ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಜತೆಗೆ 30 ಸಚಿವರು ಪ್ರಮಾಣ ವಚನ ಸ್ವೀಕರಿಸುವ ನಿರೀಕ್ಷೆಯಿದೆ. ಅಲ್ಲದೇ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಮೋದಿ ಅವರ ಸಂಪುಟದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದ್ದು, ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.
ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಜೆಪಿ ನಡ್ಡಾ ರಾಜೀನಾಮೆ ನೀಡಿದ್ದಾರೆ. ಅವರ ಅಧಿಕಾರಾವಧಿ ಇದೇ ತಿಂಗಳು ಮುಕ್ತಾಯಗೊಳ್ಳಲಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಜೆಪಿ ನಡ್ಡಾ ರಾಜೀನಾಮೆ ನೀಡಿದ್ದು, ಮುಂದೆ ಅವರ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಲಾಗುತ್ತದೆ ಎಂಬುವುದನ್ನು ಕಾದು ನೋಡಬೇಕಿದೆ.
ಜಗತ್ ಪ್ರಕಾಶ್ ನಡ್ಡಾ ಅವರು ನರೇಂದ್ರ ಮೋದಿ ಸರ್ಕಾರದಲ್ಲಿ ಸಚಿವರಾಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಗುಜರಾತ್ ಸಂಸದ ಸಿ.ಆರ್.ಪಾಟೀಲ್ ಕೂಡ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪ್ರಮಾಣ ವಚನ ಸ್ವೀಕರಿಸಲಿರುವ ನಾಯಕರ ತಾತ್ಕಾಲಿಕ ಪಟ್ಟಿಯಲ್ಲಿ ಜೆಡಿಎಸ್ ಮುಖಂಡ ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರ ಹೆಸರು ಕೇಳಿಬರುತ್ತಿದೆ.
ಹರಿಯಾಣದ ಮಾಜಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್, ತೆಲಂಗಾಣ ನಾಯಕರಾದ ಬಂಡಿ ಸಂಜಯ್ ಕುಮಾರ್ ಮತ್ತು ಕಿಶನ್ ಕುಮಾರ್ ರೆಡ್ಡಿ, ಪಂಜಾಬ್‌ನ ಬಿಜೆಪಿ ನಾಯಕ ರವನೀತ್ ಬಿಟ್ಟು ಇಂದು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.
ರಾಜಸ್ಥಾನದಿಂದ ಗಜೇಂದ್ರ ಸಿಂಗ್ ಶೇಖಾವತ್, ಜೆಡಿಯು ನಾಯಕರಾದ ಲಾಲನ್ ಸಿಂಗ್ ಮತ್ತು ರಾಮನಾಥ್ ಠಾಕೂರ್, ಮತ್ತು ಗಿರಿರಾಜ್ ಸಿಂಗ್ ಮತ್ತು ನಿತ್ಯಾನಂದ ರೈ ಕೂಡ ಇಂದು ಸಚಿವರಾಗಲಿದ್ದಾರೆ.
ಎಚ್‌ಎಎಂ ಮುಖ್ಯಸ್ಥ ಜಿತನ್ ರಾಮ್ ಮಾಂಝಿ, ಎಲ್‌ಜೆಪಿ ನಾಯಕ ಚಿರಾಗ್ ಪಾಸ್ವಾನ್, ಜಿತಿನ್ ಪ್ರಸಾದ ಮತ್ತು ಲಕ್ಷ್ಮೀಕಾಂತ್ ಬಾಜ್‌ಪೈ ಕೂಡ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕಿರಣ್ ರಿಜಿಜು ಕೂಡ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ.
ಕುಮಾರಸ್ವಾಮಿ ಅವರನ್ನು ಕೇಂದ್ರ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವುದು ದಕ್ಷಿಣದ ರಾಜ್ಯಗಳಲ್ಲಿ, ಅದರಲ್ಲೂ ನಿರ್ದಿಷ್ಟವಾಗಿ ಕರ್ನಾಟಕದಲ್ಲಿ ವಿಶೇಷವಾಗಿ ಒಕ್ಕಲಿಗ ಸಮುದಾಯದ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ಜೆಡಿಎಸ್ ಗಮನಾರ್ಹ ಬೆಂಬಲವನ್ನು ಹೊಂದಿದೆ. ಇದು ಬಿಜೆಪಿ ತನ್ನ ನೆಲೆಯನ್ನು ಬಲಪಡಿಸುವ ಕಾರ್ಯತಂತ್ರದ ಕ್ರಮವೆಂದು ಪರಿಗಣಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಮೋದಿಯ ಸಚಿವ ಸಂಪುಟ ಸೇರಲಿದ್ದಾರಾ ಮಹಾರಾಷ್ಟ್ರದ ಸಂಸದೆ ರಕ್ಷಾ ಖಡ್ಸೆ?
ಬಿಜೆಪಿ ನಾಯಕರಾದ ನಿರ್ಮಲಾ ಸೀತಾರಾಮನ್ ಮತ್ತು ಸರ್ಬಾನಂದ ಸೋನೋವಾಲ್ ಕೂಡ ಸಂಪುಟಕ್ಕೆ ಸೇರ್ಪಡೆಗೊಳ್ಳಬಹುದು.
ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿಯವರ ಭಾರತೀಯ ಜನತಾ ಪಕ್ಷ 240 ಸ್ಥಾನಗಳನ್ನು ಗೆದ್ದಿದೆ. ಒಟ್ಟು 28 ಸ್ಥಾನಗಳನ್ನು ಹೊಂದಿರುವ ಎನ್ ಚಂದ್ರಬಾಬು ನಾಯ್ಡು ಅವರ ಟಿಡಿಪಿ ಮತ್ತು ನಿತೀಶ್ ಕುಮಾರ್ ಅವರ ಜನತಾ ದಳ (ಯುನೈಟೆಡ್) ನರೇಂದ್ರ ಮೋದಿಗೆ ಬೆಂಬಲ ನೀಡಿದೆ.