ಮಹಾರಾಷ್ಟ್ರ ಚುನಾವಣೆಗೆ ಸಿದ್ಧರಾಗಿರಿ: ಎನ್‌ಸಿಪಿ ಕಾರ್ಯಕರ್ತರಿಗೆ ಶರದ್ ಪವಾರ್ ಸೂಚನೆ

Date:

Advertisements

ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಈಗಲೇ ಸಿದ್ಧರಾಗಿರಿ ಎಂದು ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಸೋಮವಾರ ತಮ್ಮ ಪಕ್ಷದ ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ.

ಎನ್‌ಸಿಪಿ (ಶರದ್‌ಚಂದ್ರ ಪವಾರ್) ಪಕ್ಷದ 25ನೇ ಸಂಸ್ಥಾಪನಾ ದಿನವನ್ನು ಪುಣೆಯ ಕಚೇರಿಯಲ್ಲಿ ಆಚರಿಸಲಾಗಿದ್ದು, ಪವಾರ್ ಅವರು ತಮ್ಮ ಪುತ್ರಿ ಮತ್ತು ಬಾರಾಮತಿ ಎನ್‌ಸಿಪಿ (ಎಸ್‌ಪಿ) ಸಂಸದೆ ಸುಪ್ರಿಯಾ ಸುಳೆ, ಇತರ ಮುಖಂಡರು ಮತ್ತು ಕಾರ್ಯಕರ್ತರ ಸಮ್ಮುಖದಲ್ಲಿ ಪಕ್ಷದ ಧ್ವಜವನ್ನು ಹಾರಿಸಿದರು.

“ಕಳೆದ 25 ವರ್ಷಗಳಲ್ಲಿ, ನಾವು ಪಕ್ಷದ ಸಿದ್ಧಾಂತವನ್ನು ಹರಡುವ ನಿಟ್ಟಿನಲ್ಲಿ ಕೆಲಸ ಮಾಡಿದ್ದೇವೆ ಮತ್ತು ಆ ಕಾರ್ಯವನ್ನು ಮುಂದುವರಿಸಲು ಒಟ್ಟಾಗಿ ಕೆಲಸ ಮಾಡೋಣ. ಇನ್ನು ಮೂರು ತಿಂಗಳಲ್ಲಿ, ರಾಜ್ಯ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಅದಕ್ಕಾಗಿ ಕೆಲಸ ಮಾಡುವುದು ನಮ್ಮ ಸಾಮೂಹಿಕ ಜವಾಬ್ದಾರಿಯಾಗಿದೆ” ಎಂದು ಎನ್‌ಸಿಪಿ ಸಂಸ್ಥಾಪಕರು ಹೇಳಿದರು.

Advertisements

ಇದನ್ನು ಓದಿದ್ದೀರಾ?  ಮುಸ್ಲಿಮರಿಗೆ ಶೇ.15 ರಷ್ಟು ಹಣ ಮೀಸಲು ಎಂಬ ಪ್ರಧಾನಿ ಹೇಳಿಕೆ ಮೂರ್ಖತನದ್ದು: ಶರದ್ ಪವಾರ್

ಪವಾರ್ 1999ರಲ್ಲಿ ಕಾಂಗ್ರೆಸ್‌ನಿಂದ ಬೇರ್ಪಟ್ಟ ನಂತರ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷವನ್ನು (ಎನ್‌ಸಿಪಿ) ಸ್ಥಾಪಿಸಿದರು. ಕಳೆದ ವರ್ಷ ಜುಲೈನಲ್ಲಿ ಅಜಿತ್ ಪವಾರ್ ಮತ್ತು ಇತರ ಕೆಲವು ಶಾಸಕರು ಶಿವಸೇನೆ-ಬಿಜೆಪಿ ಸರ್ಕಾರಕ್ಕೆ ಸೇರ್ಪಡೆಯಾದ ನಂತರ ಎನ್‌ಸಿಪಿ ವಿಭಜನೆಯಾಗಿದೆ.

ಈ ವರ್ಷದ ಫೆಬ್ರವರಿಯಲ್ಲಿ, ಚುನಾವಣಾ ಆಯೋಗವು ಅಜಿತ್ ಪವಾರ್ ಬಣವನ್ನು ನಿಜವಾದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷವೆಂದು ಘೋಷಿಸಿದೆ. ಬಣಕ್ಕೆ ಎನ್‌ಸಿಪಿ ಚಿಹ್ನೆ ಗಡಿಯಾರವನ್ನು ನೀಡಿದೆ. ಶರದ್ ಪವಾರ್ ಅವರ ಎನ್‌ಸಿಪಿ (ಎಸ್‌ಪಿ) ಗೆ ನಂತರ ಚುನಾವಣೆಯಲ್ಲಿ ಸ್ಪರ್ಧಿಸಲು ಮಾನವ ತುರ್ಹಾ (ಸಾಂಪ್ರದಾಯಿಕ ತುತ್ತೂರಿ) ಊದುವ ಚಿಹ್ನೆಯನ್ನು ನೀಡಲಾಗಿದೆ.

ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಮಹಾರಾಷ್ಟ್ರದಿಂದ ಸ್ಪರ್ಧಿಸಿದ 10 ಲೋಕಸಭಾ ಸ್ಥಾನಗಳಲ್ಲಿ 8ರಲ್ಲಿ ಎನ್‌ಸಿಪಿ ಗೆಲುವು ಕಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೀರತ್ ಗಡಿಯಾರ ಗೋಪುರ ಹತ್ತಿ ವಿಡಿಯೋ ಮಾಡುವ ಸಾಹಸ ಮಾಡಿದ ‘ಸ್ಪೈಡರ್‌ಮ್ಯಾನ್’ ಬಂಧನ!

'ಸ್ಪೈಡರ್‌ಮ್ಯಾನ್' ವೇಷಭೂಷಣವನ್ನು ಧರಿಸಿ ಮೀರತ್‌ನ ಐತಿಹಾಸಿಕ ಗಡಿಯಾರ ಗೋಪುರವನ್ನು ಹತ್ತಿ ಅಪಾಯಕಾರಿ...

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

Download Eedina App Android / iOS

X