ಲೋಕಸಭೆ ಸೋಲು ನಮಗೆ ಎಚ್ಚರಿಕೆ ಗಂಟೆ, ತಪ್ಪುಗಳ ಅವಲೋಕನ ಮಾಡುತ್ತೇವೆ: ಡಿ ಕೆ ಶಿವಕುಮಾರ್

Date:

Advertisements

ಲೋಕಸಭೆ ಚುನಾವಣೆಯಲ್ಲಿನ ಜನರ ತೀರ್ಪು ನಮಗೆ ಎಚ್ಚರಿಕೆ ಗಂಟೆಯಾಗಿದ್ದು, ನಮ್ಮಿಂದ ಎಲ್ಲಿ ತಪ್ಪಾಗಿದೆ ಎಂದು ಪರಾಮರ್ಶೆ ನಡೆಸಿ ಅದನ್ನು ಸರಿಪಡಿಸಿಕೊಳ್ಳಬೇಕು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

ಬೆಂಗಳೂರಿನ ಕುಮಾರಪಾರ್ಕ್ ಸರ್ಕಾರಿ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿ, “ಲೋಕಸಭಾ ಫಲಿತಾಂಶದ ಕುರಿತು ಮುಂದಿನ ದಿನಗಳಲ್ಲಿ ಎಲ್ಲಾ ನಾಯಕರ ಜೊತೆ ಪರಾಮರ್ಶನಾ ಸಭೆ ನಡೆಸಲಾಗುವುದು. ಸೋಲು ಸೋಲೇ. ಎಲ್ಲಿ ತಪ್ಪಾಗಿದೆ, ಏಕೆ ಹೆಚ್ಚುಕಮ್ಮಿಯಾಗಿದೆ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕು” ಎಂದರು.

ಬೇರೆ ಬೇರೆ ಜಿಲ್ಲೆಗಳ ಪರಾಮರ್ಶೆಗೆ ಶೀಘ್ರವೇ ದಿನಾಂಕ ನಿಗದಿ

Advertisements

“ಸೋಮವಾರ (ಜೂ.10) ಬೆಂಗಳೂರಿನ ಫಲಿತಾಂಶಗಳ ಬಗ್ಗೆ ಸಭೆ ಕರೆಯಲಾಗಿದೆ. ಮುಂದಿನ ದಿನಗಳಲ್ಲಿ ಬೇರೆ ಬೇರೆ ಜಿಲ್ಲೆಗಳ ಸಭೆ ನಡೆಸಲಾಗುವುದು. ಶೀಘ್ರವೇ ಇದಕ್ಕೆ ದಿನಾಂಕ ನಿಗದಿ ಮಾಡುತ್ತೇವೆ. ಎಲ್ಲೆಲ್ಲಿ ಏನಾಗಿದೆ ಎನ್ನುವ ಸತ್ಯಶೋಧನೆ ಹಾಗೂ ಪರಿಹಾರ ಹುಡುಕುವ ಕೆಲಸ ಆಗಬೇಕು” ಎಂದು ತಿಳಿಸಿದರು.

ಕರ್ನಾಟಕ, ಹಿಮಾಚಲ ಪ್ರದೇಶದ ಚುನಾವಣೆಯ ಬಗ್ಗೆ ಎಐಸಿಸಿ ಅಧ್ಯಕ್ಷರು ಬೇಸರ ವ್ಯಕ್ತಪಡಿಸಿದ್ದಾರೆ ಎಂದು ಕೇಳಿದಾಗ “ನಾವು 14- 15 ಸ್ಥಾನಗಳನು ಗೆಲ್ಲುತ್ತೇವೆ ಎನ್ನುವ ವಿಶ್ವಾಸವಿತ್ತು. ಆದರೆ ನಿರೀಕ್ಷಿತ ಸ್ಥಾನಗಳನ್ನು ಗಳಿಸಲು ನಾವು ವಿಫಲರಾಗಿದ್ದೇವೆ. ಜನರ ತೀರ್ಪಿಗೆ ನಾವು ತಲೆಬಾಗಲೇ ಬೇಕು” ಎಂದರು.

ಸೋಲಿಗೆ ಒಂದಷ್ಟು ಶಾಸಕರು ಕಾರಣ ಎಂದು ಸಚಿವರುಗಳು ದೂರು ನೀಡಿದ್ದಾರೆ ಎಂದು ಕೇಳಿದಾಗ “ನನ್ನ ಬಳಿ ಬಂದು ಯಾರೊಬ್ಬರೂ ದೂರು ನೀಡಿಲ್ಲ. ಯಾರ ಮೇಲೆ ದೂರು ನೀಡಿದರು ಸುಖವಿಲ್ಲ, ಪ್ರಯೋಜನವೂ ಇಲ್ಲ. ಕ್ಷೇತ್ರಗಳ ಜವಾಬ್ದಾರಿ ತೆಗೆದುಕೊಂಡವರು ಕಾರ್ಯಕರ್ತರ ಬಳಿ ಮಾತನಾಡಿ, ಎಲ್ಲಿ ತಪ್ಪಾಗಿದೆ ಎಂದು ಪರಿಶೀಲನೆ ನಡೆಸಿ, ಪರಿಹಾರ ಸಮೇತ ಇದಕ್ಕೆ ಉತ್ತರ ಕೊಡಬೇಕು. ಅಷ್ಟೇ” ಎಂದು ಹೇಳಿದರು.

ಬಹಿರಂಗವಾಗಿ ಹೇಳಿಕೆ ವಿರುದ್ಧ ಕಿಡಿ

ಲೀಡ್ ಕೊಡಿಸದ ಸಚಿವರ ರಾಜಿನಾಮೆ ಪಡೆಯಲಿ ಎನ್ನುವ ಶಾಸಕ ಬಸವರಾಜ ಶಿವಗಂಗಾ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಶಾಸಕರುಗಳು ಅನಗತ್ಯವಾಗಿ ಬಹಿರಂಗ ಹೇಳಿಕೆ ನೀಡಬಾರದು. ಎಲ್ಲಿ ತಪ್ಪಾಗಿದೆ ಎಂದು ಎಲ್ಲರೂ ಕೂತು ಚರ್ಚೆ ಮಾಡಿ ಪರಿಹಾರ ಕಂಡುಕೊಳ್ಳಬೇಕು.” ಎಂದು ಎಚ್ಚರಿಕೆ ನೀಡಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

Download Eedina App Android / iOS

X