ಜಮ್ಮು ಮತ್ತು ಕಾಶ್ಮೀರದಲ್ಲಿ ನಿರಂತರವಾಗಿ ಉಗ್ರ ದಾಳಿಗಳು ನಡೆಯುತ್ತಿದ್ದು, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೌನವನ್ನು ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.
ಈ ಬಗ್ಗೆ ಎಕ್ಸ್ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, “ತನಗೆ ಬಂದ ಅಭಿನಂದನಾ ಸಂದೇಶಗಳಿಗೆ ಉತ್ತರಿಸುವುದರಲ್ಲಿ ನಿರತರಾಗಿರುವ ನರೇಂದ್ರ ಮೋದಿ ಅವರಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಭೀಕರವಾಗಿ ಹತ್ಯೆಯಾದ ಭಕ್ತರ ಕುಟುಂಬಗಳ ಕಿರುಚಾಟವೂ ಕೇಳಿಸುತ್ತಿಲ್ಲ” ಎಂದು ಮೋದಿಯನ್ನು ಕುಟುಕಿದ್ದಾರೆ.
“ರಿಯಾಸಿ, ಕಥುವಾ ಮತ್ತು ದೋಡಾದಲ್ಲಿ ಕಳೆದ 3 ದಿನಗಳಲ್ಲಿ 3 ಪ್ರತ್ಯೇಕ ಭಯೋತ್ಪಾದಕ ದಾಳಿ ಘಟನೆಗಳು ನಡೆದಿವೆ. ಆದರೆ ಪ್ರಧಾನಿ ನರೇಂದ್ರ ಮೋದಿ ಮಾತ್ರ ಇನ್ನೂ ಸಂಭ್ರಮಾಚರಣೆಯಲ್ಲಿ ಮುಳುಗಿದ್ದಾರೆ” ಎಂದು ರಾಹುಲ್ ಟೀಕಿಸಿದ್ದಾರೆ.
ಇದನ್ನು ಓದಿದ್ದೀರಾ? ಜಮ್ಮು ಕಾಶ್ಮೀರ | ಉಗ್ರರ ಎನ್‌ಕೌಂಟರ್; ಸಿಆರ್‌ಪಿಎಫ್ ಯೋಧ ಹುತಾತ್ಮ, ಆರು ಭದ್ರತಾ ಸಿಬ್ಬಂದಿಗಳಿಗೆ ಗಾಯ
“ಬಿಜೆಪಿ ಸರ್ಕಾರದಲ್ಲಿ ಭಯೋತ್ಪಾದಕ ದಾಳಿಗಳನ್ನು ಯೋಜಿಸುತ್ತಿರುವವರು ಏಕೆ ಸಿಕ್ಕಿ ಬೀಳುವುದಿಲ್ಲ ಎಂದು ದೇಶವು ಉತ್ತರವನ್ನು ಕೇಳುತ್ತಿದೆ” ಎಂದು ಹೇಳಿದ್ದಾರೆ.
बधाई संदेशों का जवाब देने में व्यस्त नरेंद्र मोदी को जम्मू-कश्मीर में निर्ममता से मौत के घाट उतार दिये गए श्रद्धालुओं के परिवारों की चीखें तक नहीं सुनाई दे रही हैं।
रियासी, कठुआ और डोडा में पिछले 3 दिनों में 3 अलग-अलग आतंकी घटनाएं हुई हैं लेकिन प्रधानमंत्री अब भी जश्न में मग्न…
— Rahul Gandhi (@RahulGandhi) June 12, 2024
ಇನ್ನು ಕಾಂಗ್ರೆಸ್ ನಾಯಕ ಮತ್ತು ಮಾಧ್ಯಮ, ಪ್ರಚಾರ ವಿಭಾಗದ ಉಸ್ತುವಾರಿ ಪವನ್ ಖೇರಾ ಕೂಡಾ ಪ್ರಧಾನಿ ಮೋದಿ ಮೌನವನ್ನು ಪ್ರಶ್ನಿಸಿದ್ದಾರೆ. “ಪಾಕಿಸ್ತಾನಿ ನಾಯಕರ ಶುಭಾಶಯಕ್ಕೆ ಪ್ರತಿಕ್ರಿಯಿಸಲು ಪ್ರಧಾನಿ ಮೋದಿ ಅವರಿಗೆ ಸಮಯವಿದೆ, ಆದರೆ ಕ್ರೂರ ಭಯೋತ್ಪಾದಕ ದಾಳಿಯನ್ನು ಖಂಡಿಸಲು ಸಮಯವಿಲ್ಲ” ಎಂದಿದ್ದಾರೆ.
