ಕಾಂಗ್ರೆಸ್‌ನದ್ದು ಬೋಗಸ್ ಕಾರ್ಡ್, ಚುನಾವಣೆವರೆಗೂ ಮಾತ್ರ ಗ್ಯಾರಂಟಿ, ಆಮೇಲೆ ಗಳಗಂಟಿ: ಸಿಎಂ ಬೊಮ್ಮಾಯಿ

Date:

Advertisements
  • ರಾಣೆಬೆನ್ನೂರಿನಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್ ಕುಮಾರ್ ಪೂಜಾರ ಪರವಾಗಿ ಸಿಎಂ ರೋಡ್ ಶೋ
  • ಚುನಾವಣೆ ಸಂದರ್ಭದಲ್ಲಿ ಜನರಿಗೆ ಮೋಸ ಮಾಡುವ ತಂತ್ರ ಕಾಂಗ್ರೆಸ್‌ನದ್ದು: ಸಿಎಂ ಬೊಮ್ಮಾಯಿ

ಮೋಸ ಮಾಡುವ ಕಾಂಗ್ರೆಸ್ ಈಗ ಮತ್ತೆ ಗ್ಯಾರಂಟಿ ಕಾರ್ಡ್ ಜೊತೆ ಬಂದಿದೆ. ಅವರ ಮೇಲೆ ಜನರಿಗೆ ವಿಶ್ವಾಸ ಹೋಗಿದೆ. ಅದು ಬೋಗಸ್ ಕಾರ್ಡ್ ಆಗಿದ್ದು, ಚುನಾವಣೆವರೆಗೂ ಮಾತ್ರ ಗ್ಯಾರಂಟಿ, ಆಮೇಲೆ ಗಳಗಂಟಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದರು.

ಸೋಮವಾರ ರಾಣೆಬೆನ್ನೂರಿನಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್ ಕುಮಾರ್ ಪೂಜಾರ ಪರವಾಗಿ ರೋಡ್ ಶೋ ನಡೆಸಿ ಮಾತನಾಡಿದ ಅವರು, “ಕಾಂಗ್ರೆಸ್ ಅವರು ಈಗ 10 ಕೆಜಿ ಅಕ್ಕಿ ಕೊಡುವುದಾಗಿ ಚುನಾವಣೆ ಸಂದರ್ಭದಲ್ಲಿ ಹೇಳುತ್ತಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಜನರಿಗೆ ಮೋಸ ಮಾಡುವ ತಂತ್ರ ಕಾಂಗ್ರೆಸ್‌ನದ್ದು” ಎಂದರು.

“ಕಾಂಗ್ರೆಸ್‌ ನವರು ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುತ್ತಾರೆ. ಎಸ್ಸಿ ಎಸ್ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳದ ಬೇಡಿಕೆ ಇದ್ದರೂ ಕಾಂಗ್ರೆಸ್ ಅವರು ಮಾಡಲಿಲ್ಲ. ನಾನು ಮೀಸಲಾತಿ ಹೆಚ್ಚಳ ಮಾಡಲು ಮುಂದಾದಾಗ ಜೇನುಗೂಡಿಗೆ ಕೈ ಹಾಕಬೇಡಿ ಅಂದರು. ನಾನು ಜೇನು ಕಡಿಸಿಕೊಂಡು ಜೇನು ತುಪ್ಪ ನೀಡಿದ್ದೇನೆ. ಆಂತರಿಕ ಮೀಸಲಾತಿ ಹೆಚ್ಚಳ ಮಾಡಿ ಎಲ್ಲ ಸಮುದಾಯಕ್ಕೆ ನ್ಯಾಯ ಕೊಡಿಸುತ್ತಿದ್ದೇವೆ” ಎಂದು ಸಿಎಂ ತಿಳಿಸಿದರು.

Advertisements

“ಜಯವಾಹಿನಿ ಎಲ್ಲೇ ಹೋದರೂ ಜನರಿಂದ ಅಭೂತಪೂರ್ವ ಜನಬೆಂಬಲ ಸಿಗ್ತಿದೆ. ಕಳೆದ 3 ವರ್ಷದಲ್ಲಿ ರಾಜ್ಯದಲ್ಲಿ ಬಿಜೆಪಿ ಸುನಾಮಿ ಎದ್ದಿದೆ. 2023ರ ಚುನಾವಣೆಯಲ್ಲೂ ಬಿಜೆಪಿಯನ್ನು ಬೆಂಬಲಿಸಬೇಕು. ಅರುಣ್ ಕುಮಾರ್ ಅವರನ್ನು ಗೆಲ್ಲಿಸಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಚುನಾವಣೆ 2023 | ಈದಿನ.ಕಾಮ್‌ ಸಮೀಕ್ಷೆ-4: ಭ್ರಷ್ಟಾಚಾರವೇ ಚುನಾವಣೆಯ ಪ್ರಧಾನ ಸಂಗತಿ

