ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ಅಲಕನಂದಾ ನದಿಗೆ ಟೆಂಪೋ ಟ್ರಾವೆಲರ್ ಉರುಳಿದ್ದು ಹದಿನಾಲ್ಕು ಜನರು ಸಾವನ್ನಪ್ಪಿದ್ದಾರೆ ಮತ್ತು 12 ಮಂದಿ ಗಾಯಗೊಂಡಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿ ತಿಳಿಸಿದ್ದಾರೆ.
ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಈ ವಿಷಯದ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಮೃತರ ಕುಟುಂಬಸ್ಥರಿಗೆ 2 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.
ರುದ್ರಪ್ರಯಾಗ ನಗರದ ತಿರುವಿನಲ್ಲಿ ರಾತ್ರಿ 11.30ರ ಸುಮಾರಿಗೆ ವಾಹನ ಅಪಘಾತಕ್ಕೀಡಾಗಿದೆ. ಮೇಲ್ನೋಟಕ್ಕೆ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿರಬಹುದು ಎಂದು ಕಂಡುಬಂದಿದೆ ಎಂದು ಎಸ್‌ಡಿಆರ್‌ಎಫ್ ಕಮಾಂಡೆಂಟ್ ಮಣಿಕಾಂತ್ ಮಿಶ್ರಾ ಹೇಳಿದ್ದಾರೆ.
ಇದನ್ನು ಓದಿದ್ದೀರಾ? ಉತ್ತರಾಖಂಡ| ಹೆಚ್ಚುತ್ತಿದೆ ಚಾರ್ ಧಾಮ್ ಯಾತ್ರಾರ್ಥಿಗಳ ಸಾವಿನ ಸಂಖ್ಯೆ; 116 ಮಂದಿ ಮೃತ್ಯು
26 ಜನರಿದ್ದ ಟೆಂಪೋ ಟ್ರಾವೆಲ್ ಚೋಪ್ಟಾಗೆ ತೆರಳುತ್ತಿದ್ದಾಗ ರುದ್ರಪ್ರಯಾಗ ಪ್ರಧಾನ ಕಚೇರಿ ಬಳಿಯ ರಂತೋಲಿ ಬಳಿ ಅಪಘಾತಕ್ಕೀಡಾಗಿದೆ. ವಾಹನವು ಹೆದ್ದಾರಿಯಿಂದ 200 ಮೀಟರ್ ದೂರದಲ್ಲಿ ಬಿದ್ದು 10 ಜನರು ಸ್ಥಳದಲ್ಲೇ ಸಾವನ್ನಪ್ಪಿದರು. ಇತರ ನಾಲ್ವರು ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಅಥವಾ ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ ಎಂದು ಎಸ್‌ಡಿಆರ್‌ಎಫ್‌ನ ಹೇಳಿಕೆ ತಿಳಿಸಿದೆ.
जनपद रुद्रप्रयाग में टेम्पो ट्रैवलर के दुर्घटनाग्रस्त होने का अत्यंत पीड़ादायक समाचार प्राप्त हुआ। स्थानीय प्रशासन व SDRF की टीमें राहत एवं बचाव कार्यों में जुटी हुई है। घायलों को नज़दीकी चिकित्सा केंद्र पर उपचार हेतु भेज दिया गया है। ज़िलाधिकारी को घटना की जाँच के आदेश दे दिए…
— Pushkar Singh Dhami (@pushkardhami) June 15, 2024
ಅಪಘಾತದ ನಂತರ, ಎಸ್‌ಡಿಆರ್‌ಎಫ್ ಮತ್ತು ಜಿಲ್ಲಾ ರಕ್ಷಣಾ ತಂಡವು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಈ ನಡುವೆ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಚಾರ್‌ಧಾಮ್ ಯಾತ್ರಾ ಮಾರ್ಗದಲ್ಲಿ ಅಪಘಾತ ಮತ್ತು ಇತರೆ ದುರ್ಘಟನೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.
ಇದನ್ನು ಓದಿದ್ದೀರಾ? ಉತ್ತರಾಖಂಡ್‌ನ ಚಾರಣಕ್ಕೆ ತೆರಳಿದ್ದ ಬೆಂಗಳೂರಿನ 19 ಮಂದಿಯಲ್ಲಿ ನಾಲ್ವರು ಸಾವು
ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಿಎಂ, “ರುದ್ರಪ್ರಯಾಗ ಜಿಲ್ಲೆಯಲ್ಲಿ ಟೆಂಪೋ ಟ್ರಾವೆಲರ್ ಅಪಘಾತದ ಅತ್ಯಂತ ದುಃಖದ ಸುದ್ದಿ ಕೇಳಿಬಂದಿದೆ. ಸ್ಥಳೀಯ ಆಡಳಿತ, ಎಸ್‌ಡಿಆರ್‌ಎಫ್ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ವೈದ್ಯಕೀಯ ಕೇಂದ್ರಕ್ಕೆ ಕಳುಹಿಸಲಾಗಿದೆ. ಘಟನೆಯ ಬಗ್ಗೆ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶಿಸಲಾಗಿದೆ” ಎಂದು ತಿಳಿಸಿದ್ದಾರೆ.
“ವಾಹನವು ಹರಿಯಾಣ ನೋಂದಾಯಿತವಾಗಿದೆ. ವಾಹನದ ನಿಗದಿತ ಆಸನ ಸಾಮರ್ಥ್ಯ 20 ಆಗಿದ್ದು, ಅಪಘಾತದ ಸಮಯದಲ್ಲಿ 26 ಪ್ರಯಾಣಿಕರು ಅದರಲ್ಲಿ ಪ್ರಯಾಣಿಸುತ್ತಿದ್ದರು” ಎಂದು ಹೇಳಿದ್ದಾರೆ.