ಜಮ್ಮು ಮತ್ತು ಕಾಶ್ಮೀರದ ಕಥುವಾ ಮತ್ತು ದೋಡಾ ಜಿಲ್ಲೆಗಳಲ್ಲಿ ಉಗ್ರರೊಂದಿಗೆ ಎರಡು ರಾತ್ರಿಗಳ ಕಾಲ ನಡೆದ ಎನ್‌ಕೌಂಟರ್‌ಗಳಲ್ಲಿ ಸಿಆರ್‌ಪಿಎಫ್ ಯೋಧ ಹುತಾತ್ಮರಾಗಿದ್ದು, ಆರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ದೋಡಾ ಜಿಲ್ಲೆಯಲ್ಲಿ ಭದೇರ್ವಾ-ಪಠಾಣ್‌ಕೋಟ್ ರಸ್ತೆಯ ಚಟರ್‌ಗಲ್ಲದ ಮೇಲ್ಭಾಗದಲ್ಲಿರುವ ಜಂಟಿ ಚೆಕ್‌ಪೋಸ್ಟ್‌ನಲ್ಲಿ ಭಯೋತ್ಪಾದಕರು ದಾಳಿ ನಡೆಸಿದ್ದು ರಾಷ್ಟ್ರೀಯ ರೈಫಲ್ಸ್‌ನ ಐವರು ಸೈನಿಕರು ಮತ್ತು ವಿಶೇಷ ಪೊಲೀಸ್ ಅಧಿಕಾರಿ (ಎಸ್‌ಪಿಒ) ಗಾಯಗೊಂಡಿದ್ದಾರೆ.
ಮತ್ತೊಂದೆಡೆ, “ಕಥುವಾ ಜಿಲ್ಲೆಯ ಸೈದಾ ಸುಖಲ್ ಗ್ರಾಮದಲ್ಲಿ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಯೋಧ ಕಬೀರ್ ದಾಸ್ ತೀವ್ರವಾಗಿ ಗಾಯಗೊಂಡಿದ್ದರು, ಯೋಧನನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದಾರೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ರಿಯಾಸಿ ಉಗ್ರ ದಾಳಿ| ಸಂತ್ರಸ್ತರ ಕುಟುಂಬಕ್ಕೆ 50 ಲಕ್ಷ ರೂ ಪರಿಹಾರ, ಉದ್ಯೋಗ ಘೋಷಿಸಿದ ರಾಜಸ್ಥಾನ ಸರ್ಕಾರ
ಇನ್ನು ಗ್ರಾಮದಲ್ಲಿ ಭಯೋತ್ಪಾದಕರು ಮನಬಂದಂತೆ ಗುಂಡು ಹಾರಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಮಂಗಳವಾರ ಸಂಜೆ ಅಂತಾರಾಷ್ಟ್ರೀಯ ಗಡಿಯ ಸಮೀಪವಿರುವ ಗ್ರಾಮದ ಮೇಲೆ ಉಗ್ರರು ದಾಳಿ ನಡೆಸಿದ್ದು ಇದರಿಂದ ಓರ್ವ ನಾಗರಿಕ ಗಾಯಗೊಂಡಿದ್ದಾರೆ. ನಂತರ ನಡೆದ ಶೋಧ ಕಾರ್ಯಾಚರಣೆಯಲ್ಲಿ ಇನ್ನೊಬ್ಬ ಭಯೋತ್ಪಾದಕನನ್ನು ಕೊಲ್ಲಲಾಗಿದೆ. ಈತ ಗಡಿಯಿಂದ ಈಚೆ ಬಂದಿದ್ದಾನೆ ಎಂದು ಹೇಳಲಾಗಿದೆ.
#WATCH | Jammu and Kashmir: Follow-up search operation underway after the terror attack in Kathua’s Hiranagar last night.
Out of two terrorists, one was neutralised last night in an encounter. Search operations to nab the other terrorists are underway. The security forces have… pic.twitter.com/uMD7CfRKWD
— ANI (@ANI) June 12, 2024
ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ನೇತೃತ್ವದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಎನ್‌ಕೌಂಟರ್ ನಡೆದ ಸ್ಥಳದಲ್ಲಿದ್ದಾರೆ. ಪ್ರದೇಶವನ್ನು ಸುತ್ತುವರಿದಿದ್ದು, ಸಿಆರ್‌ಪಿಎಫ್ ನೆರವಿನೊಂದಿಗೆ ಮನೆ-ಮನೆಗೆ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶಿವ ಖೋರಿ ದೇವಸ್ಥಾನದಿಂದ ಕತ್ರಾಕ್ಕೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್‌ನ ಮೇಲೆ ಭಯೋತ್ಪಾದಕರು ದಾಳಿ ಮಾಡಿದ ಕೆಲವೇ ದಿನಗಳಲ್ಲಿ ಈ ಘಟನೆ ನಡೆದಿದೆ. ಉಗ್ರರ ಗುಂಡಿನ ದಾಳಿಯಿಂದಾಗಿ ಬಸ್ ಕಮರಿಗೆ ಉರುಳಿದ್ದು ಒಂಬತ್ತು ಜನರು ಸಾವನ್ನಪ್ಪಿದರೆ 41 ಮಂದಿ ಗಾಯಗೊಂಡಿದ್ದಾರೆ.