ನಟ ದರ್ಶನ್ ವಿವಾದದ ನಡುವೆ ಇದೀಗ ಸ್ಯಾಂಡಲ್ವುಡ್ನ ಮತ್ತೋಬ್ಬ ನಟ ದುನಿಯಾ ವಿಜಯ್ ಅವರ ವಿವಾದವೊಂದು ಮುನ್ನೆಲೆಗೆ ಬಂದಿದೆ. ವಿಚ್ಛೇದನ ಕೋರಿ ನಟ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.
ನಟ ವಿಜಯ್ ತಮ್ಮ ಪತ್ನಿ ನಾಗರತ್ನ ವಿರುದ್ದ ವಿಚ್ಛೇದನ ಕೋರಿ ನ್ಯಾಯಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಶಾಂತಿನಗರದ ಕೌಟುಂಬಿಕ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.
ನಟ ದುನಿಯಾ ವಿಜಯ್ ಅವರು ಪತ್ನಿ ನಾಗರತ್ನ ಅವರಿಂದ ವಿಚ್ಛೇದನ ಬೇಕು ಎಂದು 2018ರಲ್ಲಿಯೇ ಅರ್ಜಿ ಸಲ್ಲಿಸಿದ್ದರು. ಕಳೆದ 6 ವರ್ಷಗಳಿಂದ ಈ ಕೇಸ್ ಕೋರ್ಟ್ನಲ್ಲಿ ನಡೆಯುತ್ತಿದೆ. ಈಗ ಅರ್ಜಿ ವಜಾ ಆಗಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಗಗನಕ್ಕೇರಿದ ದಿನಸಿ, ತರಕಾರಿ ಬೆಲೆ; ₹50ಕ್ಕೇರಿದ ಟೊಮೆಟೊ ದರ
ಕ್ರೌರ್ಯದ ಆಧಾರದಲ್ಲಿ ಪತ್ನಿ ನಾಗರತ್ನರಿಂದ ವಿಚ್ಛೇದನ ನೀಡುವಂತೆ ನ್ಯಾಯಾಲಯಕ್ಕೆ ವಿಜಯ್ ಅರ್ಜಿ ಸಲ್ಲಿಸಿದ್ದರು. ಆದರೆ, ಆರೋಪ ಸಾಬೀತುಪಡಿಸಲು ಸಾಧ್ಯವಾಗದ ಹಿನ್ನೆಲೆ ಕೋರ್ಟ್ ಈ ಅರ್ಜಿಯನ್ನು ವಜಾ ಮಾಡಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನ ಶಾಂತಿನಗರ ಕೌಟುಂಬಿಕ ನ್ಯಾಯಾಲಯ ಆದೇಶ ನೀಡಿದೆ.