ಮೈಸೂರು | ಕೊಲೆ ಪ್ರಕರಣ; ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನ

Date:

Advertisements

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ನಟ ದರ್ಶನ್ ಸೇರಿ 10 ಮಂದಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎನ್ನುವವರ ಕೊಲೆ ಪ್ರಕರಣದಲ್ಲಿ ಆರೋಪಿಯನ್ನಾಗಿ ನಟ ದರ್ಶನ್‌ ಅವರನ್ನು ಬಂಧಿಸಿರುವ ಮಾಹಿತಿ ಲಭ್ಯವಾಗಿದೆ. ಜೂನ್ 11ರಂದು ಬೆಳಗ್ಗೆ ಮೈಸೂರಿನ ಫಾರ್ಮ್ ಹೌಸ್‌ನಲ್ಲಿ ನಟ ದರ್ಶನ್ ಅವರನ್ನ ಬಂಧಿಸಲಾಗಿದೆ. ದರ್ಶನ್‌ ಮಾತ್ರವಲ್ಲದೆ, ಇನ್ನೂ 9 ಮಂದಿಯನ್ನು ಪ್ರಕರಣ ಸಂಬಂಧ ಬಂಧಿಸಲಾಗಿದೆ ಎಂದು ವರದಿಯಾಗಿದೆ.

ನಟ ದರ್ಶನ್‌ ಅವರಿಗೆ ಆತ್ಮೀಯವಾಗಿರುವ ನಟಿ ಪವಿತ್ರ ಗೌಡ ಅವರ ಫೋಟೋಗಳಿಗೆ ರೇಣುಕಾ ಸ್ವಾಮಿ ಸಾಮಾಜಿಕ ಜಾಲತಾಣದಲ್ಲಿ ಆಶ್ಲೀಲವಾಗಿ ಕಮೆಂಟ್‌ ಮಾಡುತ್ತಿದ್ದರು. ಇದಲ್ಲದೆ ಕೆಟ್ಟದಾಗಿ ಮೆಸೇಜ್‌ ಕಳಿಸುತ್ತಿದ್ದರು ಎನ್ನಲಾಗಿದೆ.

Advertisements

ಈ ಕಾರಣಕ್ಕೆ ನಟ ದರ್ಶನ್ ಸೂಚನೆ ಮೇರೆಗೆ ಅವರ ಗೆಳೆಯರು ಚಿತ್ರದುರ್ಗದಿಂದ ರೇಣುಕಾ ಸ್ವಾಮಿಯನ್ನು ಬೆಂಗಳೂರಿಗೆ ಕರೆದುಕೊಂಡು ಬಂದಿದ್ದರು. ಜೂ.8 ರಂದು ರಾತ್ರಿ ಕಾಮಾಕ್ಷಿಪಾಳ್ಯದಲ್ಲಿರುವ ವಿನಯ್‌ ಎನ್ನುವವರ ಶೆಡ್‌ಗೆ ಕರೆತಂದು ಬಲವಾದ ಆಯುಧದಿಂದ ರೇಣುಕಾ ಸ್ವಾಮಿಗೆ ಹೊಡೆದು ಕೊಲೆ ಮಾಡಿದ್ದು, ಮೃತದೇಹವನ್ನು ಮೋರಿಗೆ ಎಸೆಯಲಾಗಿತ್ತು. ಘಟನೆ ಸಂದರ್ಭದಲ್ಲಿ ದರ್ಶನ್‌ ಅವರು ಸ್ಥಳದಲ್ಲೇ ಇದ್ದರು ಎಂದು ಆರೋಪಿಸಲಾಗಿದೆ.

ದರ್ಶನ್‌ ಸೇರಿದಂತೆ ನಾಲ್ವರು ರೇಣುಕಾ ಸ್ವಾಮಿಗೆ ಹಲ್ಲೆ ಮಾಡಿ ಕೊಲೆಗೈದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಈ ಸುದ್ದಿ ಓದಿದ್ದೀರಾ? ಮಣಿಪುರದಲ್ಲಿ ವರ್ಷ ಕಳೆದರೂ ಶಾಂತಿಯಿಲ್ಲ, ಈಶಾನ್ಯ ರಾಜ್ಯಕ್ಕೆ ಆದ್ಯತೆ ನೀಡಿ: ಆರ್‌ಎಸ್‌ಎಸ್ ಮುಖ್ಯಸ್ಥ ಭಾಗವತ್

ಮೃತದೇಹ ಪತ್ತೆಯಾದಾಗ, ಇದೊಂದು ಆತ್ಮಹತ್ಯೆ ಪ್ರಕರಣ ಎನ್ನಲಾಗಿತ್ತು. ಆದರೆ, ತನಿಖೆಯ ಬಳಿಕ ಕೊಲೆ ಮಾಡಲಾಗಿದೆ ಎಂಬುದು ಬೆಳಕೆಗೆ ಬಂದಿದೆ. 

ಪ್ರಕರಣದಲ್ಲಿ ಮೂವರು ಮೊದಲು ಠಾಣೆಗೆ ಬಂದು ನಾವೇ ಕೊಲೆ ಮಾಡಿದ್ದೇವೆ. ಹಣಕಾಸಿನ ವಿಚಾರಕ್ಕೆ ಗಲಾಟೆಯಾಗಿ, ಕೊಲೆ ಮಾಡಿದ್ದೇವೆಂದು ಹೇಳಿಕೊಂಡಿದ್ದರು. ಆದರೆ, ಪೊಲೀಸರಿಗೆ ಈ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದು, ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಬಳಿಕ, ಘಟನೆ ಹಿಂದಿನ ಕಾರಣ ಗೊತ್ತಾಗಿದೆ ಎಂದು ಹೇಳಲಾಗಿದೆ.

ದರ್ಶನ್ ಸೂಚನೆ ಮೇಲೆ ಕೊಲೆ ಮಾಡಿದ್ದಾಗಿ ನಾಲ್ವರು ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಘಟನೆ ವೇಳೆ ಸ್ಥಳದಲ್ಲಿ ದರ್ಶನ್ ಕೂಡ ಇದ್ದರು ಎನ್ನಲಾಗಿದೆ. ಈ ಪ್ರಕರಣದಲ್ಲಿ ದರ್ಶನ್ ಸೇರಿ 10 ಜನರನ್ನು ಬಂಧಿಸಲಾಗಿದೆ.

ಘಟನೆ ಸಂಬಂಧ ರೇಣುಕಾಸ್ವಾಮಿ ಪೋಷಕರು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಸದ್ಯ ದರ್ಶನ್‌ ಅವರನ್ನು ಬೆಂಗಳೂರಿಗೆ ಕರೆತರಲಾಗುತ್ತಿದೆ ಎನ್ನಲಾಗಿದೆ. ವಿಜಯನಗರ ಎಸಿಪಿ ಚಂದನ್​ ತಂಡದಿಂದ ದರ್ಶನ್​ ವಶಕ್ಕೆ ಪಡೆಯಲಾಗಿದೆ.

ಪವಿತ್ರ ಗೌಡ ಪೊಲೀಸ್ ವಶಕ್ಕೆ

ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸ್ನೇಹಿತೆ ಪವಿತ್ರ ಗೌಡ ಅವರನ್ನು ಆರ್.ಆರ್.ನಗರ ಪೊಲೀಸರು ಬಂಧನ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

Download Eedina App Android / iOS

X