ಲೋಕಸಭೆ ಸ್ಪೀಕರ್ ಚುನಾವಣೆ| ಟಿಡಿಪಿ ಸ್ಪರ್ಧಿಸಿದರೆ ‘ಇಂಡಿಯಾ’ ಒಕ್ಕೂಟ ಬೆಂಬಲಿಸುತ್ತೆ: ಸಂಜಯ್ ರಾವತ್

Date:

Advertisements

ಲೋಕಸಭೆ ಸ್ಪೀಕರ್ ಚುನಾವಣೆಗೆ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ, ಆಡಳಿತಾರೂಢ ಮಿತ್ರ ಪಕ್ಷವಾದ ತೆಲುಗು ದೇಶಂ ಪಕ್ಷಕ್ಕೆ (ಟಿಡಿಪಿ) ಬೆಂಬಲವನ್ನು ನೀಡಲು ವಿರೋಧ ಪಕ್ಷದ ಇಂಡಿಯಾ ಒಕ್ಕೂಟದ ಎಲ್ಲರೂ ಪ್ರಯತ್ನಿಸುವುದಾಗಿ ಶಿವಸೇನೆ (ಉದ್ಧವ್ ಠಾಕ್ರೆ ಬಣ) ನಾಯಕ ಸಂಜಯ್ ರಾವತ್ ಭಾನುವಾರ ಹೇಳಿದ್ದಾರೆ.

ಮುಂಬೈನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ರಾವತ್, “ಲೋಕಸಭೆಯ ಸ್ಪೀಕರ್ ಆಯ್ಕೆಯು ಅತೀ ನಿರ್ಣಾಯಕವಾಗಿದೆ. ಬಿಜೆಪಿಗೆ ಸ್ಪೀಕರ್‌ ಸ್ಥಾನ ಲಭ್ಯವಾದರೆ ಅದು ಟಿಡಿಪಿ, ಜೆಡಿಯು ಮುಂತಾದ ಸರ್ಕಾರಿ ಬೆಂಬಲಿತ ಪಕ್ಷಗಳನ್ನು, ಚಿರಾಗ್ ಪಾಸ್ವಾನ್ ಮತ್ತು ಜಯಂತ್ ಚೌಧರಿ ಅವರ ರಾಜಕೀಯ ಸಂಘಟನೆಗಳನ್ನು ಒಡೆಯುತ್ತದೆ” ಎಂದು ಆರೋಪಿಸಿದರು.

ಇದನ್ನು ಓದಿದ್ದೀರಾ?  ರಾಹುಲ್ ಗಾಂಧಿ ದೇಶ ಮುನ್ನಡೆಸಬೇಕು ಎಂಬುವುದು ರಾಷ್ಟ್ರದ ಆಶಯ: ಸಂಜಯ್ ರಾವತ್

Advertisements

“ಬಿಜೆಪಿಯು ತನಗೆ ಬೆಂಬಲ ನೀಡುವವರಿಗೆ ದ್ರೋಹ ಮಾಡುತ್ತದೆ. ಅದರ ಅನುಭವ ನಮಗಿದೆ. ಟಿಡಿಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಇಚ್ಛಿಸಿದೆ ಎಂಬ ಮಾತು ನಮಗೆ ಕೇಳಿ ಬಂದಿದೆ. ಟಿಡಿಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಇಂಡಿಯಾ ಒಕ್ಕೂಟವು ಚರ್ಚೆ ನಡೆಸಿ ಟಿಡಿಪಿಗೆ ಬೆಂಬಲ ನೀಡುವ ಪ್ರಯತ್ನ ಮಾಡುತ್ತದೆ” ಎಂದು ತಿಳಿಸಿದರು.

“ನಿಯಮದ ಪ್ರಕಾರ ಉಪಸಭಾಪತಿ ಸ್ಥಾನವನ್ನು ಪ್ರತಿಪಕ್ಷಗಳು ಪಡೆಯಬೇಕು” ಎಂದು ಹೇಳಿದ ರಾವತ್, “ಎನ್‌ಡಿಎ ಸರ್ಕಾರ ಸ್ಥಿರ ಆಡಳಿತವಲ್ಲ” ಎಂದೂ ಅಭಿಪ್ರಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಂಬಾನಿಯ ವಂತಾರ ಮೃಗಾಲಯದ ಕಾರ್ಯಾಚರಣೆ ತನಿಖೆಗೆ ಎಸ್‌ಐಟಿ ರಚನೆ

ಕಳೆದ ಕೆಲವು ತಿಂಗಳುಗಳಿಂದ ಅಂಬಾನಿ ಅವರ ರಿಲಯನ್ಸ್‌ ಸಂಸ್ಥೆಗೆ ಸೇರಿದ, ಮುಕೇಶ್...

ಮದುವೆಯಾಗಲು ನಿರಾಕರಿಸಿದ ಯುವತಿಗೆ ಗುಂಡಿಕ್ಕಿ ಕೊಲೆ: ತಾನೂ ಆತ್ಮಹತ್ಯೆಗೆ ಶರಣಾದ ಯುವಕ

ಮದುವೆಯಾಗಲು ನಿರಾಕರಿಸಿದ ಕಾರಣಕ್ಕೆ ಯುವಕನೋರ್ವ ಯುವತಿಗೆ ಗುಂಡಿಕ್ಕಿ ಕೊಲೆ ಮಾಡಿ, ಬಳಿಕ...

ಅಣ್ಣಾಮಲೈ ಕೈಯಿಂದ ಪ್ರಶಸ್ತಿ ಪಡೆಯಲು ವಿದ್ಯಾರ್ಥಿ ನಕಾರ

ಕ್ರೀಡಾಕೂಟದಲ್ಲಿ ಗೆಲುವು ಸಾಧಿಸಿದ್ದ ವಿದ್ಯಾರ್ಥಿಯೊಬ್ಬ ಬಿಜೆಪಿ ನಾಯಕ ಕೆ ಅಣ್ಣಾಮಲೈ ಅವರಿಂದ...

ಆಸ್ಪತ್ರೆ ನಿರ್ಮಾಣ ಹಗರಣ: ಎಎಪಿಯ ಸೌರಭ್ ಭಾರದ್ವಾಜ್ ನಿವಾಸದ ಮೇಲೆ ಇಡಿ ದಾಳಿ

ದೆಹಲಿ ಆರೋಗ್ಯ ಸಚಿವರಾಗಿದ್ದ ಅವಧಿಯಲ್ಲಿ ಆಸ್ಪತ್ರೆಗಳ ನಿರ್ಮಾಣದಲ್ಲಿ ಹಗರಣ ನಡೆದಿದೆ ಎಂಬ...

Download Eedina App Android / iOS

X