ಜನರ ಕೈಗೆಟಕುವಂತಹ ವಿಮಾನ ದರಕ್ಕೆ ಆದ್ಯತೆ: ನೂತನ ವಿಮಾನಯಾನ ಸಚಿವ ರಾಮ್‌ ಮೋಹನ್ ನಾಯ್ಡು

Date:

Advertisements

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಸರ್ಕಾರದಲ್ಲಿ ನೂತನ ನಾಗರಿಕ ವಿಮಾನ ಯಾನ ಸಚಿವರಾಗಿ ಆಯ್ಕೆಯಾಗಿರುವ ಕಿಂಜರಾಪು ರಾಮ್‌ ಮೋಹನ್ ನಾಯ್ಡು ಇಂದು ಸಚಿವಾಲಯದ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.

ಆ ಬಳಿಕ ಪಿಟಿಐ ಸುದ್ದಿ ಸಂಸ್ಥೆಯ ಪ್ರತಿನಿಧಿಯು, “ಕಳೆದ ಕೆಲವು ವರ್ಷಗಳಿಂದ ದರ ಏರಿಕೆಯಾಗಿರುವುದರಿಂದ ಜನಸಾಮಾನ್ಯರು ವಿಮಾನ ಪ್ರಯಾಣದಿಂದ ದೂರ ಸರಿಯುತ್ತಿದ್ದಾರೆ. ಈ ಬಗ್ಗೆ ಏನಾದರೂ ನಿಮ್ಮ ಅವಧಿಯಲ್ಲಿ ಕ್ರಮ ತೆಗೆದುಕೊಳ್ಳುತ್ತೀರಾ?” ಎಂದು ಕೇಳಿದ್ದಕ್ಕೆ ಉತ್ತರಿಸಿದ ರಾಮ್‌ ಮೋಹನ್ ನಾಯ್ಡು, “ಹೌದು. ಕಳೆದ ಕೆಲವು ವರ್ಷಗಳಿಂದ ಇದನ್ನು ಗಮನಿಸುತ್ತಿದ್ದೇನೆ. ಇದು ನನಗೆ ಒಂದು ಪ್ರಮುಖ ವಿಷಯವಾಗಿದೆ. ಹಾಗಾಗಿ, ಜನಸಾಮಾನ್ಯರಿಗೆ ಕೈಗಟಕುವ ದರದಲ್ಲಿ ವಿಮಾನ ಪ್ರಯಾಣಕ್ಕೆ ಆದ್ಯತೆ ನೀಡುತ್ತೇನೆ” ಎಂದು ತಿಳಿಸಿದ್ದಾರೆ.

“ನನಗೆ ನಾಗರಿಕ ವಿಮಾನಯಾನ ಸಚಿವ ಸ್ಥಾನ ಎಂದು ಘೋಷಿಸಿದ ಸಮಯದಿಂದಲೂ ಇದು ನನಗೆ ಒಂದು ಪ್ರಮುಖ ವಿಷಯವಾಗಿದೆ. ನಾನು ಎಲ್ಲಿಗೆ ಹೋದರೂ ದರ ಏರಿಕೆಯ ಬಗ್ಗೆ ಕೇಳುತ್ತಲೇ ಇದ್ದೇನೆ. ಕಳೆದ ಕೆಲವು ವರ್ಷಗಳಿಂದ ಅದರಲ್ಲೂ ವಿಶೇಷವಾಗಿ ಕೋವಿಡ್ ನಂತರ ಬೆಲೆಗಳು ಹಲವು ಕಾರಣದಿಂದಾಗಿ ಏರಿಕೆಯಾಗಿದೆ ಎಂದು ಜನರು ಉಲ್ಲೇಖಿಸುತ್ತಿದ್ದಾರೆ. ಹಾಗಾಗಿ, ಬೆಲೆ ಏರಿಕೆಯ ಬಗ್ಗೆ ನನಗೆ ಸಂಪೂರ್ಣ ತಿಳುವಳಿಕೆ ಬೇಕಿದೆ” ಎಂದು ಹೇಳಿದರು.

