ಬಿಸಿಲು, ನೀರಿನ ನಂತರ ದೆಹಲಿಯಲ್ಲಿ ವಿದ್ಯುತ್ ಸಮಸ್ಯೆ: ಬಹುತೇಕ ಪಟ್ಟಣಗಳಲ್ಲಿ ಸ್ಥಗಿತ

Date:

Advertisements

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಸಿಲು, ನೀರಿನ ನಂತರ ವಿದ್ಯುತ್ ಸಮಸ್ಯೆ ಎದುರಾಗಿದೆ. ಪಟ್ಟಣದ ಹಲವು ನಗರಗಳಲ್ಲಿ ಇಂದು ಮಧ್ಯಾಹ್ನದಿಂದ ವಿದ್ಯುತ್‌ ಸ್ಥಗಿತಗೊಳಿಸಲಾಗಿದೆ.

ಉತ್ತರ ಪ್ರದೇಶದ ಮಂಡೋಲದ ಪವರ್‌ ಗ್ರಿಡ್‌ನಲ್ಲಿ ತಾಂತ್ರಿಕ ಸಮಸ್ಯೆಯುಂಟಾಗಿ ದೆಹಲಿಯಲ್ಲಿ ವಿದ್ಯುತ್‌ ಕೊರತೆಯುಂಟಾಗಿದೆ. ದೆಹಲಿಗೆ 1500 ಮೆಗಾವ್ಯಾಟ್‌ ವಿದ್ಯುತ್‌ ಪೂರೈಸುವ ಮಂಡೋಲಾದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ವಿದ್ಯುತ್ ಸಮಸ್ಯೆಯುಂಟಾಗಿದೆ ಎಂದು ದೆಹಲಿ ಇಂಧನ ಸಚಿವೆ ಅತೀಶಿ ತಿಳಿಸಿದ್ದಾರೆ.

ಇಂದು ಮಧ್ಯಾಹ್ನ ದೆಹಲಿಯಲ್ಲಿ ತಾಪಮಾನ 42 ಡಿಗ್ರಿ ಸೆಲ್ಷಿಯಸ್‌ ಇತ್ತು ಎಂದು ತಿಳಿದುಬಂದಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ಸಂಪುಟದಲ್ಲಿ ಬಲಾಢ್ಯರು ಮುಂದಕ್ಕೆ, ಹಿಂದುಳಿದವರು ಹಿಂದಕ್ಕೆ

“ಇಂದು ಮಧ್ಯಾಹ್ನ 2.11 ಗಂಟೆಯಿಂದ ದೆಹಲಿಯ ಬಹು ಭಾಗಗಳಲ್ಲಿ ವಿದ್ಯುತ್ ಸಮಸ್ಯೆಯುಂಟಾಗಿದೆ. ದೆಹಲಿಗೆ 1500 ಮೆಗಾವ್ಯಾಟ್ ವಿದ್ಯುತ್‌ ಪೂರೈಸುವ ಉತ್ತರ ಪ್ರದೇಶದ ಮಂಡೋಲಾದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ನಮ್ಮ ಇತರ ವಿದ್ಯುತ್‌ ಮೂಲಗಳಲ್ಲಿ ಸಮಸ್ಯೆಯುಂಟಾಗಿದೆ” ಎಂದು ಅತೀಶಿ ತಿಳಿಸಿದ್ದಾರೆ.

“ಕೇಂದ್ರ ಸರ್ಕಾರದಿಂದ ದೇಶದ ವಿದ್ಯುತ್‌ ಟ್ರಾನ್ಸ್‌ಮಿಷನ್‌ ನಡೆಯುವ ಹಿನ್ನೆಲೆಯಲ್ಲಿ ನಾನು ನೂತನ ವಿದ್ಯುತ್‌ ಸಚಿವರ ಪೂರ್ವಾನುಮತಿ ಕೇಳಿದ್ದೇನೆ. ದೇಶದಲ್ಲಿರುವ ಪವರ್‌ ಗ್ರಿಡ್‌ನಲ್ಲಿ ವೈಫಲ್ಯ ಉಂಟಾಗಿರುವುದು ಕಳವಳಕ್ಕೆ ಕಾರಣವಾಗಿದೆ. ದೆಹಲಿಗೆ 8 ಸಾವಿರ ಮೆಗಾವ್ಯಾಟ್ ವಿದ್ಯುತ್‌ ಪೂರೈಕೆಯಾಗುತ್ತಿದ್ದರೂ ವಿದ್ಯುತ್ ಸಮಸ್ಯೆಯುಂಟಾಗಿದೆ. ರಾಷ್ಟ್ರೀಯ ಮೂಲಸೌಕರ್ಯದ ವೈಫಲ್ಯದಿಂದಾಗಿ ವಿದ್ಯುತ್‌ ಸ್ಥಗಿತಗೊಂಡಿದೆ” ಎಂದು ಸಚಿವರು ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಹನುಮಂತ ಮೊದಲ ಬಾಹ್ಯಾಕಾಶ ಯಾತ್ರಿಕ’ ಎಂದ ಬಿಜೆಪಿ ನಾಯಕ ಅನುರಾಗ್ ಠಾಕೂರ್; ಟ್ರೋಲ್‌ಗೆ ಗುರಿ

"ಭಗವಾನ್ ಹನುಮಂತ ಮೊದಲ ಬಾಹ್ಯಾಕಾಶ ಯಾತ್ರಿಕ" ಎಂದು ಹೇಳುವ ಮೂಲಕ ಬಿಜೆಪಿ...

ಅಂಗವಿಕಲರ ಕುರಿತು ಹಾಸ್ಯ: ಕ್ಷಮೆಯಾಚಿಸಲು ಕಾಮಿಡಿಯನ್‌ಗಳಿಗೆ ಸುಪ್ರೀಂ ಸೂಚನೆ

ನೀವು ಮಾತುಗಳನ್ನು ವಾಣಿಜ್ಯೀಕರಣಗೊಳಿಸುವಾಗ ಯಾವುದೇ ಒಂದು ಸಮುದಾಯದ ಭಾವನೆಗಳನ್ನು ನೋಯಿಸಲು ಸಾಧ್ಯವಿಲ್ಲ...

ಲೈಂಗಿಕ ಕಿರುಕುಳ ಆರೋಪ; ಕೇರಳದ ಕಾಂಗ್ರೆಸ್‌ ಶಾಸಕ ಪಕ್ಷದಿಂದ ಅಮಾನತು

ಲೈಂಗಿಕ ಕಿರುಕುಳದ ಆರೋಪಗಳ ತೀವ್ರ ಚರ್ಚೆಯ ನಡುವೆ ಕಾಂಗ್ರೆಸ್ ಶಾಸಕ ರಾಹುಲ್...

ಸಮರ್ಪಕ ಮಾಹಿತಿ ನೀಡದೆಯೇ ಎಥೆನಾಲ್‌ ಮಿಶ್ರಿತ ಪೆಟ್ರೋಲ್‌ ಮಾರಾಟ: ಗ್ರಾಹಕ ಹಕ್ಕು ಉಲ್ಲಂಘನೆ

ಪೆಟ್ರೋಲ್‌ನಲ್ಲಿ ಶೇ.20ರಷ್ಟು ಎಥೆನಾಲ್ ಬೆರೆಸಿ ಮಾರಾಟ ಮಾಡಬೇಕೆಂಬ ಕೇಂದ್ರ ಸರ್ಕಾರದ ಎಥೆನಾಲ್‌...

Download Eedina App Android / iOS

X