ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎಸ್‌ಐಟಿ ತಂಡ ವಿಚಾರಣೆ ಒಳಪಡಿಸುತ್ತಿದೆ. ಶನಿವಾರ, ಪ್ರಜ್ವಲ್‌ನನ್ನು ಹಾಸನಕ್ಕೆ ಕರೆದೊಯ್ದಿದ್ದು, ಹೊಳೆನರಸೀಪುರದ ಚೆನ್ನಾಂಬಿಕಾ ನಿವಾಸದಲ್ಲಿ ಸ್ಥಳ ಮಹಜರು ನಡೆಸಿದೆ.
ಡಿವೈಎಸ್‍ಪಿ ಸತ್ಯನಾರಾಯಣ ನೇತೃತ್ವದಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಹೊಳೆನರಸೀಪುರಕ್ಕೆ ಕರೆದೊಯ್ಯಲಾಗಿತ್ತು. ಮಾಧ್ಯಮಗಳ ಕ್ಯಾಮೆರಾಗಳಿಗೆ ಕಾಣದಂತೆ ಪ್ರಜ್ವಲ್‌ನನ್ನು ಕರೆದೊಯ್ದು ಮಹಜರು ಮಾಡಲಾಗಿದೆ. ಆತನ ನಿವಾಸದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಎಸ್‍ಐಟಿ ಅಧಿಕಾರಿಗಳೊಂದಿಗೆ ಎಫ್‍ಎಸ್‍ಎಲ್ ಅಧಿಕಾರಿಗಳು ಕೂಡ ಮಾಹಿತಿ ಕಲೆಹಾಕಿದ್ದಾರೆ.
ಈ ವೇಳೆ, ಜೆಡಿಎಸ್ ಕಾರ್ಯಕರ್ತರು ಎಚ್.ಡಿ ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ, ಎಚ್.ಡಿ.ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಪರ ಘೋಷಣೆ ಕೂಗಿ ದಾಂಧಲೆ ನಡೆಸಿದ್ದಾರೆ.