ಮೋದಿ ಸಂಪುಟದಲ್ಲಿ ರಾಜ್ಯದ ಮೂವರು ಸಂಸದರಿಗೆ ಸ್ಥಾನ?; ಯಾರಿಗೆ ಒಲಿಯಲಿದೆ ಕೇಂದ್ರದ ಮಂತ್ರಿಗಿರಿ

Date:

Advertisements

ಮೂರನೇ ಅವಧಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅದಕ್ಕೂ ಮುನ್ನ, ಸಚಿವ ಸಂಪುಟದಲ್ಲಿ ಸ್ಥಾನ ಹಂಚಿಕೆಗಾಗಿ ಎನ್‌ಡಿಎ ಮಿತ್ರಪಕ್ಷಗಳೊಳಗೆ ಸಭೆ ಕೂಡ ನಡೆಯುತ್ತಿದೆ. ಮೋದಿ ಸಂಪುಟದಲ್ಲಿ ರಾಜ್ಯದ ಮೂವರು ಸಂಸದರಿಗೆ ಮಂತ್ರಿಗಿರಿ ದೊರೆಯಬಹುದು ಎಂದೂ ಹೇಳಲಾಗುತ್ತಿದೆ.

ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್‌ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದ್ದವು. ಮೈತ್ರಿಯಲ್ಲಿ ಬಿಜೆಪಿ 17 ಸ್ಥಾನಗಳನ್ನು, ಜೆಡಿಎಸ್‌ 2 ಸ್ಥಾನಗಳನ್ನು ಗೆದ್ದುಕೊಂಡಿದೆ. ಜೆಡಿಎಸ್‌ನಿಂದ ಸ್ಪರ್ಧಿಸಿ, ಸಂಸದರಾಗಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರಿಗೆ ಕೇಂದ್ರ ಮಂತ್ರಿಗಿರಿ ದೊರೆಯುವುದು ಖಚಿತ ಎಂದು ಹೇಳಲಾಗುತ್ತಿದೆ.

ಕುಮಾರಸ್ವಾಮಿ ಮಾತ್ರವಲ್ಲದೆ, ಬಿಜೆಪಿ ಸಂಸದರಾದ ಕೇಂದ್ರ ಮಾಜಿ ಸಚಿವ ಪ್ರಹ್ಲಾದ್​ ಜೋಶಿ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಜಗದೀಶ್​ ಶೆಟ್ಟರ್​, ರಾಜ್ಯ ಮಾಜಿ ಸಚಿವ ಗೋವಿಂದ ಕಾರಜೋಳ ಅಥವಾ ರಮೇಶ್​ ಜಿಗಜಿಣಗಿ ಅವರಲ್ಲಿ ಇಬ್ಬರಿಗೆ ಸಚಿವ ಸ್ಥಾನ ದೊರೆಯುವ ಸಾಧ್ಯತೆ ಇದೆ ಎಂದೂ ಹೇಳಲಾಗುತ್ತಿದೆ.

Advertisements

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಗೆದ್ದಿರುವ ಎಚ್‌.ಡಿ ಕುಮಾರಸ್ವಾಮಿ 3ನೇ ಬಾರಿಗೆ ಸಂಸತ್ತು ಪ್ರವೇಶಿಸಿದ್ದಾರೆ. ಈ ಹಿಂದೆ, ಕನಕಪುರ ಲೋಕಸಭಾ ಕ್ಷೇತ್ರ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ತಲಾ ಒಮ್ಮೆ ಗೆದ್ದು, ಸಂಸದರಾಗಿದ್ದರು. ಬಸವರಾಜ ಬೊಮ್ಮಾಯಿ ಮತ್ತು ಜಗದೀಶ್ ಶೆಟ್ಟರ್ ಇದೇ ಮೊದಲ ಬಾರಿಗೆ ಸಂಸತ್ತು ಪ್ರವೇಶಿಸುತ್ತಿದ್ದಾರೆ.

ಕುಮಾರಸ್ವಾಮಿ ಕೇಂದ್ರ ಸಚಿವರಾಗುತ್ತಾರೆ ಎಂದು ಬಿಜೆಪಿ ಸಂಸದ ಡಾ.ಮಂಜುನಾಥ್ ಖಚಿತಪಡಿಸಿದ್ದಾರೆ. ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಎ​ಚ್​.ಡಿ. ಕುಮಾರಸ್ವಾಮಿಯವರು ಸಚಿವರಾಗುತ್ತಿರುವುದು ಖುಷಿ ತಂದಿದೆ. ಜೆಡಿಎಸ್ ಪಕ್ಷದ ನಾಯಕರು, ಕಾರ್ಯಕರ್ತರಿಗೆ ಆತ್ಮವಿಶ್ವಾಸ ತುಂಬಿದೆ” ಎಂದಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ರಾಜ್ಯದ ಹಿತಾಸಕ್ತಿ ವಿಷಯ ಬಂದಾಗ ಇವರ್ಯಾರು ಕೆಲಸಕ್ಕೆ ಬಾರದವರು,, ಮುಖ್ಯವಾಗಿ ಧಾರವಾಡದ ಸಂಸದ ನಯಾಪೈಸೆ ಉಪಯೋಗ ಇಲ್ಲ,,, ಆದರೆ ಅವರಿಗೆ ಮೊದಲ ಆದ್ಯತೆ ಯಾಕೆಂದರೆ ಪಕ್ಷದ ಆಚಾರ್ಯರ ಗರ್ಭಗುಡಿಯ ಸದಸ್ಯರು,,ಉಳಿದ ಶೂದ್ರರಲ್ಲಿ ಆಯ್ಕೆಗೆ ಮಾನದಂಡಗಳನ್ನು ನೋಡುವರು

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X