ಇದನ್ನು ಓದಿದ್ದೀರಾ? ರಿಯಾಸಿ ದಾಳಿ| ಉಗ್ರರು 20 ನಿಮಿಷಗಳ ಕಾಲ ಗುಂಡು ಹಾರಿಸಿದ್ದರು: ಮಾಜಿ ಸರಪಂಚ್
“ಜಮ್ಮು ಮತ್ತು ಕಾಶ್ಮೀರವನ್ನು ಶಾಂತಿ ಮತ್ತು ಸಹಜ ಸ್ಥಿತಿಗೆ ತರುವ ಬಿಜೆಪಿಯ ಪೊಳ್ಳು ಹೇಳಿಕೆಗಳನ್ನು ಸಂಪೂರ್ಣವಾಗಿ ಬಹಿರಂಗಗೊಂಡಿದೆ. ಕಾಶ್ಮೀರ ಕಣಿವೆಯಲ್ಲಿ ಚುನಾವಣೆ ಎದುರಿಸಲು ಬಿಜೆಪಿ ತಲೆಕೆಡಿಸಿಕೊಳ್ಳದಿರುವುದು ಅವರ ‘ನಯಾ ಕಾಶ್ಮೀರ’ ಎಂಬುದಕ್ಕೆ ಸಾಕ್ಷಿಯಾಗಿದೆ. ಅವರ ನೀತಿಯು ಹೀನಾಯವಾಗಿ ವಿಫಲವಾಗಿದೆ” ಎಂದು ಟೀಕಿಸಿದ್ದಾರೆ.
“2016ರಲ್ಲಿ ನಡೆದ ಪಠಾಣ್‌ಕೋಟ್ ದಾಳಿಯ ತನಿಖೆಗೆ ಮೋದಿ ಸರ್ಕಾರ ದರೋಡೆಕೋರ ಐಎಸ್‌ಐಗೆ ಆಹ್ವಾನ ನೀಡಿದ್ದು ನಿಜವಲ್ಲವೇ” ಎಂದು ಖೇರಾ ಪ್ರಶ್ನಿಸಿದ್ದಾರೆ.
“ಜಮ್ಮು ಕಾಶ್ಮೀರದಲ್ಲಿ 2,262 ಭಯೋತ್ಪಾದಕ ದಾಳಿಗಳು ನಡೆದಾಗಲೂ ಮೋದಿ ಸರ್ಕಾರವು ರಾಷ್ಟ್ರೀಯ ಭದ್ರತೆಗೆ ಅಪಾಯವನ್ನುಂಟುಮಾಡಿದೆ. ಈ ದಾಳಿಯಲ್ಲಿ 363 ನಾಗರಿಕರು ಸಾವನ್ನಪ್ಪಿದರು ಮತ್ತು 596 ಯೋಧರು ಹುತಾತ್ಮರಾಗಿದ್ದಾರೆ” ಎಂದು ಖೇರಾ ಅಂಕಿ ಅಂಶ ಸಮೇತ ಮೋದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಇದನ್ನು ಓದಿದ್ದೀರಾ? ರಿಯಾಸಿ ಉಗ್ರ ದಾಳಿ | ಸಂತ್ರಸ್ತರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ, ಉದ್ಯೋಗ ಘೋಷಿಸಿದ ರಾಜಸ್ಥಾನ ಸರ್ಕಾರ
#UPDATE | Doda, J&K: The injured SOG Constable Fareed Ahmed was shifted to Government Medical College Doda for further treatment. https://t.co/Kv6x0nY74i pic.twitter.com/PBnzht4PJy
— ANI (@ANI) June 12, 2024
ಜಮ್ಮು ಮತ್ತು ಕಾಶ್ಮೀರದಲ್ಲಿ ನಿರಂತರವಾಗಿ ಉಗ್ರ ದಾಳಿಗಳು ನಡೆಯುತ್ತಿದೆ. ಇಂದು ಮುಂಜಾನೆಯಷ್ಟೆ ದೋಡಾದಲ್ಲಿ ಮತ್ತೆ ಉಗ್ರರು ಮತ್ತು ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿದೆ. ಇದರಲ್ಲಿ ಪೊಲೀಸ್ ಸಿಬ್ಬಂದಿಯೋರ್ವರು ಗಾಯಗೊಂಡಿದ್ದಾರೆ. ಇನ್ನು ಬುಧವಾರ ಅವಳಿ ಗಡಿ ಜಿಲ್ಲೆಗಳಾದ ರಾಜೌರಿ ಮತ್ತು ಪೂಂಚ್‌ನಲ್ಲಿ ಭಯೋತ್ಪಾದಕ ದಾಳಿಗಳು ನಡೆದಿದೆ.
ಇನ್ನು ಶಿವ ಖೋರಿ ದೇವಸ್ಥಾನದಿಂದ ಕತ್ರಾಕ್ಕೆ ಸಾಗುತ್ತಿದ್ದ ಯಾತ್ರಾರ್ಥಿಗಳು ತುಂಬಿದ್ದ ಬಸ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು ಬಸ್ ಕಮರಿಗೆ ಉರುಳಿದೆ. ಇದರಿಂದಾಗಿ ಕನಿಷ್ಠ 9 ಮಂದಿ ಸಾವನ್ನಪ್ಪಿದ್ದಾರೆ. 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.