ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧೆಗೆ ಸಿದ್ಧತೆ ನಡೆಸಿದ್ದರು ಎಂದು ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಚನ್ನಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಸಿಪಿ ಯೋಗೇಶ್ವರ್, “ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಅಚ್ಚರಿ ಅಭ್ಯರ್ಥಿ ಹಾಕುತ್ತೇವೆ ಎಂದು ಡಿ.ಕೆ ಸುರೇಶ್ ಹೇಳಿದ್ದರು. ಆದರೆ, ಆ ಅಚ್ಚರಿ ಅಭ್ಯರ್ಥಿ ಈಗ ಜೈಲುಪಾಲಾಗಿದ್ದಾರೆ” ಎಂದಿದ್ದಾರೆ.
“ಕಾಂಗ್ರೆಸ್ ಪರವಾಗಿ ಚಿತ್ರನಟರೊಬ್ಬರು ಹೆಚ್ಚಾಗಿ ಪ್ರಚಾರ ಮಾಡಿದ್ದರು. ಹೀಗಾಗಿ, ಅವರನ್ನ ಕಾಂಗ್ರೆಸ್‌ಗೆ ಸೇರಿಸಿಕೊಂಡು ಚುನಾವಣೆಯಲ್ಲಿ ಕಣಕ್ಕಿಳಿಸಲು ಡಿ.ಕೆ ಸಹೋದರರು ಉಪಾಯ ಮಾಡಿದ್ದರು. ಆ ವ್ಯಕ್ತಿ ಯಾರೆಂದು ನೀವೇ ಊಹೆ ಮಾಡಿಕೊಳ್ಳಿ” ಎಂದು ಹೇಳಿದ್ದಾರೆ.
ಈ ಸುದ್ದಿ ಓದಿದ್ದೀರಾ? ಜೂನ್ 16ರಂದು ಬೆಳಗ್ಗೆ 6 ಗಂಟೆಯಿಂದಲೇ ನಮ್ಮ ಮೆಟ್ರೋ ಆರಂಭ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಅವರ ಗ್ಯಾಂಗ್ ಬಂಧಿತರಾಗಿರುವುದು ಮಾಧ್ಯಮಗಳಲ್ಲಿ ನೋಡಿದ್ದೇನೆ. ಇದೊಂದು ವಿಚಿತ್ರ ಪ್ರಕರಣ ಎನಿಸುತ್ತಿದೆ. ರಾಜಕೀಯಕ್ಕೆ ಬರಬೇಕು ಅಂತಾ ಆಸೆ ಇತ್ತೇನೋ ಆದರೆ, ಈ ರೀತಿ ಅನಾಹುತ ಆಗೋಗಿದೆ ಈ ಪ್ರಕರಣ ಏನಾಗುತ್ತದೆ ಕಾದು ನೋಡೊಣ” ಎಂದಿದ್ದಾರೆ.