254 ಹೊಸ ‘ನಮ್ಮ ಕ್ಲಿನಿಕ್‌’ಗಳಿಗೆ ಸ್ಥಳ ಗುರುತಿಸಿ; ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವ ದಿನೇಶ್ ಗುಂಡುರಾವ್

Date:

Advertisements

ರಾಜ್ಯದಲ್ಲಿ ಈಗಾಗಲೇ ನಮ್ಮ ಕ್ಲಿನಿಕ್‌ಗಳು ಕಾರ್ಯರಂಭವಾಗಿದೆ. ಇದೀಗ, ಬಸ್‌ ನಿಲ್ದಾಣಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ‘ನಮ್ಮ ಕ್ಲಿನಿಕ್‌’ಗಳನ್ನು ಪ್ರಾರಂಭ ಮಾಡಲು ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಮುಂದಾಗಿದ್ದು, 254 ಹೊಸ ನಮ್ಮ ಕ್ಲಿನಿಕ್‌ಗಳನ್ನ ಆರಂಭಿಸಲು ಸ್ಥಳ ಗುರುತಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಜೂನ್‌ 13ರಂದು ನಾನಾ ಆರೋಗ್ಯ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ನೂತನ ನಮ್ಮ ಕ್ಲಿನಿಕ್‌ಗಳನ್ನ ಪ್ರಾರಂಭಿಸುವ ನಿಟ್ಟಿನಲ್ಲಿ ಸ್ಥಳ ಗುರುತಿಸಿ 15 ದಿನಗಳ ಒಳಗಾಗಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

“ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 503 ನಮ್ಮ ಕ್ಲಿನಿಕ್‌ಗಳನ್ನ ಸದೃಢಗೊಳಿಸುವತ್ತ ಗಮನ ಹರಿಸಬೇಕು. ಪ್ರಸಕ್ತ ಸಾಲಿನಲ್ಲಿ ಹೊಸದಾಗಿ 254 ನಮ್ಮ ಕ್ಲಿನಿಕ್‌ಗಳನ್ನ ಪ್ರಾರಂಭಿಸಲು ಅವಕಾಶವಿದೆ. ಸ್ಥಳ ಗುರುತಿಸುವ ಕಾರ್ಯ ಶೀಘ್ರದಲ್ಲಿ ಪೂರ್ಣಗೊಳಿಸಬೇಕು. ಹಾಗೆಯೇ, ಸಾರ್ವಜನಿಕ ಸ್ಥಳಗಳಲ್ಲಿ ಆದ್ಯತೆ ನೀಡಬೇಕು” ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisements

“ವಿಶೇಷವಾಗಿ ಜೈಲುಗಳು ಹಾಗೂ ಬಸ್ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್‌ಗಳನ್ನ ಆರಂಭಿಸುವ ಕುರಿತು ಸ್ಥಳ ಗುರುತಿಸುವ ಕಾರ್ಯ 15 ದಿನಗಳ ಒಳಗಾಗಿ ಪೂರ್ಣಗೊಳಿಸಿ ಕ್ಯಾಬಿನೆಟ್ ಒಪ್ಪಿಗೆ ಪಡೆಯುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು” ಎಂದು ಇಲಾಖೆ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್, ಎನ್‌ಎಚ್‌ಎಮ್‌ಎಂಡಿ ನವೀನ್ ಭಟ್ ಹಾಗೂ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಅವರಿಗೆ ಸಚಿವರು ಸೂಚನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಯುವತಿಗೆ ವೈದ್ಯನಿಂದ ಲೈಂಗಿಕ ಕಿರುಕುಳ; ಪ್ರಕರಣ ರದ್ದುಗೊಳಿಸಲು ಹೈಕೋರ್ಟ್‌ ನಕಾರ

“15ನೇ ಹಣಕಾಸಿನಲ್ಲಿ ಆರೋಗ್ಯ ಯೋಜನೆಗಳ ಸ್ಥಿತಿ ಗತಿಗಳ ಕುರಿತು ಹಿರಿಯ ಆರೋಗ್ಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಸಚಿವರು, ಯೋಜನೆಗಳ ಶೀಘ್ರ ಕಾರ್ಯಗತಗೊಳ್ಳುವ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸಬೇಕಾಗಿದೆ. ವಿಳಂಬ ನೀತಿಯನ್ನ ಅನುಸರಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

“ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕಟ್ಟಡ ದುರಸ್ಥಿ ಕಾರ್ಯಗಳು, ಆಸ್ಪತ್ರೆಗಳ ಮೂಲಸೌಕರ್ಯ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ 15ನೇ ಹಣಕಾಸಿನಲ್ಲಿ ಸಿಗುವ ಅನುದಾನವನ್ನು ಸಂಪೂರ್ಣವಾಗಿ ಸದುಪಯೋಗ ಪಡಿಸಿಕೊಳ್ಳಬೇಕು” ಎಂದು ಆರೋಗ್ಯ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಡಿಮ್ಹಾನ್ಸ್ ಸಂಸ್ಥೆಯ ಟೆಲಿ-ಮನಸ್ ವಿಭಾಗದ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಾಗಾರ

ಬೆಂಗಳೂರು ನಿಮ್ಹಾನ್ಸ್ ಟೆಲಿ-ಮನಸ್ ಅಪೆಕ್ಸ್ ತಂಡದಿಂದ ಧಾರವಾಡ ಡಿಮ್ಹಾನ್ಸ್ ಸಂಸ್ಥೆಯ ಟೆಲಿ-ಮನಸ್...

ಕಲಬುರಗಿ | ಶಾಲಾ ಮೇಲ್ಚಾವಣಿ ಕುಸಿದು ಮೂವರು ವಿದ್ಯಾರ್ಥಿಗಳಿಗೆ ಗಾಯ; ಗ್ರಾಮಸ್ಥರಿಂದ ಪ್ರತಿಭಟನೆ

ಸೇಡಂ ತಾಲ್ಲೂಕಿನ ಮಲ್ಕಾಪಲ್ಲಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಚಾವಣಿ...

ಗದಗ | ನಾಲ್ಕು ದಿನಗಳಿಂದ ರೈತರು ಪ್ರತಿಭಟನೆ, ಸ್ಪಂದಿಸದ ಆಡಳಿತ: ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಗೋವಿಂದಗೌಡ್ರ ಕಿಡಿ

"ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿ ರೈತರು ನಾಲ್ಕು ದಿನಗಳಿಂದ...

ಕೊಪ್ಪಳ | ಅಕ್ರಮ ಗಾಂಜಾ ಮಾರಾಟ : ಒಂದೇ ಕುಟುಂಬದ 3 ಸೇರಿ ನಾಲ್ವರ ಬಂಧನ

ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿ...

Download Eedina App Android / iOS

X