್ಲಿ ವಾಸಿಸುತ್ತಿರುವ ಜನರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಮುಟ್ಟಿಸುವ ಕಾರ್ಯ ಮಾಡುತ್ತಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಕಳವಳ ವ್ಯಕ್ತಪಡಿಸಿದ ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್

ಬಿಹಾರದಲ್ಲಿ ನಡೆದ ಮತದಾರರ ಪಟ್ಟಿ ಪರಿಷ್ಕರಣೆ(SIR) ಬಗ್ಗೆ ನೊಬೆಲ್ ಪ್ರಶಸ್ತಿ ವಿಜೇತ...

ಕರಾವಳಿಯಲ್ಲಿ ಉದ್ಯೋಗ ಸೃಷ್ಟಿ, ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ: ಡಿಸಿಎಂ ಡಿ ಕೆ ಶಿವಕುಮಾರ್

"ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಹಾಗೂ ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ...

ಚಿತ್ರದುರ್ಗ | ಚಳ್ಳಕೆರೆ ನಗರದಲ್ಲಿ ರಸ್ತೆ ಗುಂಡಿಗಳ ಪೂಜೆ; ಕರ್ನಾಟಕ ರಾಷ್ಟ್ರ ಸಮಿತಿಯಿಂದ ವಿನೂತನ ಪ್ರತಿಭಟನೆ

ಚಳ್ಳಕೆರೆ ನಗರದ ಬಹುತೇಕ ವಾರ್ಡುಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ, ಅಲ್ಲದೆ ತಾಲೂಕಿನ...

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

Download Eedina App Android / iOS

X