ಸರ್ಕಾರಿ ಪದವಿಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರು ಒಂದು ಕಾಲೇಜಿನಲ್ಲಿ ಮಾತ್ರ ಕಾರ್ಯ ನಿರ್ವಹಿಸುವಂತೆ ಆಗ್ರಹಿಸಿ ಬಾಗಲಕೋಟೆಯ ಭಾರತೀಯ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಜಿಲ್ಲೆಯ ಜಮಖಂಡಿ ತಾಲೂಕಿನ ಸರ್ಕಾರಿ ಕಾಲೇಜುಗಳ ಅತಿಥಿ ಉಪನ್ಯಾಸಕರು ಎರಡ್ಮೂರು ಖಾಸಗಿ ಕಾಲೇಜುಗಳಲ್ಲಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದರಿಂದ ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಪಾಠ ಪ್ರವಚನಗಳು ನಡೆಯದೇ ಇರುವುದರಿಂದ ವಿದ್ಯಾರ್ಥಿಗಳು ಅನಾನುಕೂಲ ಅನುಭವಿಸುವಂತಾಗಿದೆ” ಎಂದು ಆರೋಪಿಸಿದರು.
“ಎರಡ್ಮೂರು ಕಡೆ ಕಾರ್ಯ ನಿರ್ವಹಿಸುತ್ತಿರುವುದರಿಂದ ಒಂದು ಕಾಲೇಜಿನಿಂದ ಮತ್ತೊಂದು ಕಾಲೇಜಿಗೆ ಬರುವಷ್ಟರಲ್ಲಿ ವಿಳಂಬವಾಗುತ್ತಿರುವುದು ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತದೆ. ಉಪನ್ಯಾಸಕರು ಸರಿಯಾದ ಸಮಯಕ್ಕೆ ಬಾರದೇ ಇರುವುದು ವಿದ್ಯಾರ್ಥಿಗಳಿಗೆ ಅನಾನುಕೂಲವಾಗುತ್ತದೆ. ಆದ್ದರಿಂದ ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ಜಿಲ್ಲೆಯ ಜಮಖಂಡಿ ವಿಭಾಗದ ಜಮಖಂಡಿ ಮತ್ತು ರಬಕವಿ, ಬನಹಟ್ಟಿ ಇಲ್ಲಿಯ ವಿದ್ಯಾರ್ಥಿಗಳು ಸಮಸ್ಯೆಗಳ ಪಟ್ಟಿ ಇರುವುದರಿಂದ ಆದಷ್ಟು ಈ ಕೂಡಲೇ ಪರಿಹರಿಸಬೇಕು” ಎಂದರು.
ಈ ಸುದ್ದಿ ಓದಿದ್ದೀರಾ? ಧಾರವಾಡ | ಧೈರ್ಯದಿಂದ ದೃಢಸಂಕಲ್ಪ ಮಾಡಿದಾಗ ಉತ್ತಮ ಸಾಧನೆ ಸಾಧ್ಯ: ಇಸ್ಮಾಯಿಲ್ ತಮಟಗಾರ್
ನಿಯೋಗದಲ್ಲಿ ಭಾರತೀಯ ವಿದ್ಯಾರ್ಥಿ ಸಂಘದ ಜಿಲ್ಲಾಧ್ಯಕ್ಷ ಅಡಿವೆಪ್ಪ ಹುಗ್ಗಿನವರ, ಪ್ರಧಾನ ಕಾರ್ಯದರ್ಶಿ ಆಕಾಶ ಡಬಳಾಪುರ, ಯುವರಾಜ್ ಕಾಂಬಳೆ, ನವೀನ್ ತಳಕೇರಿ ಸೇರಿದಂತೆ ಇತರರು ಇದ್ದರು.
