ನೀಟ್ ಯುಜಿ ವೈದ್ಯಕೀಯ ಪ್ರವೇಶದ ವಿವಾದಗಳ ಬಗ್ಗೆ ಭಾನುವಾರ ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಮುನ್ನವೇ ಪರೀಕ್ಷೆಯಲ್ಲಿನ ‘ಅಕ್ರಮಗಳು’ 24 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ವಿನಾಶ ಮಾಡಿದೆ ಎಂದು ಆರೋಪಿಸಿದ್ದಾರೆ.
ಎಕ್ಸ್‌ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, “ಸಂಸತ್ತಿನಲ್ಲಿ ತಮ್ಮ ಧ್ವನಿಯಾಗುತ್ತೇನೆ ಮತ್ತು ಭವಿಷ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಬಲವಾಗಿ ಧ್ವನಿ ಎತ್ತುತ್ತೇನೆ” ಎಂದು ವಿದ್ಯಾರ್ಥಿಗಳಿಗೆ ಭರವಸೆ ನೀಡಿದರು.
नरेंद्र मोदी ने अभी शपथ भी नहीं ली है और NEET परीक्षा में हुई धांधली ने 24 लाख से अधिक स्टूडेंट्स और उनके परिवारों को तोड़ दिया है।
एक ही एग्जाम सेंटर से 6 छात्र मैक्सिमम मार्क्स के साथ टॉप कर जाते हैं, कितनों को ऐसे मार्क्स मिलते हैं जो टेक्निकली संभव ही नहीं है, लेकिन सरकार…
— Rahul Gandhi (@RahulGandhi) June 9, 2024
ಇದನ್ನು ಓದಿದ್ದೀರಾ? ಲೋಕಸಭೆಯ ವಿಪಕ್ಷ ನಾಯಕನಾಗಿ ರಾಹುಲ್ ಗಾಂಧಿ ಹೆಸರು ಅನುಮೋದಿಸಿದ ಕಾಂಗ್ರೆಸ್
“ನರೇಂದ್ರ ಮೋದಿ ಇನ್ನೂ ಪ್ರಮಾಣವಚನ ಸ್ವೀಕರಿಸಿಲ್ಲ ಮತ್ತು ನೀಟ್ ಪರೀಕ್ಷೆಯಲ್ಲಿನ ವಿವಾದ ವಂಚನೆ 24 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳನ್ನು ಧ್ವಂಸಗೊಳಿಸಿದೆ” ಎಂದು ಆರೋಪಿಸಿದರು.
“ಒಂದೇ ಪರೀಕ್ಷಾ ಕೇಂದ್ರದ 6 ವಿದ್ಯಾರ್ಥಿಗಳು ಗರಿಷ್ಠ ಅಂಕಗಳನ್ನು ಪಡೆದಿದ್ದಾರೆ. ತಾಂತ್ರಿಕವಾಗಿ ಸಾಧ್ಯವಾಗದ ಅಂಕಗಳು ಅದೆಷ್ಟೋ ಜನರಿಗೆ ಲಭಿಸಿದೆ. ಆದರೆ ಪತ್ರಿಕೆ ಸೋರಿಕೆಯ ಸಾಧ್ಯತೆಯನ್ನು ಸರ್ಕಾರ ನಿರಂತರವಾಗಿ ನಿರಾಕರಿಸುತ್ತಿದೆ” ಎಂದು ದೂರಿದರು.
ಇದನ್ನು ಓದಿದ್ದೀರಾ? ಜನರೊಂದಿಗೆ ನೊಂದು ಬೆಂದು ಬಂಗಾರವಾದ ರಾಹುಲ್ ಗಾಂಧಿ
“ಶಿಕ್ಷಣ ಮಾಫಿಯಾ ಮತ್ತು ಸರ್ಕಾರಿ ತಂತ್ರ ಶಾಮೀಲಾಗಿ ನಡೆಯುತ್ತಿರುವ ಈ ‘ಪೇಪರ್ ಲೀಕ್ ಉದ್ಯಮ’ವನ್ನು ಎದುರಿಸಲು ಕಾಂಗ್ರೆಸ್ ದೃಢವಾದ ಯೋಜನೆಯನ್ನು ರೂಪಿಸಿತ್ತು. ನಮ್ಮ ಪ್ರಣಾಳಿಕೆಯಲ್ಲಿ, ಕಾನೂನನ್ನು ಮಾಡುವ ಮೂಲಕ ವಿದ್ಯಾರ್ಥಿಗಳನ್ನು ಪೇಪರ್ ಸೋರಿಕೆಯಿಂದ ಮುಕ್ತಗೊಳಿಸಲು ನಾವು ನಿರ್ಧರಿಸಿದ್ದೆವು” ಎಂದು ಕೂಡಾ ರಾಹುಲ್ ಗಾಂಧಿ ತಿಳಿಸಿದರು
“ಇಂದು ನಾನು ದೇಶದ ಎಲ್ಲ ವಿದ್ಯಾರ್ಥಿಗಳ ಪರವಾಗಿ ಸಂಸತ್ತಿನಲ್ಲಿ ನಿಮ್ಮ ಧ್ವನಿಯಾಗುತ್ತೇನೆ. ನಿಮ್ಮ ಭವಿಷ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಬಲವಾಗಿ ಮಾತನಾಡುತ್ತೇನೆ. ಇಂಡಿಯಾ ಒಕ್ಕೂಟ ನಿಮ್ಮ ಧ್ವನಿಯನ್ನು ಹತ್ತಿಕ್ಕಲು ಬಿಡುವುದಿಲ್ಲ” ಎಂದು ವಿಶ್ವಾಸ ವ್ಯಕ್ತಪಡಿಸಿದರು.