ದರ್ಶನ್ ಆರೋಪಿಯಾಗಿರುವ ಕೊಲೆ ಪ್ರಕರಣ: ತನಿಖಾಧಿಕಾರಿ ಬದಲಾವಣೆ

Date:

Advertisements

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ದರ್ಶನ್ ಸೇರಿದಂತೆ 14 ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣ ಪ್ರಮುಖ ಹಂತಕ್ಕೆ ತಲುಪುವ ಹೊತ್ತಿನಲ್ಲಿ ಈ ಪ್ರಕರಣದ ತನಿಖೆ ಮಾಡುತ್ತಿದ್ದ ತನಿಖಾಧಿಕಾರಿಯನ್ನು ಬದಲಾವಣೆ ಮಾಡಲಾಗಿದೆ.

ಈ ಪ್ರಕರಣದ ತನಿಖೆಯನ್ನು ಕಾಮಾಕ್ಷಿಪಾಳ್ಯದ ಇನ್​​ಸ್ಪೆಕ್ಟರ್​ ಗಿರೀಶ್ ನಾಯ್ಕ್ ಅವರು ನಡೆಸುತ್ತಿದ್ದರು. ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದ ಗಿರೀಶ್ ನಾಯ್ಕ್ ಅವರು ತನಿಖೆ ನಡೆಸಿ ನಟ ದರ್ಶನ್‌, ಪವಿತ್ರ ಗೌಡ ಸೇರಿದಂತೆ ಒಟ್ಟು 14 ಜನರನ್ನು ಬಂಧಿಸಿದ್ದರು. ಈ ಪ್ರಕರಣವನ್ನು ಸಮರ್ಥವಾಗಿ ನಡೆಸುತ್ತಿದ್ದರು.

ಆದರೆ, ಈ ಪ್ರಕರಣದ ನೂತನ ತನಿಖಾಧಿಕಾರಿಯಾಗಿ ವಿಜಯನಗರ ಉಪವಿಭಾಗ ಎಸಿಪಿ ಚಂದನ್ ನೇಮಕಗೊಂಡಿದ್ದಾರೆ. ಇಂದಿನಿಂದ ಇವರ ನೇತೃತ್ವದಲ್ಲಿ ಪ್ರಕರಣದ ತನಿಖೆ ಮುಂದುವರಿಯಲಿದೆ.

Advertisements

ಲೋಕಸಭಾ ಚುನಾವಣೆಯ ಹಿನ್ನೆಲೆ, ಗಿರೀಶ್ ನಾಯ್ಕ್‌ ಅವರನ್ನು ಸಿ.ಕೆ ಅಚ್ಚುಕಟ್ಟು‌ ಠಾಣೆಯಿಂದ ಕಾಮಾಕ್ಷಿಪಾಳ್ಯಕ್ಕೆ ವರ್ಗಾವಣೆ ಮಾಡಲಾಗಿತ್ತು. ಈ ಮಧ್ಯೆ ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಜವಾಬ್ದಾರಿ ಇವರ ಹೆಗಲಿಗೆ ಬಿದ್ದಿತ್ತು. ಎರಡು ದಿನಗಳ ಹಿಂದೆ ಪುನಃ ವಾಪಸ್ ತಮ್ಮ ಠಾಣೆಗೆ ತೆರಳಲು ಆದೇಶ ಬಂದಿದೆ.

ಈ ಸುದ್ದಿ ಓದಿದ್ದೀರಾ? ನಟ ದುನಿಯಾ ವಿಜಯ್​​​​​​ ವಿಚ್ಛೇದನ ಅರ್ಜಿ ವಜಾಗೊಳಿಸಿದ ಕೋರ್ಟ್

ಇದೀಗ, ಗಿರೀಶ್ ನಾಯ್ಕ್ ಸಿ.ಕೆ ಅಚ್ಚುಕಟ್ಟು ಠಾಣೆಗೆ ವಾಪಸ್‌ ಆಗುವ ಹಿನ್ನಲೆ, ವಿಜಯನಗರ ಉಪವಿಭಾಗ ಎಸಿಪಿ ಚಂದನ್ ನೂತನ ತನಿಖಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X