ಅಹಿಂದ ಟೀಮ್ ಮತ್ತು ಸಿದ್ದರಾಮಯ್ಯ ಸೇರಿ ಡಿ ಕೆ ಸುರೇಶ್ ಅವರನ್ನು ಸೋಲಿಸಿದ್ದಾರೆ ಎಂದು ಬಿಜೆಪಿ ಶಾಸಕ ಬಿ ಸುರೇಶ್ ಗೌಡ ಆರೋಪಿಸಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಕರ್ನಾಟಕ ರಾಜಕಾರಣದಲ್ಲಿ ಸಿದ್ದರಾಮಯ್ಯನವರೇ ಮುಂದುವರೆಯಬೇಕೆಂದು ಒಂದು ಅಹಿಂದ ಟೀಮ್ ಯಾವಾಗಲೂ ಕೆಲಸ ಮಾಡುತ್ತೆ. ಆ ಅಹಿಂದ ಟೀಮ್ ಮತ್ತು ಸಿದ್ದರಾಮಯ್ಯ ಸೇರಿ ಡಿ.ಕೆ ಸುರೇಶ್ ಅವರನ್ನು ಸೋಲಿಸಿದ್ದಾರೆ. ನಾನು ಹೇಳಿದ್ದೆ ಜಾರಕಿಹೊಳಿ, ಪರಮೇಶ್ವರ್, ರಾಜಣ್ಣ, ಸಿದ್ದರಾಮಯ್ಯ ಇಷ್ಟೂ ಮಂದಿ ನಾಯಕರು ಸೇರಿ ಡಿ ಕೆ ಸುರೇಶ್ ಅವರನ್ನು ಸೋಲಿಸುತ್ತಾರೆಂದು ಚುನಾವಣೆಯ ಮೊದಲೇ ಹೇಳಿದೆ. ಒಂದು ತಿಂಗಳ ಹಿಂದೆಯೇ ಹೇಳಿದ್ದೆ. ನಾನು ಹೇಳಿದ್ದೆ ರಿಪೀಟ್ ಆಗಿದೆ” ಎಂದರು.
“ಎರಡು ಲಕ್ಷ ಮತಗಳ ಅಂತರದಿಂದ ಸೋಲಿಸುತ್ತಾರೆಂದು ಹೇಳಿದ್ದೆ. ಅದಕ್ಕಿಂತ ಹೆಚ್ಚಿನ ಮತಗಳ ಅಂತರದಿಂದ ಸೋಲಿಸಿದ್ದಾರೆ. ಇದು ಸಂಚಿನ ಒಂದು ಭಾಗ. ಡಿ ಕೆ ಶಿವಕುಮಾರ್ ಅವರು ಮುಂದೆ ಮುಖ್ಯಮಂತ್ರಿ ಆಗಬಾರದು. ಅವರ ನೈತಿಕತೆ ಕುಸಿಯಬೇಕು ಎಂದು ಹೀಗೆ ಮಾಡಿದ್ದಾರೆ. ಡಿ ಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲ್ಲ, ಈ ಸರ್ಕಾರ ಉಳಿಯಲ್ಲ. ಇಲ್ಲಿಂದ ರಾಜಕೀಯ ಧ್ರುವೀಕರಣ ಪ್ರಾರಂಭವಾಗುತ್ತೆ” ಎಂದರು.
ಈ ಸುದ್ದಿ ಓದಿದ್ದೀರಾ? ವಿಜಯಪುರ | ಅಲ್ಪಸಂಖ್ಯಾತರ ಇಲಾಖೆಯ ಸಕಾಪ್ ರೋಜಾ ವಸತಿ ನಿಲಯದ ಅವ್ಯವಸ್ಥೆ ವಿರುದ್ಧ ಡಿವಿಪಿ ಆಗ್ರಹ
“ಕಾಂಗ್ರೆಸ್‌ನಲ್ಲಿ ಒಳಜಗಳ ಶುರುವಾಗುತ್ತೆ. ಈಗಾಗಲೇ ಬೆಳಗಾವಿಯಲ್ಲಿ ಕಿತ್ತಾಟ ಶುರುವಾಗಿದೆ.
ಇಲ್ಲಿ ಬೆಂಗಳೂರು ಗ್ರಾಮಾಂತರದ ಸೋಲಿನಿಂದ ಇಲ್ಲಿಯೂ ಕೂಡ ಜಗಳ ಶುರುವಾಗಿದೆ. 6 ತಿಂಗಳಲ್ಲಿ ಸರ್ಕಾರ ಪತನವಾಗುತ್ತೆ” ಎಂದು ಹೇಳಿದರು.
