ಮಹಾರಾಷ್ಟ್ರದ ಬೀಡ್ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಮತ ಹಾಕದ ಮರಾಠರ ಮೇಲೆ ಹಲ್ಲೆ ನಡೆಸುತ್ತಿರುವ ಕೆಲವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಹಾರಾಷ್ಟ್ರ ಗೃಹ ಸಚಿವ ದೇವೇಂದ್ರ ಫಡ್ನವೀಸ್ ಅವರನ್ನು ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜಾರಂಗೆ ಭಾನುವಾರ ಒತ್ತಾಯಿಸಿದ್ದಾರೆ.
ಅಂತರವಾಲಿ ಸಾರಥಿ ಗ್ರಾಮದಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹದ ಎರಡನೇ ದಿನದಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಇತ್ತೀಚೆಗೆ ಎನ್ಸಿಪಿ (ಎಸ್ಪಿ) ಅಭ್ಯರ್ಥಿ ಬಜರಂಗ ಸೋನಾವಣೆ ವಿರುದ್ಧ ಸೋತ ಬಿಜೆಪಿಯ ಪಂಕಜಾ ಮುಂಡೆ ಅವರಿಗೆ ಮತ ಹಾಕದ ಕಾರಣಕ್ಕೆ ಬೀಡ್ ಜಿಲ್ಲೆಯ ಕೆಲವು ಗ್ರಾಮಗಳಲ್ಲಿ ಮರಾಠಿಗರ ಮೇಲೆ ಹಲ್ಲೆ ನಡೆಸಲಾಗುತ್ತಿದೆ” ಎಂದು ಆರೋಪಿಸಿದರು.
ಇದನ್ನು ಓದಿದ್ದೀರಾ? ಲೋಕಸಭೆ ಚುನಾವಣೆ| ಬಿಜೆಪಿ ಸೋಲಿನ ಬಳಿಕ ಅಯೋಧ್ಯೆ ಜನರ ನಿಂದನೆ; ಕ್ರಮಕ್ಕೆ ಎಸ್ಪಿ ನಾಯಕ ಆಗ್ರಹ
ಇಂತಹ ಹಿಂಸಾಚಾರದ ವಿರುದ್ಧ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರು ಹಾಗೂ ಬೀಡಿನ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಮಾಡಿದ ಮನೋಜ್ ಜಾರಂಗೆ ಮರಾಠ ಯುವಕರು ಶಾಂತಿ ಮತ್ತು ಕೋಮು ಸೌಹಾರ್ದತೆ ಕಾಪಾಡುವಂತೆ ಮನವಿ ಮಾಡಿದರು.
ಮರಾಠಾ ಹಿತಾಸಕ್ತಿಗಳನ್ನು ವಿರೋಧಿಸುವ ನಾಯಕರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಇದರ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಇದೇ ಸಂದರ್ಭದಲ್ಲಿ ಎಚ್ಚರಿಕೆ ನೀಡಿದರು.
ಇದನ್ನು ಓದಿದ್ದೀರಾ? ಬೀದರ್ | ಮರಾಠಿಗರ ಒಗ್ಗಟ್ಟಿನ ಲಾಭ ರಾಜಕೀಯ ಪಕ್ಷಗಳು ಬಳಕೆ : ಮನೋಜ ಜರಾಂಗೇ ಪಾಟೀಲ್
ಮರಾಠಾ ಸಮುದಾಯದ ಎಲ್ಲರನ್ನು ಕುಂಬಿಗಳೆಂದು (ಕೃಷಿಕ ಗುಂಪು) ಗುರುತಿಸುವ ಕರಡು ಅಧಿಸೂಚನೆಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ, ಕುಂಬಿಗಳನ್ನು ಮರಾಠರೆಂದು ಗುರುತಿಸಲು ಕಾನೂನು ರೂಪಿಸಬೇಕೆಂದು ಒತ್ತಾಯಿಸಿ ಜಾರಂಗೆ ಶನಿವಾರ ಅನಿರ್ದಿಷ್ಟಾವಧಿ ಉಪವಾಸ ಆರಂಭಿಸಿದರು.
ಕೃಷಿಕ ಗುಂಪು ಕುಂಬಿ ಪ್ರಸ್ತುತ ಒಸಿಬಿ ವರ್ಗದ ಅಡಿಯಲ್ಲಿ ಬರುತ್ತದೆ. ಜಾರಂಗೆ ಮರಾಠರು ಕೋಟಾ ಪ್ರಯೋಜನಗಳಿಗೆ ಅರ್ಹರಾಗುವಂತೆ ಮಾಡಲು ಎಲ್ಲಾ ಮರಾಠಿಗರಿಗೆ ಕುಂಬಿ ಪ್ರಮಾಣಪತ್ರಗಳನ್ನು ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ.