2010ರಲ್ಲಿ ನಡೆದಿದ್ದ ಸಮಾರಂಭವೊಂದರಲ್ಲಿ ಪ್ರಚೋದನಕಾರಿ ಭಾಷಣಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಲೇಖಕಿ ಅರುಂಧತಿ ರಾಯ್ ವಿರುದ್ಧ ಭಯೋತ್ಪಾದನಾ-ವಿರೋಧಿ ಕಾನೂನು (ಯುಎಪಿಎ) ಅಡಿಯಲ್ಲಿ ತನಿಖೆ ನಡೆಸಲು ದೆಹಲಿ ಲೆಫ್ಟಿನೆಂಟ್ ಗವರ್ನರ್ ನಿರ್ದೇಶನ ನೀಡಿರುವುದಾಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ದೆಹಲಿ ಲೆಫ್ಟಿನೆಂಟ್ ಗವರ್ನರ್ ಅವರ ಅನುಮತಿ ಮೇರೆಗೆ ಅರುಂಧತಿ ರಾಯ್ ವಿರುದ್ಧ ಭಯೋತ್ಪಾದನಾ-ವಿರೋಧಿ ಕಾನೂನಿನ ಅಡಿ ತನಿಖೆ ನಡೆಸಲು ದೆಹಲಿ ಪೊಲೀಸರು ಮುಂದಾಗಿರುವುದಾಗಿ ವರದಿಯಾಗಿದೆ.
2010ರಲ್ಲಿ ‘ಆಝಾದಿ-ದಿ ಓನ್ಲಿ ವೇ’ ಬ್ಯಾನರ್ ಅಡಿಯಲ್ಲಿ ಆಯೋಜಿಸಲಾಗಿದ್ದ ಸಮ್ಮೇಳನದಲ್ಲಿ ಅರುಂಧತಿ ರಾಯ್ ಪ್ರಚೋದನಕಾರಿ ಭಾಷಣ ಮಾಡಿದ್ದರು ಎಂದು ಆರೋಪಿಸಲಾಗಿತ್ತು.
Delhi LG, VK Saxena has sanctioned the prosecution of Arundhati Roy and former Professor of International Law in Central University of Kashmir, Dr. Sheikh Showkat Hussain. The FIR in the matter was registered on a complaint made by Sushil Pandit on 28.10.2010. Roy and Hussain had… pic.twitter.com/HzvVcCayg7
— ANI (@ANI) June 14, 2024
ರಾಜಧಾನಿ ದೆಹಲಿಯ ಎಲ್‌ಟಿಜಿ ಸಭಾಂಗಣದಲ್ಲಿ ಅಕ್ಟೋಬರ್ 21, 2010ರಂದು, “ಕಮಿಟಿ ಫಾರ್ ದಿ ರಿಲೀಸ್ ಆಫ್ ಪೊಲಿಟಿಕಲ್ ಪ್ರಿಸನರ್ಸ್” ಎಂಬ ಸಂಘಟನೆ ಆಯೋಜಿಸಿದ್ದ ಸಮಾರಂಭದಲ್ಲಿ ಪ್ರಚೋದನಕಾರಿ ಭಾಷಣ ನೀಡಿದ್ದರೆಂದು ಆರೋಪಿಸಲಾಗಿತ್ತು. ಕಾಶ್ಮೀರದ ಸಾಮಾಜಿಕ ಹೋರಾಟಗಾರ ಸುಶೀಲ್ ಪಂಡಿತ್ ಅವರು ಈ ಸಂಬಂಧ ದೂರು ದಾಖಲಿಸಿದ್ದರು. ಈ ಪ್ರಕರಣದ ಎಫ್‌ಐಆರ್‌ಗಳನ್ನು ಹೊಸದಿಲ್ಲಿಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ನವೆಂಬರ್ 27, 2010ರಂದು ದಾಖಲಾಗಿತ್ತು.
ಪ್ರಕರಣದಲ್ಲಿ ಖ್ಯಾತ ಲೇಖಕಿ ಅರುಂಧತಿ ರಾಯ್ ಮತ್ತು ಕಾಶ್ಮೀರದ ಕೇಂದ್ರೀಯ ವಿವಿಯಲ್ಲಿ ಅಂತಾರಾಷ್ಟ್ರೀಯ ಕಾನೂನು ವಿಷಯದ ಮಾಜಿ ಪ್ರೊಫೆಸರ್ ಶೇಖ್ ಶೌಕತ್ ಹುಸೇನ್ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಅಂದಿನ ದಿಲ್ಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಅನುಮತಿ ನೀಡಿದ್ದರು. ಐಪಿಸಿಯ ಸೆಕ್ಷನ್ 153ಎ, 153ಬಿ ಮತ್ತು 505 ಅನ್ವಯ ಪ್ರಕರಣ ದಾಖಲಾಗಿತ್ತು.
ದೇಶದ್ರೋಹದ ಪ್ರಕರಣ ದಾಖಲಾಗಿದ್ದರೂ ಮೇ 5, 2022ರ ಸುಪ್ರೀಂ ಕೋರ್ಟ್ ಆದೇಶಾನುಸಾರ ಸೆಕ್ಷನ್ 124ಎ ಅನ್ವಯ ಕಾನೂನು ಕ್ರಮಕೈಗೊಳ್ಳಲು ಅನುಮತಿಸಲಾಗಿಲ್ಲ. ಆದರೆ ಉಳಿದ ಸೆಕ್ಷನ್‌ಗಳನ್ವಯ ಪ್ರಕರಣಗಳನ್ನು ಸಿಜೆಐ ನೇತೃತ್ವದ ತ್ರಿಸದಸ್ಯ ಪೀಠ ಸಂವಿಧಾನಿಕ ಪೀಠದ ಮುಂದೆ ಸೆಪ್ಟೆಂಬರ್ 12, 2023ರಂದು ಇರಿಸಿತ್ತು ಎಂದು ಎಲ್‌ಜಿ ಕಚೇರಿ ತಿಳಿಸಿದೆ.
Breaking: Delhi lieutenant governor Vinai Kumar Saxena on Friday granted sanction to prosecute author Arundhati Roy and former Professor of International Law at the Central University of Kashmir, Dr Sheikh Showkat Hussain under UAPA and Sedition.https://t.co/dmLzX1smek pic.twitter.com/opwtAaMulM
— Maktoob (@MaktoobMedia) June 14, 2024
2010ರಲ್ಲಿ ಮಾಡಿದ್ದ ಪ್ರಚೋದನಕಾರಿ ಭಾಷಣದ ಆರೋಪಕ್ಕಾಗಿ ದೆಹಲಿ ಎಲ್‌ಜಿ ಶುಕ್ರವಾರ ಅರುಂಧತಿ ರಾಯ್ ವಿರುದ್ಧ ಯುಎಪಿಎ ಅಡಿಯಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರಿಂದ, ರಾಯ್ ವಿರುದ್ಧ ಭಯೋತ್ಪಾದನಾ ವಿರೋಧಿ ಕಾನೂನಿನಡಿಯಲ್ಲಿ ಕಾನೂನು ಕ್ರಮ ಜರುಗಿಸಲು ದೆಹಲಿ ಪೊಲೀಸರು ಮುಂದಾಗಿದ್ದಾರೆ.
ಇದನ್ನು ಓದಿದ್ದೀರಾ? ವ್ಯಾಪಾರಿಗಳಿಗೆ ಪರವಾನಿಗೆ ನೀಡಲು ಕ್ರಮ ವಹಿಸಿ: ಅಧಿಕಾರಿಗಳಿಗೆ ಸಚಿವ ಮಹದೇವಪ್ಪ ಸೂಚನೆ
ವರದಿಗಳ ಪ್ರಕಾರ, ಸಮಾರಂಭದಲ್ಲಿ ಭಾಷಣ ಮಾಡುವಾಗ ಬೂಕರ್ ಪ್ರಶಸ್ತಿ ವಿಜೇತ ಲೇಖಕರು ಕೂಡ ಆಗಿರುವ ಅರುಂಧತಿ ರಾಯ್, “ಕಾಶ್ಮೀರವು ಎಂದಿಗೂ ಭಾರತದ ಒಕ್ಕೂಟದ ಭಾಗವಾಗಿಲ್ಲ ಮತ್ತು ಸಶಸ್ತ್ರ ಪಡೆಗಳಿಂದ ಬಲವಂತವಾಗಿ ಆಕ್ರಮಿಸಿಕೊಳ್ಳಲ್ಪಟ್ಟಿದೆ” ಎಂದು ಹೇಳಿದ್ದರು ಎನ್ನಲಾಗಿದೆ.
ಕಾರ್ಯಕ್ರಮದ ನಂತರ, ಸಮ್ಮೇಳನದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಲೇಖಕ ಮತ್ತು ಇತರ ಭಾಷಣಕಾರರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
