ಮಣಿಪುರದಲ್ಲಿ ವರ್ಷ ಕಳೆದರೂ ಶಾಂತಿಯಿಲ್ಲ, ಈಶಾನ್ಯ ರಾಜ್ಯಕ್ಕೆ ಆದ್ಯತೆ ನೀಡಿ: ಆರ್‌ಎಸ್‌ಎಸ್ ಮುಖ್ಯಸ್ಥ ಭಾಗವತ್

Date:

Advertisements

ಒಂದು ವರ್ಷ ಕಳೆದರೂ ಮಣಿಪುರದಲ್ಲಿ ಶಾಂತಿ ನೆಲೆಸಿಲ್ಲ ಎಂದು ಕಳವಳ ವ್ಯಕ್ತಪಡಿಸಿರುವ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, “ಹಿಂಸಾಚಾರ ಪೀಡಿತ ಈಶಾನ್ಯ ರಾಜ್ಯಕ್ಕೆ ಆದ್ಯತೆ ನೀಡಬೇಕು” ಎಂದು ಹೇಳಿದ್ದಾರೆ.

ಇಲ್ಲಿನ ರೇಶಿಂಬಾಗ್‌ನ ಡಾ.ಹೆಡಗೇವಾರ್ ಸ್ಮೃತಿ ಭವನದ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕರ್ತ ವಿಕಾಸ ವರ್ಗ-ದ್ವಿತೀಯದ ಸಮಾರೋಪ ಕಾರ್ಯಕ್ರಮದಲ್ಲಿ ಆರ್‌ಎಸ್‌ಎಸ್ ಪ್ರಶಿಕ್ಷಣಾರ್ಥಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಸಮಾಜದಲ್ಲಿ ಸಂಘರ್ಷ ಒಳ್ಳೆಯದಲ್ಲ ಎಂದಿದ್ದಾರೆ.

“ದೇಶದ ಎಲ್ಲಾ ಸಮುದಾಯಗಳ ನಡುವೆ ಏಕತೆ ಇರಬೇಕು. ಸಮಾಜ ವೈವಿಧ್ಯಮಯವಾಗಿದ್ದರೂ ಜನರು ನಾವೆಲ್ಲ ಒಂದೇ ಮತ್ತು ಪ್ರತ್ಯೇಕವಲ್ಲ ಎಂದು ಅರ್ಥಮಾಡಿಕೊಳ್ಳಬೇಕು. ಚುನಾವಣೆಯ ವಾಕ್ಚಾತುರ್ಯದಿಂದ ಹೊರಬಂದು ರಾಷ್ಟ್ರ ಎದುರಿಸುತ್ತಿರುವ ಸಮಸ್ಯೆಗಳತ್ತ ಗಮನ ಹರಿಸುವ ಅಗತ್ಯವಿದೆ” ಎಂದು ಹೇಳಿದರು.

Advertisements

ಇದನ್ನು ಓದಿದ್ದೀರಾ?  ಮಣಿಪುರ ಹಿಂಸಾಚಾರ| ಪೊಲೀಸ್ ಠಾಣೆ, ಅರಣ್ಯ ಕಚೇರಿಗೆ ಬೆಂಕಿ; ಸುಟ್ಟು ಕರಕಲು

“ಕಳೆದ ಒಂದು ವರ್ಷದಿಂದ ಮಣಿಪುರ ಶಾಂತಿಗಾಗಿ ಕಾಯುತ್ತಿದೆ. ಮಣಿಪುರದಲ್ಲಿ 10 ವರ್ಷಗಳ ಹಿಂದೆ ಶಾಂತಿ ನೆಲೆಸಿತ್ತು. ಅಲ್ಲಿಗೆ ಬಂದೂಕು ಸಂಸ್ಕೃತಿ ಮುಗಿದಂತೆ ಭಾಸವಾಯಿತು. ಆದರೆ ರಾಜ್ಯವು ಇದ್ದಕ್ಕಿದ್ದಂತೆ ಹಿಂಸಾಚಾರವನ್ನು ಕಂಡಿದೆ” ಎಂದರು.

“ಮಣಿಪುರದ ಪರಿಸ್ಥಿತಿಯನ್ನು ಆದ್ಯತೆಯೊಂದಿಗೆ ಪರಿಗಣಿಸಬೇಕು. ಚುನಾವಣಾ ವಾಕ್ಚಾತುರ್ಯದಿಂದ ಹೊರಬಂದು ರಾಷ್ಟ್ರವು ಎದುರಿಸುತ್ತಿರುವ ಸಮಸ್ಯೆಗಳ ಮೇಲೆ ಕೇಂದ್ರೀಕರಿಸುವ ಅಗತ್ಯವಿದೆ” ಎಂದು ಮೋಹನ್ ಭಾಗವತ್ ಪ್ರತಿಪಾದಿಸಿದರು.

ಇದನ್ನು ಓದಿದ್ದೀರಾ?  ಮಣಿಪುರದಲ್ಲಿ ಮಕಾಡೆ ಮಲಗಿದ ಬಿಜೆಪಿ

ಕಳೆದ ವರ್ಷ ಮೇ ತಿಂಗಳಿನಲ್ಲಿ ಮಣಿಪುರದಲ್ಲಿ ಮೈತಿ ಮತ್ತು ಕುಕಿ ಸಮುದಾಯಗಳ ನಡುವಿನ ಹಿಂಸಾಚಾರ ಆರಂಭವಾಗಿದೆ. ಅಂದಿನಿಂದ, ಸುಮಾರು 200ಕ್ಕೂ ಅಧಿಕ ಜನರ ಕೊಲೆಯಾಗಿದೆ. ಸಾವಿರಾರು ಕಟ್ಟಡಗಳನ್ನು ಸುಡಲಾಗಿದೆ, ನೆಲಸಮ ಮಾಡಲಾಗಿದೆ.

ಜನರು ಸ್ಥಳಾಂತರಗೊಂಡು ನಿರಾಶ್ರಿತ ಕೇಂದ್ರಗಳಲ್ಲಿ ವಾಸಿಸುತ್ತಿದ್ದಾರೆ. ಇನ್ನು ಕಳೆದ ಕೆಲವು ದಿನಗಳಿಂದ ಜಿರಿಬಾಮ್‌ನಿಂದ ಹೊಸ ಹಿಂಸಾಚಾರ ವರದಿಯಾಗಿದೆ. ಆದರೆ ಈವರೆಗೂ ಪ್ರಧಾನಿ ನರೇಂದ್ರ ಮೋದಿ ಮಣಿಪುರಕ್ಕೆ ಭೇಟಿ ನೀಡದೆ ಟೀಕೆಗೆ ಒಳಗಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X