ದ್ರೋಹಿಗಳನ್ನು ಮತ್ತೆ ನಮ್ಮ ಪಕ್ಷಕ್ಕೆ ಸೇರಿಸುವುದಿಲ್ಲ: ಶರದ್ ಪವಾರ್

Date:

Advertisements

ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೂ ಮುನ್ನ ತಮ್ಮ ಸೋದರಳಿಯ, ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರನ್ನು ಎನ್‌ಸಿಪಿ ನಾಯಕ ಶರದ್ ಪವಾರ್ ಅವರು ಮತ್ತೆ ತಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬಹುದು ಎಂಬ ಸುದ್ದಿಗಳನ್ನು ಪವಾರ್ ತಳ್ಳಿಹಾಕಿದ್ದಾರೆ. “ದ್ರೋಹಿಗಳನ್ನು ಮತ್ತೆ ನಮ್ಮ ಪಕ್ಷಕ್ಕೆ ಸೇರಿಸುವುದಿಲ್ಲ” ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ತೋರದ ಅಜಿತ್‌ ಪವಾರ್ ನೇತೃತ್ವದ ಎನ್‌ಸಿಪಿಯನ್ನು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಮುನ್ನ ಮಹಾಯುತಿ ಒಕ್ಕೂಟದಿಂದ ಹೊರಹಾಕಲು, ಮೈತ್ರಿ ಮುರಿಯಲು ಬಿಜೆಪಿ ಮುಂದಾಗಿದೆ. ಈ ಮೈತ್ರಿ ಮುರಿದರೆ ಅಜಿತ್ ಪವಾರ್ ಮತ್ತೆ ಶರದ್ ಪವಾರ್‌ ಜೊತೆ ಸೇರಲಿದ್ದಾರೆ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ಮಹಾರಾಷ್ಟ್ರದಲ್ಲಿ ಬಿಜೆಪಿ ತಂತ್ರಕ್ಕೆ ಆಹುತಿಯಾಗುತ್ತಾ ಮಹಾಯುತಿ  

Advertisements

ಮಹಾರಾಷ್ಟ್ರದಲ್ಲಿ ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟವು ಆಡಳಿತಾರೂಢ ಒಕ್ಕೂಟಕ್ಕಿಂತಲೂ ಅಧಿಕ ಕ್ಷೇತ್ರದಲ್ಲಿ ಗೆಲುವು ಕಂಡ ಬಳಿಕ ಶಿವಸೇನೆ (ಯುಬಿಟಿ), ಎನ್‌ಸಿಪಿ (ಎಸ್‌ಪಿ) ಮತ್ತು ಕಾಂಗ್ರೆಸ್‌ನ ಮಹಾ ವಿಕಾಸ್ ಅಘಾಡಿ (ಎಂವಿಎ) ಜಂಟಿ ಪತ್ರಿಕಾಗೋಷ್ಠಿಯನ್ನು ನಡೆಸಿದೆ.

ಈ ಪತ್ರಿಕಾಗೋಷ್ಠಿಯಲ್ಲಿ ಅಜಿತ್ ಪವಾರ್ ಅವರನ್ನು ತಮ್ಮ ಪಕ್ಷಕ್ಕೆ ಮತ್ತೆ ಸೇರಿಸಿಕೊಳ್ಳುವ ಸುದ್ದಿಯನ್ನು ಶರದ್ ಪವಾರ್ ತಳ್ಳಿಹಾಕಿದ್ದಾರೆ. ಉದ್ಧವ್ ಠಾಕ್ರೆ ಮತ್ತು ಶರದ್ ಪವಾರ್ ಇಬ್ಬರೂ “ಬಂಡಾಯ ನಾಯಕರನ್ನು ಹಿಂದಕ್ಕೆ ತೆಗೆದುಕೊಳ್ಳುವ ಪ್ರಶ್ನೆಯೇ ಇಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನು ಓದಿದ್ದೀರಾ?  ಮಹಾರಾಷ್ಟ್ರ| ಅಜಿತ್ ಅಲ್ಲ ಬಿಜೆಪಿಯ ‘ಚಾರ್‌ ಸೌ ಪಾರ್’ ಚುನಾವಣೆ ಸೋಲಿಗೆ ಕಾರಣ: ಮಿತ್ರ ಪಕ್ಷದ ಸಚಿವ

“ಲೋಕಸಭೆ ಚುನಾವಣೆಯಲ್ಲಿ ವ್ಯಾಪಕ ಪ್ರಚಾರ ಮಾಡಿದ ಪ್ರಧಾನಿ ಮೋದಿಗೆ ಧನ್ಯವಾದಗಳು” ಎಂದು ಶರದ್ ಪವಾರ್ ಹೇಳಿದರು. “ಮೋದಿ ಅವರು 17 ರ್‍ಯಾಲಿಗಳು ಮತ್ತು ಒಂದು ರೋಡ್ ಶೋ ಅನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಅವರು ಪ್ರಚಾರ ಮಾಡಿದಲ್ಲೆಲ್ಲಾ ಎಂವಿಎ ಅಭ್ಯರ್ಥಿ ಗೆದ್ದಿದ್ದಾರೆ” ಎಂದು ಶರದ್ ಪವಾರ್ ವ್ಯಂಗ್ಯವಾಡಿದರು.

ಹಾಗೆಯೇ ವಿಪಕ್ಷ ಎಂವಿಎ ನಾಯಕರು ಜಂಟಿಯಾಗಿ ವಿಧಾನಸಭೆ ಚುನಾವಣೆಯಲ್ಲಿ ಹೋರಾಡುವುದಾಗಿ ಘೋಷಿಸಿದ್ದಾರೆ.

 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X