ಆಂಧ್ರಪ್ರದೇಶದ ನೂತನ ಉಪ ಮುಖ್ಯಮಂತ್ರಿಯಾಗಿ ಜನಸೇನಾ ಪಕ್ಷದ ಮುಖ್ಯಸ್ಥ, ನಟ ಪವನ್ ಕಲ್ಯಾಣ್ ಅವರು ಇಂದು (ಶುಕ್ರವಾರ) ನೇಮಕಗೊಂಡಿದ್ದಾರೆ.
ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಸಂಪುಟ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದಾರೆ. ಪವನ್ ಕಲ್ಯಾಣ್ ಅವರಿಗೆ ಪಂಚಾಯತ್‌ರಾಜ್, ಗ್ರಾಮೀಣಾಭಿವೃದ್ಧಿ, ಪರಿಸರ ಮತ್ತು ಅರಣ್ಯ ಖಾತೆಯನ್ನು ನೀಡಲಾಗಿದೆ.
ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಸಂಪುಟ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದಾರೆ. ಪವನ್ ಕಲ್ಯಾಣ್ ಅವರಿಗೆ ಪಂಚಾಯತ್ ರಾಜ್, ಗ್ರಾಮೀಣಾಭಿವೃದ್ಧಿ, ಪರಿಸರ ಮತ್ತು ಅರಣ್ಯ ಖಾತೆಯನ್ನು ನೀಡಲಾಗಿದೆ. ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣವಚನ ಸ್ವೀಕರಿಸಿದ್ದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೊಡುವ ಸ್ಥಾನದಲ್ಲಿರುವವರು ಒಳ್ಳೆಯದನ್ನೇ ಕೊಡಬೇಕು ಎಂದು ರಾಜ್ ಹೇಳಿದ್ದು ಯಾರಿಗೆ?
ಇದೇ ವೇಳೆ ಜನಸೇನಾ ಮುಖ್ಯಸ್ಥ, ನಟ ಪವನ್ ಕಲ್ಯಾಣ್, ಚಂದ್ರಬಾಬು ನಾಯ್ಡು ಪುತ್ರ ನಾರಾ ಲೋಕೇಶ್ ಸೇರಿದಂತೆ ಹಲವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.
25 ಸದಸ್ಯರ ಸಚಿವ ಸಂಪುಟದಲ್ಲಿ ಪವನ್ ಕಲ್ಯಾಣ್ ಅವರ ನೇತೃತ್ವದ ಜನಸೇನಾದಿಂದ ಮೂವರು ಹಾಗೂ ಬಿಜೆಪಿಯಿಂದ ಒಬ್ಬರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.
ಎನ್. ಚಂದ್ರಬಾಬು ನಾಯ್ಡು ಅವರು ನಾಲ್ಕನೇ ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಎರಡು ಬಾರಿ ಅವಿಭಜಿತ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿದ್ದರು. ರಾಜ್ಯ ವಿಭಜನೆಯಾದ ನಂತರ ಈಗ ಎರಡನೇ ಬಾರಿಗೆ ಮುಖ್ಯಮಂತ್ರಿ ಸ್ಥಾನ ಅಲಂಕರಿಸಿದ್ದಾರೆ.
ರಾಜ್ಯದಲ್ಲಿ ನಡೆದ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ಎನ್‌ಡಿಎ ಕೂಟವು ಭರ್ಜರಿ ಗೆಲುವು ಸಾಧಿಸಿತ್ತು. ವಿಧಾನಸಭಾ ಚುನಾವಣೆಗಳಲ್ಲಿ 175 ಸ್ಥಾನಗಳ ಪೈಕಿ 164 ಸ್ಥಾನ ಮತ್ತು 25 ಲೋಕಸಭಾ ಸ್ಥಾನಗಳ ಪೈಕಿ 21 ಸ್ಥಾನ ಗೆದ್ದಿತ್ತು.
