ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬುಧವಾರ ದೋಡಾ ಜಿಲ್ಲೆಯಲ್ಲಿ ಎರಡು ದಾಳಿಗಳಲ್ಲಿ ಭಾಗಿಯಾಗಿರುವ ನಾಲ್ವರು ಭಯೋತ್ಪಾದಕರ ರೇಖಾಚಿತ್ರ ಬಿಡುಗಡೆ ಮಾಡಿದ್ದು, ಉಗ್ರರ ಮಾಹಿತಿ ನೀಡಿದವರಿಗೆ 20 ಲಕ್ಷ ರೂಪಾಯಿ ಬಹುಮಾನವನ್ನು ಘೋಷಿಸಿದ್ದಾರೆ.
ಮಂಗಳವಾರ ಭದೇರ್ವಾಹ್‌ನ ಚಟರ್‌ಗಲ್ಲದಲ್ಲಿ 4 ರಾಷ್ಟ್ರೀಯ ರೈಫಲ್ಸ್ ಮತ್ತು ಪೊಲೀಸರ ಜಂಟಿ ಚೆಕ್‌ಪೋಸ್ಟ್ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ಜಿಲ್ಲೆಯ ಗಂಡೋ ಪ್ರದೇಶದಲ್ಲಿ ಬುಧವಾರ ಶೋಧ ತಂಡ ದಾಳಿ ನಡೆಸಿದ್ದು, ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಪೊಲೀಸ್ ಸೇರಿದಂತೆ ಏಳು ಭದ್ರತಾ ಸಿಬ್ಬಂದಿಗೆ ಗಾಯಗಳಾಗಿವೆ.
ಇದನ್ನು ಓದಿದ್ದೀರಾ? ಜಮ್ಮು ಕಾಶ್ಮೀರ ಉಗ್ರ ದಾಳಿ ಬಗ್ಗೆ ಪ್ರಧಾನಿ ಮೋದಿ ‘ಮೌನ’ ಪ್ರಶ್ನಿಸಿದ ರಾಹುಲ್ ಗಾಂಧಿ
“ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಾಲ್ವರು ಭಯೋತ್ಪಾದಕರ ರೇಖಾಚಿತ್ರಗಳನ್ನು ಬಿಡುಗಡೆ ಮಾಡಿದ್ದಾರೆ. ಈ ಉಗ್ರರು ಭದರ್ವಾ, ಥಾತ್ರಿ, ಗಂಡೋಹ್‌ನಲ್ಲಿ ಉಗ್ರರು ಇರುವ ಸುಳಿವಿದೆ. ಅಲ್ಲಿಯೇ ಭಯೋತ್ಪಾದನೆ ಸಂಬಂಧಿತ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ” ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.
#alleyesonreasi
source from Hindustan times
Link: https://t.co/eW4nRf4JGP pic.twitter.com/UC4GthPRun— …….kou (@koushikrahul1) June 12, 2024
ಪ್ರತಿ ಭಯೋತ್ಪಾದಕರ ಬಗ್ಗೆ ಮಾಹಿತಿ ನೀಡಿದವರಿಗೆ 5 ಲಕ್ಷ ರೂಪಾಯಿ ನಗದು ಬಹುಮಾನವನ್ನೂ ಘೋಷಿಸಲಾಗಿದೆ ಎಂದು ಅವರು ಹೇಳಿದರು. ಈ ಭಯೋತ್ಪಾದಕರ ಚಲನವಲನದ ಬಗ್ಗೆ ಮಾಹಿತಿ ನೀಡುವಂತೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜನರಿಗೆ ಮನವಿ ಮಾಡಿದ್ದಾರೆ.
ಇದನ್ನು ಓದಿದ್ದೀರಾ? ಜಮ್ಮು ಕಾಶ್ಮೀರ | ಉಗ್ರರ ಎನ್‌ಕೌಂಟರ್; ಸಿಆರ್‌ಪಿಎಫ್ ಯೋಧ ಹುತಾತ್ಮ, ಆರು ಭದ್ರತಾ ಸಿಬ್ಬಂದಿಗಳಿಗೆ ಗಾಯ
ಇನ್ನು ಮಂಗಳವಾರ ರಾತ್ರಿ, ರಿಯಾಸಿ ಜಿಲ್ಲೆಯಲ್ಲಿ ಪ್ರಯಾಣಿಕರ ಬಸ್ ಮೇಲೆ ದಾಳಿ ನಡೆಸಿದ ಭಯೋತ್ಪಾದಕನ ರೇಖಾಚಿತ್ರವನ್ನು ಪೊಲೀಸರು ಬಿಡುಗಡೆ ಮಾಡಿದ್ದು ಆತನ ಬಗ್ಗೆ ಮಾಹಿತಿ ನೀಡಿದವರಿಗೆ 20 ಲಕ್ಷ ರೂಪಾಯಿ ಬಹುಮಾನವನ್ನು ಘೋಷಿಸಿದ್ದಾರೆ.
ಭಾನುವಾರ, ಯಾತ್ರಾರ್ಥಿಗಳು ಮಾತಾ ವೈಷ್ಣೋ ದೇವಿ ದೇಗುಲಕ್ಕೆ ಸಾಗುತ್ತಿದ್ದಾಗ ಉಗ್ರರು ಬಸ್‌ಗೆ ಗುಂಡಿನ ದಾಳಿ ನಡೆಸಿದ್ದು, ಬಸ್ ಕಮರಿಗೆ ಉರುಳಿದೆ. ಬಸ್‌ನಲ್ಲಿದ್ದ 9 ಮಂದಿ ಸಾವನ್ನಪ್ಪಿದ್ದು ಹಲವಾರು ಮಂದಿಗೆ ಗಾಯಗಳಾಗಿದೆ.