ಕಲಬುರಗಿ | ಬಿತ್ತನೆ ಬೀಜ, ರಸಗೊಬ್ಬರಗಳ ದರ ಇಳಿಸುವಂತೆ ಕೆಪಿಆರ್‌ಎಸ್‌ ಆಗ್ರಹ

Date:

Advertisements

ಬಿತ್ತನೆ ಬೀಜ, ರಸಗೊಬ್ಬರ ಬೆಲೆ ಇಳಿಸಲು ಹಾಗೂ ನಕಲಿ ಕಳಪೆ ಮಾರಾಟ ತಡೆಗಟ್ಟಲು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದಿಂದ ಡಾ ಬಿ ಆರ್ ಅಂಬೇಡ್ಕರ್ ಸರ್ಕಲ್‌ನಲ್ಲಿ ರಸ್ತೆ ತಡೆದು ಪ್ರತಿಭಟನೆ ಮಾಡುವುದರ ಮೂಲಕ ತಹಶೀಲ್ದಾರ್‌ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ಕೆಪಿಆರ್‌ಎಸ್‌ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ  ಮಾತನಾಡಿ, “ಕಳಪೆ ಹಾಗೂ ನಕಲಿ ಬಿತ್ತನೆ ಬೀಜ, ರಸಗೊಬ್ಬರಗಳ ಮಾರಾಟವನ್ನು ತಡೆಗಟ್ಟಲು ಕೃತಕ ಅಭಾವ ಸೃಷ್ಟಿಸಿ ಕಾಳಸಂತೆ ಮಾರಾಟದ ವಿರುದ್ಧ ಕಠಿಣ ಕ್ರಮ ವಹಿಸಬೇಕು” ಎಂದು ಒತ್ತಾಯಿಸಿದರು.

“ಬಲವಂತದ ಸಾಲ ವಸೂಲಾತಿ ನಿಲ್ಲಬೇಕು. ಬರ ಪರಿಹಾರದ ಹಣವನ್ನು ಸಾಲಕ್ಕೆ ಕಡಿತ ಮಾಡಿಕೊಳ್ಳಬಾರದು. ಬರಪರಿಹಾರದ ಹಣ ಸಾಲಕ್ಕೆ ವಜಾ ಆಗಿರುವುದನ್ನು ಅಂತಹ ರೈತರ ಖಾತೆಗೆ ಹಣ ಮರಳಿಸಲು ಕ್ರಮ ಕೈಗೊಳ್ಳಬೇಕು ಹಾಗೂ ರೈತರ ಆತ್ಮಹತ್ಯೆ ತಡೆಗಟ್ಟಬೇಕು. ಕೃಷಿ ಚಟುವಟಿಕೆಗಳಿಗೆ ಅಗತ್ಯ ಬೆಂಬಲ ಒದಗಿಸಬೇಕು. ಬೆಳೆ ವಿಮೆ ಪರಿಹಾರ ಇತ್ಯರ್ಥಕ್ಕೆ ಕ್ರಮ ವಹಿಸಬೇಕು ಎಂದು ರಾಜ್ಯ, ಕೇಂದ್ರ ಸರ್ಕಾರಗಳನ್ನು ಆಗ್ರಹಿಸಿ ರೈತ ಸಂಘ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದೆ.

Advertisements

“ಕಳೆದ ವರ್ಷ ಶತಮಾನದಲ್ಲೇ ಕಂಡರಿಯದ ಭೀಕರ ಬರಗಾಲವನ್ನು ರಾಜ್ಯ ಅನುಭವಿಸಿತ್ತು. ಯಾವುದೇ ಅರ್ಥಪೂರ್ಣ ಬರಪರಿಹಾರ ಕ್ರಮಗಳಿಲ್ಲದೇ ದೊಡ್ಡ ಪ್ರಮಾಣದ ಸಂಕಷ್ಟಕ್ಕೆ ಸಿಲುಕಿ ನರಳುತ್ತಿರುವ ರೈತಾಪಿ ಸಮುದಾಯವನ್ನು ಬಿತ್ತನೆ ಬೀಜ, ರಸಗೊಬ್ಬರ ಬೆಲೆಗಳ ಏರಿಕೆಯಿಂದ ಗಾಯದ ಮೇಲೆ ಬರೆ ಎಳೆದಂತಾಗಿದೆ. ಈ ಕೂಡಲೇ ಕೃಷಿ ಸಲಕರಣೆಗಳ ಬೆಲೆಗಳನ್ನು ಇಳಿಸಬೇಕು. ಉತ್ತಮ ಮಳೆಯ ನಿರೀಕ್ಷೆಯಲ್ಲಿ ಕೃಷಿ ಚಟುವಟಿಕೆಗಳನ್ನು ನಡೆಸುವ ರೈತರನ್ನು ಬೀಜ, ಗೊಬ್ಬರದ ವ್ಯಾಪಾರಿಗಳು ಶೋಷಣೆ ಮಾಡದಂತೆ ರಕ್ಷಣೆ ಒದಗಿಸಬೇಕು” ಎಂದು ಕಲಬುರಗಿ ಜಿಲ್ಲಾ ಕರ್ನಾಟಕ ಪ್ರಾಂತ ರೈತ ಸಂಘ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ಆಗ್ರಹಿಸಿದೆ.