“ಈ ಭಾಗದಲ್ಲಿ ನೇಕಾರ ಸಮುದಾಯ ದೊಡ್ಡ ಪ್ರಮಾಣದಲ್ಲಿದೆ. ಅವರಿಗಾಗಿ ಜವಳಿ ಪಾರ್ಕ್ ಮಾಡುವುದಾಗಿ ಹೇಳಿದ್ದೆವು. ಈಗಾಗಲೇ ಜವಳಿ ಪಾರ್ಕ್ ಮಂಜೂರಾತಿ ಆಗಿ ಕೆಲಸ ಪ್ರಾರಂಭ ಆಗ್ತಿದೆ. ಟೆಂಡರ್ ಆಗಿದೆ, ಚುನಾವಣೆ ಮುಗಿದ ನಂತರ ಕಾಮಗಾರಿ ಆರಂಭವಾಗಲಿದೆ. ಸ್ಲಂಬೋರ್ಡ್ ನಿಂದ ಬಡವರಿಗೆ 1500 ಮನೆಗಳನ್ನು ನಿರ್ಮಾಣ ಮಾಡಲಾಗಿದೆ” ಎಂದರು.

“ಎಲ್ಲ ಸಮುದಾಯಗಳಿಗೂ ನಾವು ಸಾಮಾಜಿಕ ನ್ಯಾಯ ಕೊಡುವ ಪ್ರಯತ್ನ ಮಾಡಿದ್ದೇವೆ. ಅಧಿಕಾರವನ್ನು ದೀನ ದಲಿತರ ಪರವಾಗಿ ಬಳಕೆ ಮಾಡಿ ಅವರಿಗೆ ರಕ್ಷಣೆ ಕೊಟ್ಟು ಮೀಸಲಾತಿ ನೀಡದರೆ ಅದೇ ಸಾಮಾಜಿಕ ನ್ಯಾಯ. ನಿಜವಾದ ಸಾಮಾಜಿಕ ನ್ಯಾಯ ನೀಡ್ತಿರೋದು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ” ಎಂದು ಬೊಮ್ಮಾಯಿ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಹನುಮಂತ ಮೊದಲ ಬಾಹ್ಯಾಕಾಶ ಯಾತ್ರಿಕ’ ಎಂದ ಬಿಜೆಪಿ ನಾಯಕ ಅನುರಾಗ್ ಠಾಕೂರ್; ಟ್ರೋಲ್‌ಗೆ ಗುರಿ

"ಭಗವಾನ್ ಹನುಮಂತ ಮೊದಲ ಬಾಹ್ಯಾಕಾಶ ಯಾತ್ರಿಕ" ಎಂದು ಹೇಳುವ ಮೂಲಕ ಬಿಜೆಪಿ...

ಡಿ ಕೆ ಶಿವಕುಮಾರ್‌ ಆರ್​ಎಸ್​ಎಸ್ ಗೀತೆ ಹಾಡಿದ್ದಕ್ಕೆ ಕ್ಷಮೆ ಕೇಳಬೇಕು: ಬಿ ಕೆ ಹರಿಪ್ರಸಾದ್ ಆಗ್ರಹ

ಕೆಪಿಸಿಸಿ ಅಧ್ಯಕ್ಷರಾಗಿ ಡಿ ಕೆ ಶಿವಕುಮಾರ್‌ ಆರ್​ಎಸ್​ಎಸ್ ಗೀತೆ ಹಾಡಿದ್ದರೆ ಕ್ಷಮೆ...

ಕಲ್ಯಾಣ ಕರ್ನಾಟಕದಲ್ಲಿ 36 ಪಿಯು ಉಪನ್ಯಾಸಕರ ಹುದ್ದೆ ಭರ್ತಿಗೆ ಸರ್ಕಾರ ಅನುಮತಿ!

ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ಸರ್ಕಾರಿ...

ಆಧಾರ್ ಕಾರ್ಡ್‌ ಪೌರತ್ವದ ಪುರಾವೆಯಲ್ಲ: ಬಿಜೆಪಿಯ ಅಮಿತ್ ಮಾಳವೀಯ

ಆಧಾರ್ ಕಾರ್ಡ್‌ ಪೌರತ್ವದ ಪುರಾವೆಯಲ್ಲ. ಸುಪ್ರೀಂ ಕೋರ್ಟ್ ತನ್ನ ಮಧ್ಯಂತರ ಆದೇಶದಲ್ಲಿ...

Download Eedina App Android / iOS

X