ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪೆಟ್ರೋಲ್ಗೆ ₹3, ಡೀಸೆಲ್ಗೆ ₹3.5 ಏರಿಕೆ ಮಾಡಲಾಗಿದ್ದು, ತಕ್ಷಣದಿಂದಲೇ ಪರಿಷ್ಕೃತ ದರ ಜಾರಿಯಾಗಲಿದೆ ಎಂದು ಸರ್ಕಾರ ಹೇಳಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆಯನ್ನು ಖಂಡಿಸಿರುವ ವಿರೋಧ ಪಕ್ಷದ ನಾಯಕ ಆರ್ ಅಶೋಕ್, “ಲೋಕಸಭಾ ಚುನಾವಣೆಯಲ್ಲಿ ಕನ್ನಡಿಗರು ಬಿಜೆಪಿಗೆ ಮತ ಹಾಕಿದ್ದಕ್ಕೆ ಸೇಡು ತೀರಿಸಿಕೊಳ್ಳಲು ಹೊರಟಿದೆ ಈ ಜನವಿರೋಧಿ ಕಾಂಗ್ರೆಸ್ ಸರ್ಕಾರ” ಎಂದು ಕಿಡಿಕಾರಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಕನ್ನಡಿಗರು ಬಿಜೆಪಿಗೆ ಮತ ಹಾಕಿದ್ದಕ್ಕೆ ಸೇಡು ತೀರಿಸಿಕೊಳ್ಳಲು ಹೊರಟಿದೆ ಈ ಜನವಿರೋಧಿ ಕಾಂಗ್ರೆಸ್ ಸರ್ಕಾರ.
ಅವೈಜ್ಞಾನಿಕ ಗ್ಯಾರೆಂಟಿಗಳಿಂದ ರಾಜ್ಯದ ಬೊಕ್ಕಸವನ್ನು ಖಾಲಿ ಮಾಡಿರುವ @INCKarnataka ಸರ್ಕಾರ ಕನ್ನಡಿಗರ ಮೇಲೆ ತೆರಿಗೆ ಭಾರ ಹೊರಿಸಿ ಖಜಾನೆ ತುಂಬಿಸಲು ಹೊರಟಿದೆ.
ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ… pic.twitter.com/JKUwZZcGKb
— R. Ashoka (ಮೋದಿ ಅವರ ಕುಟುಂಬ) (@RAshokaBJP) June 15, 2024
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಲೋಕಸಭೆ ಚುನಾವಣೆಯಲ್ಲಿ ಕನ್ನಡಿಗರು ಬಿಜೆಪಿಗೆ ಮತ ಹಾಕಿದ್ದಕ್ಕೆ ಸೇಡು ತೀರಿಸಿಕೊಳ್ಳಲು ಹೊರಟಿದೆ. ಅವೈಜ್ಞಾನಿಕ ಗ್ಯಾರಂಟಿಗಳಿಂದ ರಾಜ್ಯದ ಬೊಕ್ಕಸವನ್ನು ಖಾಲಿ ಮಾಡಿರುವ ಕಾಂಗ್ರೆಸ್ ಸರ್ಕಾರ, ಕನ್ನಡಿಗರ ಮೇಲೆ ತೆರಿಗೆ ಭಾರ ಹೊರಿಸಿ ಖಜಾನೆ ತುಂಬಿಸಲು ಹೊರಟಿದೆ” ಎಂದು ದೂರಿದ್ದಾರೆ.
“ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಮಾಡಿ ಆದೇಶ ಹೊರಡಿಸಿರುವ ಸಿಎಂ ಸಿದ್ದರಾಮಯ್ಯ ಸರ್ಕಾರ, ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ ಮತ್ತು ಡೀಸೆಲ್ ಬೆಲೆ 3.50 ರೂ. ಹೆಚ್ಚಳ ಮಾಡಿ ಸಾರ್ವಜನಿಕರ ಜೇಬಿಗೆ ಕತ್ತರಿ ಹಾಕಿದೆ” ಎಂದು ವಿಪಕ್ಷ ನಾಯಕ ಅಶೋಕ್ ಆಕ್ರೋಶ ಹೊರಹಾಕಿದ್ದಾರೆ.
