ಕೈಗಾರಿಕೆಗಳಿಗೆ ಉತ್ತೇಜನ ಎಲ್ಲ ರಾಜ್ಯಗಳಿಗೂ ಸಮಾನವಾಗಿರಲಿ:‌ ಎಚ್‌ಡಿಕೆ ಮಾತಿಗೆ ಎಂ ಬಿ ಪಾಟೀಲ್ ಸಹಮತ

Date:

Advertisements

ಗುಜರಾತಿನ ಸಾನಂದ್‌ನಲ್ಲಿ ಸೆಮಿಕಂಡಕ್ಟರ್ ಉತ್ಪಾದನಾ ಘಟಕವನ್ನು ಸ್ಥಾಪಿಸುತ್ತಿರುವ ಅಮೆರಿಕ ಮೂಲದ ಮೈಕ್ರಾನ್ ಟೆಕ್ನಾಲಜಿ ಕಂಪನಿ ಸೃಷ್ಟಿಸಲಿರುವ ಪ್ರತೀ ಉದ್ಯೋಗಕ್ಕೆ ದೇಶದ ಬೊಕ್ಕಸದಿಂದ 3.20 ಕೋಟಿ ರೂ.ಗಳಷ್ಟು ಪ್ರೋತ್ಸಾಹ ಧನ ಕೊಡುತ್ತಿರುವುದು ಸರಿಯಲ್ಲ. ಈ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್ ಡಿ ಕುಮಾರಸ್ವಾಮಿ ಪ್ರಶ್ನಿಸಿರುವುದು ಸರಿಯಾಗಿದೆ ಎಂದು ಕೈಗಾರಿಕಾ ಸಚಿವ ಎಂ ಬಿ ಪಾಟೀಲ್‌ ಹೇಳಿದರು.

ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಶುಕ್ರವಾರ ಬೆಂಗಳೂರಿನಲ್ಲಿ ಆಡಿರುವ ಮಾತುಗಳನ್ನು ಬೆಂಬಲಿಸಿ ‘ಎಕ್ಸ್’ ತಾಣದಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ” ಇದೇ ನೀತಿ ಮುಂದುವರಿಯುವುದಾದರೆ, ದೇಶದ ಎಲ್ಲ ರಾಜ್ಯಗಳಿಗೂ ಇದೇ ರೀತಿಯ ಸಮಾನ ಸೂತ್ರ ಮತ್ತು ಅವಕಾಶ ಸಿಗಲಿ” ಎಂದಿದ್ದಾರೆ.

“ಮೈಕ್ರಾನ್ ಕಂಪನಿ 2.70 ಬಿಲಿಯನ್ ಡಾಲರ್ ವೆಚ್ಚದಲ್ಲಿ ಗುಜರಾತಿನಲ್ಲಿ ತನ್ನ ಉತ್ಪಾದನಾ ಘಟಕ ಸ್ಥಾಪಿಸುತ್ತಿದ್ದು, 5,000 ಉದ್ಯೋಗಗಳನ್ನು ಸೃಷ್ಟಿಸುವುದಾಗಿ ಹೇಳಿದೆ. ಆದರೆ ಇದಕ್ಕೆ ಪ್ರತಿಯಾಗಿ ಕೇಂದ್ರ ಸರಕಾರದಿಂದ ಶೇಕಡಾ 50 ಮತ್ತು ಗುಜರಾತ್ ಸರಕಾರದಿಂದ ಶೇಕಡ 20ರಷ್ಟು ಪ್ರೋತ್ಸಾಹ ಧನವನ್ನು ಅದು ಪಡೆಯುತ್ತಿದೆ. ಅಂದರೆ ಕೇಂದ್ರ ಮತ್ತು ರಾಜ್ಯ ಸರಕಾರಗಳ ಬೊಕ್ಕಸದಿಂದ ಕಂಪನಿಗೆ 2 ಬಿಲಿಯನ್ ಡಾಲರ್ ಸಂದಾಯ ಆಗುತ್ತಿದೆ. ಇದರ ಹಿಂದಿರುವ ತರ್ಕ ಸಮರ್ಥನೀಯವಲ್ಲ” ಎಂದು ಕುಮಾರಸ್ವಾಮಿ ಹೇಳಿದ್ದರು.

Advertisements

“ಇಷ್ಟೊಂದು ಭಾರೀ ಪ್ರಮಾಣದ ಪ್ರೋತ್ಸಾಹಕ ಧನವನ್ನು ಸರಕಾರದ ಬೊಕ್ಕಸದಿಂದಲೇ ನೀಡುತ್ತಿದ್ದರೆ ಇದನ್ನು ಸಾರ್ವಜನಿಕ ವಲಯದ ಉದ್ಯಮವೆಂದೇ ಪರಿಗಣಿಸಬಹುದು” ಎಂದು ಎಂ ಬಿ ಪಾಟೀಲ್‌ ಹೇಳಿದ್ದಾರೆ.

ಕೈಗಾರಿಕಾ ಬೆಳವಣಿಗೆಗೆ ಸೂಕ್ತವಾದ ಕಾರ್ಯ ಪರಿಸರ ಸೃಷ್ಟಿಸಲು ಈ ರೀತಿಯ ಪ್ರೋತ್ಸಾಹ ಧನ ನೀಡುತ್ತಿದ್ದರೆ ಅದು ಸ್ವಾಗತಾರ್ಹ. ಇದು ವಾಸ್ತವವಾಗಿದ್ದರೆ, ಎಲ್ಲ ರಾಜ್ಯಗಳಿಗೂ ಇಂತಹ ಸಮಾನ ಅವಕಾಶ ಸಿಗಬೇಕು. ಆಗ ಮಾತ್ರ ದೇಶದೆಲ್ಲೆಡೆ ಕೈಗಾರಿಕಾ ಬೆಳವಣಿಗೆ ಕಾಣಬಹುದು. ಆದರೆ ಕೇಂದ್ರದ ಈಗಿನ ನೀತಿಯು ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯವಾದ ಗುಜರಾತಿನ ಬಗ್ಗೆ ಮಾತ್ರ ವಿಶೇಷ ಒಲವನ್ನು ತೋರಿಸುವಂತಿದೆ. ಇದು ತಾರತಮ್ಯ ‌ಮತ್ತು ಅಸಮಾನತೆಗೆ ದಾರಿ ಮಾಡಿಕೊಡಲಿದೆ ಅಷ್ಟೇ ಎಂದು ಸಚಿವರು ಆತಂಕ ವ್ಯಕ್ತಪಡಿಸಿದ್ದಾರೆ ಎಂದಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X