ವ್ಯಾಪಾರಿಗಳಿಗೆ ಪರವಾನಿಗೆ ನೀಡಲು ಕ್ರಮ ವಹಿಸಿ: ಅಧಿಕಾರಿಗಳಿಗೆ ಸಚಿವ ಮಹದೇವಪ್ಪ ಸೂಚನೆ

Date:

Advertisements

ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್ ಸಿ ಮಹದೇವಪ್ಪ ಅವರು ತಮ್ಮ ಇಲಾಖೆಯಡಿ ಬರುವ ವಿವಿಧ ಯೋಜನೆಗಳಿಗೆ ಸಂಬಂಧಿಸಿದಂತೆ ಶುಕ್ರವಾರ ವಿಧಾನಸಭೆಯ ಸಭಾಂಗಣದಲ್ಲಿ ನೋಡಲ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಸರ್ಕಾರದ ಎಲ್ಲಾ ಇಲಾಖೆಗಳಿಗೆ 2023-24 ನೇ ಸಾಲಿನಲ್ಲಿ ಹಂಚಿಕೆಯಾದ ಅನುದಾನದ ಪ್ರಗತಿ ಮತ್ತು 2024-25 ನೇ ಸಾಲಿನ ಅನುದಾನ ಹಂಚಿಕೆಗೆ ಸಂಬಂಧಿಸಿದಂತೆ ವಿಸ್ತೃತವಾದ ಚರ್ಚೆಯನ್ನು ಸಚಿವರು ಸಭೆಯಲ್ಲಿ ನಡೆಸಿದರು.

ಪ್ರವಾಸೋದ್ಯಮ ಇಲಾಖೆ ಸಂಬಂಧ ಮಾತನಾಡಿ, “ಸಿಬ್ಬಂದಿಗಳಿಗೆ ಸೂಕ್ತ ರೀತಿಯ ತರಬೇತಿ ನೀಡಬೇಕು. ಕ್ಯಾಂಟಿನ್ ಹಾಗೂ ಇತರೆ ವ್ಯಾಪಾರಿ ಪರವಾನಿಗೆ ನೀಡುವ ಕ್ರಮ ವಹಿಸಬೇಕು” ಎಂದು ಸೂಚನೆ ನೀಡಿದರು.

Advertisements

“ಕನ್ನಡ ಸಂಸ್ಕೃತಿ ಇಲಾಖೆಯಲ್ಲಿ ಸ್ಥಳೀಯ ಕಲೆಗಳಿಗೆ ಹೆಚ್ಚಿನ ಅನುದಾನ ನೀಡಿ ಉತ್ತೇಜನ ನೀಡಬೇಕು. ಪಶುಸಂಗೋಪನೆ ಇಲಾಖೆಯಡಿ ಕೋಳಿ ಮರಿ ಹಾಗೂ ಮೇಕೆಗಳನ್ನು ಅರ್ಹ ಫಲಾನುಭವಿಗಳಿಗೆ ಹಂಚಿಕೆ ಮಾಡುವ ಮೂಲಕ ಅವರ ಜೀವನೋಪಯಕ್ಕೆ ನೆರವಾಗಬೇಕು” ಎಂದು ಸಲಹೆ ನೀಡಿದರು.

“ವಸತಿ ಯೋಜನೆಯಡಿ ಅಗತ್ಯ ಹಣಕಾಸು ಸೌಲಭ್ಯವನ್ನು ನೀಡಿದ್ದರೂ ಎಸ್‌ಸಿಎಸ್‌ಪಿ ಹಾಗೂ ಟಿಎಸ್‌ಪಿ ಯೋಜನೆಯಡಿ ವಸತಿ ಸೌಲಭ್ಯವನ್ನು ಕಲ್ಪಿಸಲು ಸಾಧ್ಯವಾಗದ್ದಕ್ಕೆ ಅಧಿಕಾರಿಗಳಿಗೆ ಕಾರ್ಯೋನ್ಮುಖರಾಗಬೇಕು” ಎಂದು ಸೂಚನೆ ನೀಡಿದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವಾರ್ಷಿಕ ಪರೀಕ್ಷೆಯಲ್ಲಿ ನಕಲು ಮಾಡುವುದನ್ನು ತಡೆಗಟ್ಟಲು ಸಿಸಿ ಕ್ಯಾಮೆರಾವನ್ನು ಪರೀಕ್ಷಾ ಕೇಂದ್ರಗಳಲ್ಲಿ ಪರಿಣಾಮಾಕಾರಿಯಾಗಿ ಅಳವಡಿಸಬೇಕು. ಸಣ್ಣ ಸಣ್ಣ ಗ್ರಂಥಾಲಯಗಳ ನಿರ್ಮಾಣಕ್ಕೆ ಚಿಂತನೆ ಇದ್ದು, ಇದಕ್ಕಾಗಿ ಎಸ್‌ಸಿಎಸ್‌ಪಿ ಅನುದಾನದ ನೀಡಬೇಕೆಂಬ ಕೋರಿಕೆಯ ಕುರಿತು ಚಿಂತನೆ ನಡೆಸಿದರು.

ಸಣ್ಣ ಕೈಗಾರಿಕಾ ಇಲಾಖೆಯ KAIDB ಭೂಮಿಯನ್ನು ಮುಖ್ಯ ಸ್ಥಳದಲ್ಲಿ ನೀಡಬೇಕು ಮತ್ತು ಆಯ್ಕೆ ಮಾಡುವ ವೇಳೆ ಮೂಲ ಇಲಾಖೆಯನ್ನು ಪರಿಗಣಿಸಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಿ.ಮಣಿವಣ್ಣನ್, ಆಯುಕ್ತರಾದ ರಾಕೇಶ್ ಕುಮಾರ್ ಸೇರಿದಂತೆ ಇಲಾಖೆಯ ಸಲಹೆಗಾರರು ಹಾಜರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X