“ಕೃತಕ ಅಭಾವ ಸೃಷ್ಟಿಸಿ, ಕಾಳಸಂತೆ ಮಾರಾಟವನ್ನು ತಡೆಗಟ್ಟಬೇಕು, ಬಲವಂತದ ಸಾಲವಸೂಲಾತಿ ವಿರುದ್ಧ ರೈತರಿಗೆ ರಕ್ಷಣೆ ಒದಗಿಸಬೇಕು. ರಾಜ್ಯಾದ್ಯಂತ ನಡೆಯುತ್ತಿರುವ ವ್ಯಾಪಕ ರೈತ ಆತ್ಮಹತ್ಯೆಯನ್ನು ತಡೆಗಟ್ಟಲು ಅಗತ್ಯ ಕ್ರಮ ವಹಿಸಬೇಕು” ಎಂದು ಒತ್ತಾಯಿಸಿ ಮನವಿ ಪತ್ರ ಸಲ್ಲಿಸಿದರು.

“ಬೆಣ್ಣೆ ತೊರಾ ಜಲಾಶಯ ಮತ್ತು ಗಂಡೊರಿ ನಾಲಾ ಜಲಾಶಯ ಮೂಲಕ ನೀರು ಹರಿಸುವ ಮೆನ್ ಕ್ಯಾನಲ್ ಕಾಲುವೆಗೆ ಎಕರೆ, ಗುಂಟೆ ಜಮೀನು ಕಳೆದುಕೊಂಡಿರುವ ರೈತರನ್ನು ಹೊರತುಪಡಿಸಿ, ಕ್ಯಾನಲ್ ಕಾಲುವೆಗೆ ಸಂಬಂಧ ಇರದ ರೈತರ ಜಮೀನುಗಳೂ ಕೂಡ ಪಹಣಿಯಲ್ಲಿ ಇದೆ. ಇಂತಹ ಜಮೀನಿನ ರೈತರ ಹೆಸರುಗಳನ್ನು ತೆಗೆಯಬೇಕು. ಸಂತ್ರಸ್ತ ರೈತರಿಗೆ ಅನ್ಯಾಯ ಮಾಡಿದ ಜಮೀನು ಸರ್ವೇ ಅಧಿಕಾರಿಗಳು, ಇದಕ್ಕೆ ಸಂಬಂಧಿಸಿದ ನೀರಾವರಿ ಅಧಿಕಾರಿಗಳು ಹಾಗೂ ಕಂದಾಯ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರಗಿಸಿ ಅನ್ಯಾಯಕ್ಕೆ ಒಳಗಾದ ರೈತರ ಪಹಣಿಯಲ್ಲಿ ತೆಗೆದ ಜಮೀನು ರೈತರಿಗೆ ಸರಿಪಡಿಸಿ ಕೊಡಬೇಕು” ಎಂದು ಆಗ್ರಹಿಸಿದರು.

“ಉದ್ಯೋಗ ಖಾತ್ರಿ ಯೋಜನೆಯ ಅಡಿಯಲ್ಲಿ ಕೆಲಸ ಮಾಡಿದ ಕೂಲಿಕಾರರಿಗೆ ಸರಿಯಾದ ಸಮಯಕ್ಕೆ ವೇತನ ಕೊಡಬೇಕು ಮತ್ತು ಉದ್ಯೋಗ ಖಾತ್ರಿ ಯೋಜನೆಯ ಅಡಿಯಲ್ಲಿ ಕೆಲಸ ಕೇಳಿದ ಕೂಲಿಕಾರರಿಗೆ ಸರಿಯಾದ ಸಮಯಕ್ಕೆ ಕೆಲಸ ಕೊಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಬಿತ್ತನೆ ಬೀಜದ ದರ ಏರಿಕೆಗೆ ಖಂಡನೆ; ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ

“ನೀರಾವರಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸಂಪರ್ಕ, ಮೀಟರ್ ಆರ್ ಆರ್ ನಂಬರ್ ನೊಂದಾಯಿಸುವುದು ತಡೆಹಿಡಿದು ವಿದ್ಯುತ್ ಕಲ್ಪಿಸುವ ಅಕ್ರಮ ಸಕ್ರಮ ರದ್ದು ಮಾಡಿ ಪಂಪ್‌ಸೆಟ್‌ಗೆ ರೈತರ ಹಣ ಕಟ್ಟಿ ಕಂಬ, ವೈಯರ್‌ ಮತ್ತು ಟಿಸಿ(ಟ್ರಾನ್ಸ್ ಫಾರ್ಮ್‌) ಕೂಡಿಸುವಂತಹ ರೈತ ವಿರೋಧಿ ಆದೇಶ ಹಿಂಪಡೆಯಬೇಕು. ಮೊದಲಿನಂತೆ ಪಂಪ್‌ಸೆಟ್‌ಗಳಿಗೆ ಸರಳವಾಗಿ ವಿದ್ಯುತ್ ಸಂಪರ್ಕ ಒದಗಿಸಬೇಕು” ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಪರಮೇಶ್ವರ ಕಾಂತಾ, ದಿಲೀಪ್ ನಾಗೂರೆ, ಸಿದ್ದಪ್ಪಾ ಕಲಸೆಟ್ಟಿ, ತುಳಜಪ್ಪಾ ಮೊಘಾ, ಗುಂಡಪ್ಪ ಅರಣಕಲ್ ಸೇರಿದಂತೆ ಇತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

Download Eedina App Android / iOS

X