“ವಿಮಾನ ಪ್ರಯಾಣದ ದರ ಏರಿಕೆಯ ಬಗ್ಗೆ ನಾನು ಖಂಡಿತವಾಗಿಯೂ ಷೇರುದಾರರದೊಂದಿಗೆ ಪರಿಶೀಲನಾ ಸಭೆಗಳನ್ನು ನಡೆಸಲಿದ್ದೇನೆ. ಏಕೆಂದರೆ ದರ ಏರಿಕೆಯು ಸಾಮಾನ್ಯ ಜನರಿಗೆ ಸವಾಲಾಗಿದೆ. ಸಾಮಾನ್ಯ ಜನರಿಗೆ ವಿಮಾನ ಪ್ರಯಾಣದ ದರವನ್ನು ನಾವು ಕೈಗೆಟುಕುವವರೆಗೆ ಮಾಡದಿದ್ದರೆ ಪ್ರಯಾಣಕ್ಕೆ ಆದ್ಯತೆ ನೀಡಲು ಸಾಧ್ಯವಿಲ್ಲ. ಜನರಿಗೆ ಕೈಗಟಕುವ ದರದಲ್ಲಿ ವಿಮಾನ ಪ್ರಯಾಣಕ್ಕೆ ಆದ್ಯತೆ ನೀಡಲು ಶ್ರಮಿಸುತ್ತೇನೆ” ಎಂದು ಎನ್‌ಡಿಎಯ ಮೈತ್ರಿಕೂಟದ ಭಾಗವಾಗಿರುವ ಟಿಡಿಪಿ ಪಕ್ಷದ ಸಂಸದರೂ ಆಗಿರುವ ನೂತನ ನಾಗರಿಕ ವಿಮಾನ ಯಾನ ಸಚಿವ ರಾಮಮೋಹನ್ ನಾಯ್ಡು ಭರವಸೆ ನೀಡಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇದೇ ಮೊದಲ ಬಾರಿಗೆ ಭಾರತಕ್ಕೆ ತಾಲಿಬಾನ್ ಸಚಿವರ ಭೇಟಿ; ಐತಿಹಾಸಿಕ ಹೆಜ್ಜೆ

ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರದ ವಿದೇಶಾಂಗ ವ್ಯವಹಾರಗಳ ಸಚಿವ ಅಮೀರ್ ಖಾನ್ ಮುತ್ತಖಿ...

ದಾವಣಗೆರೆ | ಜಾತಿ ಧರ್ಮ ಭಾಷೆಗಳ ಸಂಘರ್ಷ ತಡೆಗೆ ಗಾಂಧೀಜಿ ದಾರಿ ಮುಖ್ಯ: ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ

ʼʼಜಾತಿ,ಧರ್ಮಗಳ, ಮಧ್ಯೆ, ಭಾಷೆ ಮತ್ತು ಪ್ರದೇಶಗಳ ಮಧ್ಯೆ ವೈಷಮ್ಯ ಮಾಡಿಕೊಂಡು ಸಂಘರ್ಷ...

ಒಳ ಮೀಸಲಾತಿ | ಎಐಸಿಸಿ ಹಸ್ತಕ್ಷೇಪಕ್ಕೆ ಹೆಚ್ಚಿದ ಆಗ್ರಹ, ದೆಹಲಿ ಬಿಡದಿರಲು ಅಲೆಮಾರಿ ಸಂಸತ್ತು ತೀರ್ಮಾನ

ಒಳ ಮೀಸಲಾತಿ ವಿತರಣೆಯಲ್ಲಿ ಕರ್ನಾಟಕದ ಅಸ್ಪೃಶ್ಯ ದಲಿತ ಅಲೆಮಾರಿ ಸಮುದಾಯಗಳಿಗೆ ಆಗಿರುವ...

Download Eedina App Android / iOS

X