ಕಾಂಗ್ರೆಸ್ ಪರ ಕೆಲಸ ಮಾಡಿದ್ದಕ್ಕೆ ಠಾಣೆಗೆ ಶಾಮಿಯಾನ ಹಾಕಿ ನಟ ದರ್ಶನ್‌ಗೆ ರಕ್ಷಣೆಯೇ: ಶೋಭಾ ಕರಂದ್ಲಾಜೆ ಪ್ರಶ್ನೆ

Date:

Advertisements

ಕೊಲೆ ಪ್ರಕರಣದಲ್ಲಿ ನಟ ದರ್ಶನ ಬಂಧನವಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, “ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಮೇಲೆ ಯಾರಿಗೂ ಭಯ ಇಲ್ಲ. ಇದು ಕೊಲೆಗಡುಕರ ಸರ್ಕಾರ ಆಗಿದೆ. ಚುನಾವಣೆಯಲ್ಲಿ ನಟ ದರ್ಶನ್ ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದರು ಎಂದು ಅವರನ್ನು ಶಾಮಿಯಾನ ಹಾಕಿ ರಕ್ಷಣೆ ಮಾಡುತ್ತಿದ್ದಾರೆ” ಎಂದಿದ್ದಾರೆ.

“ನಟ ದರ್ಶನ್ ಇರುವ ಪೊಲೀಸ್ ಠಾಣೆಗೆ ಶಾಮೀಯಾನ ಹಾಕಿ ರಕ್ಷಣೆ ಕೊಡಲಾಗಿದೆ. ದೊಡ್ಡವರಿಗೊಂದು ನ್ಯಾಯ, ಜನರಿಗೊಂದು ಕಾನೂನು, ಕಾಂಗ್ರೆಸ್ ಕಾರ್ಯಕರ್ತರಿಗೊಂದು ಕಾನೂನು ಎಂಬ ಸಂದೇಶವನ್ನು ಸರ್ಕಾರ ರವಾನಿಸಿದೆ. ಕಾನೂನು ರೀತಿಯಲ್ಲಿ ಸರ್ಕಾರ ಕ್ರಮ ವಹಿಸಲಿ. ಕೊಲೆಗಡುಕರ ರಕ್ಷಣೆಯನ್ನು ಸರ್ಕಾರ, ಪೊಲೀಸರು ಮಾಡಬಾರದು” ಎಂದು ಹೇಳಿದ್ದಾರೆ.

“ಈ ವೇಳೆ ಯಡಿಯೂರಪ್ಪ ಅವರ ಫೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, “ಈ ಪ್ರಕರಣದ ಬಗ್ಗೆ ನನಗೆ ಮಾಹಿತಿ ಇಲ್ಲ. ಮಾಧ್ಯಮದಲ್ಲಿ ನೋಡಿದ್ದೇನೆ ಅಷ್ಟೇ. ಯಡಿಯೂರಪ್ಪ ಅವರ ಸುದೀರ್ಘವಾದ ರಾಜಕಾರಣ ನೋಡಿದ್ದೇನೆ” ಎಂದಿದ್ದಾರೆ.

Advertisements

“ಈ ರೀತಿಯ ಆರೋಪಗಳು ಯಡಿಯೂರಪ್ಪ ವಿರುದ್ಧ ಯಾವತ್ತೂ ಕೇಳಿ ಬಂದಿರಲಿಲ್ಲ. ಈಗ ಏಕೆ ಕೇಳಿಬರುತ್ತಿವೆ. ಇದರಲ್ಲಿ ಸರ್ಕಾರದ ಪಾತ್ರದ ಬಗ್ಗೆ ಗೊತ್ತಿಲ್ಲ. ನ್ಯಾಯಾಲಯ ನೆಲದ ಕಾನೂನು ಎತ್ತಿ ಹಿಡಿಯಲಿದೆ ಎಂಬ ವಿಶ್ವಾಸವಿದೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪ್ರತಿ ಮನೆಯಿಂದ ₹100 ಘನತ್ಯಾಜ್ಯ ಶುಲ್ಕ ಸಂಗ್ರಹಕ್ಕೆ ಎಎಪಿ ವಿರೋಧ

ಯಡಿಯೂರಪ್ಪ ವಿರುದ್ಧದ ಪ್ರಕರಣ ಜನ ಗಮನಿಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಎಲ್ಲರ ಮೇಲೆ ಕೇಸ್ ಹಾಕುವಂತಹ ಪ್ರಕರಣಗಳನ್ನು ಕೂಡಾ ಜನ ಗಮನಿಸ್ತಿದ್ದಾರೆ. ಏನಾಗುತ್ತದೆ ಎಂಬುದನ್ನ ಕಾದು ನೋಡೋಣ ಎಂದು ಶೋಭಾ ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

ಗದಗ | ಬಸವಾದಿ ಶರಣರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಎಸ್. ವಿ. ಸಂಕನೂರು

"12ಣೆ ಶತಮಾನದಲ್ಲಿ ಶರಣೆಯರು ಮಹಿಳೆಯರಿಗೆ ಸ್ವತಂತ್ರವಾಗಿ ಬದುಕಬೇಕು ಎಂಬ ಆಶಯವನ್ನು ಹೊಂದಿದ್ದರು....

ಶ್ರೀರಂಗಪಟ್ಟಣ | ಪರಿಸರಸ್ನೇಹಿ ಗಣಪನ ಪ್ರತಿಷ್ಠಾಪನೆಗಾಗಿ ಜಾಗೃತಿ ಜಾಥಾ

ಗೌರಿ ಗಣೇಶನ ಹಬ್ಬದ ಪ್ರಯುಕ್ತ ರೋಟರಿ ಶ್ರೀರಂಗಪಟ್ಟಣ ಹಾಗೂ ಅಚೀವರ್ಸ್ ಅಕಾಡೆಮಿ...

Download Eedina App Android / iOS

X