ಕುವೈತ್ ಬೆಂಕಿ ದುರಂತದಲ್ಲಿ ಮೃತಪಟ್ಟ 45 ಭಾರತೀಯರನ್ನು ಕರೆತಂದಿರುವ ವಾಯುಪಡೆಯ ವಿಶೇಷ ವಿಮಾನ ಕೇರಳದ ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು 10.30ಕ್ಕೆ ಲ್ಯಾಂಡ್ ಆಗಿದೆ.
ಕುವೈತ್‌ಗೆ ತೆರಳಿದ್ದ ವಿದೇಶಾಂಗ ಇಲಾಖೆಯ ರಾಜ್ಯ ಖಾತೆಯ ಕೇಂದ್ರ ಸಚಿವ ಕೃತಿ ವರ್ಧನ್ ಸಿಂಗ್ ಅವರು ವಿಮಾನ ಲ್ಯಾಂಡ್ ಆಗಿರುವ ಬಗ್ಗೆ ದೃಢೀಕರಿಸಿದ್ದಾರೆ.
ಕುವೈತ್‌ನ ಮಂಗಾಫ್ ನಗರದ ಆರು ಅಂತಸ್ತಿನ ಕಟ್ಟಡದಲ್ಲಿ ಬುಧವಾರ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ 48 ಮಂದಿ ಸಾವನ್ನಪ್ಪಿದ್ದಾರೆ. ವಸತಿ ಸೌಲಭ್ಯದಲ್ಲಿರುವ 176 ಭಾರತೀಯ ಕಾರ್ಮಿಕರಲ್ಲಿ 45 ಮಂದಿ ಸಾವನ್ನಪ್ಪಿದ್ದು, 33 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ರಾಯಭಾರ ಕಚೇರಿ ತಿಳಿಸಿದೆ.ಉಳಿದವರು ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೊಡುವ ಸ್ಥಾನದಲ್ಲಿರುವವರು ಒಳ್ಳೆಯದನ್ನೇ ಕೊಡಬೇಕು ಎಂದು ರಾಜ್ ಹೇಳಿದ್ದು ಯಾರಿಗೆ?
ಭಾರತೀಯರಲ್ಲಿ, 23 ಕೇರಳದಿಂದ, ಏಳು ತಮಿಳುನಾಡಿನಿಂದ, ತಲಾ ಇಬ್ಬರು ಆಂಧ್ರಪ್ರದೇಶ ಮತ್ತು ಒಡಿಶಾದಿಂದ ಮತ್ತು ಬಿಹಾರ, ಮಧ್ಯಪ್ರದೇಶ, ಕರ್ನಾಟಕ, ಪಶ್ಚಿಮ ಬಂಗಾಳ ಮತ್ತು ಉತ್ತರ ಪ್ರದೇಶದ ತಲಾ ಒಬ್ಬರು ಸೇರಿದ್ದಾರೆ.
ಸಂತ್ರಸ್ತರಲ್ಲಿ ಕೆಲವರು ಇತ್ತೀಚೆಗೆ ಕುವೈತ್‌ಗೆ ಕೆಲಸದ ನಿಮಿತ್ತ ತೆರಳಿದ್ದರೆ, ದಶಕಗಳಿಂದ ದೇಶದಲ್ಲಿ ನೆಲೆಸಿರುವ ಹಲವರು ಇದ್ದಾರೆ.
ಸಂತ್ರಸ್ತರಲ್ಲಿ ಹೆಚ್ಚಿನವರು ಕುವೈತ್‌ನಲ್ಲಿ ದೇಶದ ಅತಿದೊಡ್ಡ ನಿರ್ಮಾಣ ಸಂಸ್ಥೆಯಾದ ಎನ್‌ಟಿಬಿಸಿಯಲ್ಲಿ ಕೆಲಸ ಮಾಡುತ್ತಿದ್ದರು. ಬೆಂಕಿ ಹೊತ್ತಿಕೊಂಡ ಕಟ್ಟಡವೂ ಎನ್‌ಟಿಬಿಸಿಗೆ ಸೇರಿದ್ದಾಗಿದೆ.
