ಬೆಂಗಳೂರು | ಕಾವೇರಿ ನೀರು ಪೂರೈಕೆ ಪುನಾರಂಭ; ಬಿಡಬ್ಲ್ಯುಎಸ್‌ಎಸ್‌ಬಿ

Date:

Advertisements

ಕಾವೇರಿ 5ನೇ ಹಂತದ ಕಾಮಗಾರಿ ಕೈಗೊಂಡ ಹಿನ್ನೆಲೆ, ಬೆಂಗಳೂರಿನಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಿತ್ತು. ಇದೀಗ ನೀರು ಪೂರೈಕೆ ಸಹಜ ಸ್ಥಿತಿಗೆ ಮರಳಿದೆ ಎಂದು ಬೆಂಗಳೂರು ಜಲಮಂಡಳಿ ತಿಳಿಸಿದೆ.

ಕಾವೇರಿ 5ನೇ ಹಂತದ ಕಾಮಗಾರಿ ಕೈಗೊಂಡ ಹಿನ್ನೆಲೆಯಲ್ಲಿ ಗುರುವಾರ ಇಡೀ ನಗರಕ್ಕೆ ಕಾವೇರಿ ನೀರಿನ ಸರಬರಾಜು ಸ್ಥಗಿತಗೊಳಿಸಲಾಗಿತ್ತು. ಇದರಿಂದ ನಗರದಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಿತ್ತು. ಶುಕ್ರವಾರ ಮಧ್ಯಾಹ್ನದ ವೇಳೆಗೆ ನೀರಿನ ಪೂರೈಕೆ ಸಹಜ ಸ್ಥಿತಿಗೆ ಮರಳಿದೆ ಎಂದು ಜಲಮಂಡಳಿ ತಿಳಿಸಿದೆ.

220ಕೆವಿ ವಿದ್ಯುತ್ ಸರಬರಾಜು ಪಂಪಿಂಗ್ ಉಪಕೇಂದ್ರಕ್ಕೆ ವಿದ್ಯುತ್ ವೈರಿಂಗ್ ಅನ್ನು ಕೈಗೆತ್ತಿಕೊಂಡ ಬಿಡಬ್ಲೂಎಸ್‌ಎಸ್‌ಬಿ, 775 ಎಮ್‌ಎಲ್‌ಡಿ ನೀರನ್ನು ಪೂರೈಸುವ ಕಾವೇರಿ-ಹಂತ 5ರ ಪೂರ್ವ ನಿಯೋಜನೆ ಮತ್ತು ಕಾರ್ಯಾರಂಭದ ಕೆಲಸವನ್ನು ಪೂರ್ಣಗೊಳಿಸಿದೆ. ಕಾವೇರಿ 5ನೇ ಹಂತ ಜುಲೈನಲ್ಲಿ ಕಾರ್ಯಾರಂಭ ಮಾಡಲಿದೆ.

Advertisements

“ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಕಾಮಗಾರಿಗಳಲ್ಲದೆ, ವಾಜರಹಳ್ಳಿ, ವಸಂತಪುರ ಮತ್ತು ಕೊತ್ತನೂರು ದಿನ್ನೆ ಪ್ರದೇಶದಲ್ಲಿ ಬಲ್ಕ್ ಫ್ಲೋ ಮೀಟರ್ ಅಳವಡಿಕೆ, ಲಕ್ಕಸಂದ್ರ ಮೆಟ್ರೊ ನಿಲ್ದಾಣದ ಬಳಿ ದೊಡ್ಡ ನೀರಿನ ಪೈಪ್‌ಗಳಲ್ಲಿ ಸೋರಿಕೆ ತಡೆಯುವ ಕೆಲಸ, ಬಿಎಂಆರ್‌ಸಿಎಲ್‌ನ ಮಾರತ್ತಹಳ್ಳಿ ಸೇತುವೆ ಬಳಿ ದೊಡ್ಡ ಪೈಪ್‌ಗಳನ್ನು ಜೋಡಿಸುವ ಕಾರ್ಯವನ್ನು ಜೂನ್ 6 ಮತ್ತು 7ರಂದು ನಡೆಸಲಾಗಿದೆ” ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವ್ಯಕ್ತಿಯ ಹತ್ಯೆ; ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮೋರಿಗೆ ಎಸೆದು ಕ್ರೌರ್ಯ

ಕಾಮಗಾರಿ ಹಿನ್ನೆಲೆಯಲ್ಲಿ ಕಾವೇರಿ 1, 2, ಮತ್ತು 3ನೇ ಹಂತದ ನೀರು ಸರಬರಾಜು ಘಟಕವನ್ನು 12 ಗಂಟೆ ಕಾವೇರಿ 4ನೇ ಹಂತ, 1ನೇ, 2ನೇ ಘಟ್ಟಗಳ ನೀರು ಸರಬರಾಜು ಘಟಕಗಳನ್ನು 4 ಗಂಟೆ ಕಾಲ ಸ್ಥಗಿತಗೊಳಿಸಲಾಗಿತ್ತು.

ಇದೀಗ, ಕಾಮಗಾರಿ ಪೂರ್ಣಗೊಂಡಿದ್ದು, ಶನಿವಾರದಿಂದ ನೀರು ಪೂರೈಕೆ ಸಾಮಾನ್ಯವಾಗಿರಲಿದೆ. ಕಾವೇರಿ 5ನೇ ಹಂತ ಜುಲೈನಲ್ಲಿ ಕಾರ್ಯಾರಂಭ ಮಾಡಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X