ಬಿಜೆಪಿ ಕಿಡಿ
ಇದೇ ವಿಚಾರವಾಗಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿರುವ ಕರ್ನಾಟಕ ಬಿಜೆಪಿ ಘಟಕ, “ಕನ್ನಡಿಗರಿಗೆ ಪದೇ ಪದೇ ಬೆಲೆ ಏರಿಕೆಯ ಬರೆ ಹಾಕುವುದೇ ಕಾಂಗ್ರೆಸ್ ಸರ್ಕಾರದ ಅಸಲಿ ಕರ್ನಾಟಕ ಮಾಡೆಲ್” ಎಂದು ಹೇಳಿದೆ.
ಕನ್ನಡಿಗರಿಗೆ ಪದೇ ಪದೇ ಬೆಲೆ ಏರಿಕೆಯ ಬರೆ ಹಾಕುವುದೇ @INCKarnataka ಸರ್ಕಾರದ ಅಸಲಿ ಕರ್ನಾಟಕ ಮಾಡೆಲ್!!
ಪೆಟ್ರೋಲ್ ಬೆಲೆ ಪ್ರತಿ ಲೀ. ಗೆ ₹3 ಹಾಗೂ ಡಿಸೇಲ್ ಬೆಲೆ ಪ್ರತಿ ಲೀ.ಗೆ ₹3.50 ಯನ್ನು ಏಕಾಏಕಿ ಹೆಚ್ಚಿಸಿದೆ ರಾಜ್ಯ ಕಾಂಗ್ರೆಸ್ ಸರ್ಕಾರ.
ಸಿಎಂ @siddaramaiah ಅವರೇ, ಪೆಟ್ರೋಲಿಯಂ ಕಚ್ಚಾತೈಲದ ಬೆಲೆಯಲ್ಲಿ ಯಾವುದೇ… pic.twitter.com/LDocM4pOzg
— BJP Karnataka (@BJP4Karnataka) June 15, 2024
“ರಾಜ್ಯದ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ಬೆಲೆ ಪ್ರತಿ ಲೀ. ಗೆ ₹3 ಹಾಗೂ ಡಿಸೇಲ್ ಬೆಲೆ ಪ್ರತಿ ಲೀ.ಗೆ ₹3.50 ಯನ್ನು ಏಕಾಏಕಿ ಹೆಚ್ಚಿಸಿದೆ. ಸಿಎಂ ಸಿದ್ದರಾಮಯ್ಯ ಅವರೇ, ಪೆಟ್ರೋಲಿಯಂ ಕಚ್ಚಾತೈಲದ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ, ಮೇಲಾಗಿ ನೀವೇ ಹೇಳಿದಂತೆ ಸರ್ಕಾರದ ಬೊಕ್ಕಸ ತುಂಬಿ ತುಳುಕುತ್ತಿದೆ, ಕರ್ನಾಟಕ ದಿವಾಳಿ ಸಹ ಆಗಿಲ್ಲ, ಅಂದ ಮೇಲೆ ದಿಢೀರ್ ಅಂತ ಈ ಬೆಲೆಯೇರಿಕೆ ಯಾವ ಪುರುಷಾರ್ಥಕ್ಕೆ? ನಿಮಗೆ ನಿಜಕ್ಕೂ ಬಡವರ ಮೇಲೆ ಕಾಳಜಿ ಇದ್ದರೆ, ಕೂಡಲೇ ಬೆಲೆ ಏರಿಕೆ ಆದೇಶವನ್ನು ಹಿಂಪಡೆಯಿರಿ, ಇಲ್ಲವಾದಲ್ಲಿ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ಎದುರಿಸಲು ಸಿದ್ದವಾಗಿ” ಎಂದು ಬಿಜೆಪಿ ಎಚ್ಚರಿಕೆ ನೀಡಿದೆ.
