ಪೆಟ್ರೋಲ್, ಡೀಸೆಲ್ ದರ : ದಕ್ಷಿಣದ ಇತರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲೇ ಕಡಿಮೆ: ಸಿಎಂ ಸಿದ್ದರಾಮಯ್ಯ

Date:

Advertisements

ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡಿ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿತ್ತು. ಪೆಟ್ರೋಲ್‌ಗೆ ₹3, ಡೀಸೆಲ್‌ಗೆ ₹3.5 ಏರಿಕೆ ಮಾಡಲಾಗಿದ್ದು, ತಕ್ಷಣದಿಂದಲೇ ಪರಿಷ್ಕೃತ ದರ ಜಾರಿಯಾಗಲಿದೆ ಎಂದು ಸರ್ಕಾರ ಹೇಳಿತ್ತು.

ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡಿರುವ ಸರ್ಕಾರದ ಕ್ರಮವನ್ನು ವಿಪಕ್ಷಗಳು ಖಂಡಿಸಿದ್ದು, “ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕಿದ್ದಕ್ಕೆ ಕನ್ನಡಿಗರ ಮೇಲೆ ಸೇಡು” ಎಂದ ವಿಪಕ್ಷದ ಮುಖಂಡರು ಟೀಕಿಸುತ್ತಿರುವುದಲ್ಲದೇ, ಸೋಮವಾರ(ಜೂನ್ 17) ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ ಕರೆ ನೀಡಿದೆ.

ಈ ನಡುವೆ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, “ಪೆಟ್ರೋಲ್, ಡೀಸೆಲ್ ದರಕ್ಕೆ ಸಂಬಂಧಿಸಿ, ದಕ್ಷಿಣದ ಇತರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲೇ ಕಡಿಮೆ ದರ ಇದೆ” ಎಂದು ಸಮರ್ಥನೆ ನೀಡಿದ್ದಾರೆ.

Advertisements

“ರಾಜ್ಯ ಸರ್ಕಾರವು ಪೆಟ್ರೋಲ್ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು 29.84% ಗೆ ಹಾಗೂ ಡೀಸೆಲ್‌ ಮೇಲಿನ ತೆರಿಗೆಯನ್ನು 18.44% ಗೆ ಹೆಚ್ಚಳ ಮಾಡಿದೆ. ಈ ಏರಿಕೆಯ ನಂತರವೂ ಕರ್ನಾಟಕವು ತೈಲೋತ್ಪಾನ್ನಗಳ ಮೇಲೆ ವಿಧಿಸುತ್ತಿರುವ ತೆರಿಗೆಯು ದಕ್ಷಿಣ ಭಾರತದ ರಾಜ್ಯಗಳಿಗಿಂತ ಹಾಗೂ ನಮ್ಮ ರಾಜ್ಯದ ಆರ್ಥಿಕತೆಯ ಗಾತ್ರಕ್ಕೆ ಹೋಲುವ ಮಹಾರಾಷ್ಟ್ರ ರಾಜ್ಯಕ್ಕಿಂತಲೂ ಕಡಿಮೆಯಿದೆ” ಎಂದು ತಿಳಿಸಿದ್ದಾರೆ.

“ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಮೇಲೆ ಮೌಲ್ಯವರ್ಧಿತ ತೆರಿಗೆ (ವ್ಯಾಟ್) 25% ಜೊತೆಗೆ ಹೆಚ್ಚುವರಿ ತೆರಿಗೆ ರೂ. 5.12 ಇದೆ. ಹಾಗೂ ಡೀಸೆಲ್‌ ಮೇಲೆ 21% ಇದೆ. ಇದಕ್ಕೆ ಹೋಲಿಸಿದರೆ ರಾಜ್ಯದ ಪರಿಷ್ಕೃತ ದರ ಕೂಡ ಜನರಿಗೆ ಹೊರೆಯಾಗದಂತಿದೆ. ಮೌಲ್ಯವರ್ಧಿತ ತೆರಿಗೆ ಹೆಚ್ಚಳದ ಹೊರತಾಗಿಯೂ, ರಾಜ್ಯದಲ್ಲಿ ಡೀಸೆಲ್‌ ಬೆಲೆ ಗುಜರಾತ್ ಹಾಗೂ ಮಧ್ಯಪ್ರದೇಶಗಳಿಗಿಂತ ಕಡಿಮೆಯಿದೆ. ಪೆಟ್ರೋಲಿಯಂ ಉತ್ಪನ್ನಗಳ ದರವು ಜನರಿಗೆ ಹೊರೆಯಾಗದ ರೀತಿಯಲ್ಲಿ ಲಭ್ಯವಾಗಿಸಲು ನಾವು ಬದ್ಧರಿದ್ದೇವೆ” ಎಂದು ಸಿಎಂ ತಿಳಿಸಿದ್ದಾರೆ.

“ಬಿಜೆಪಿಯ ಡಬ್ಬಲ್ ಇಂಜಿನ್ ಸರ್ಕಾರದ ಅವಧಿಯಲ್ಲಿ ರಾಜ್ಯದ ಸಂಪನ್ಮೂಲಗಳನ್ನು ಇತರೆ ರಾಜ್ಯಗಳಿಗೆ ಹಂಚಿಕೆ ಮಾಡುವ ದುರುದ್ದೇಶದಿಂದ ಕೇಂದ್ರ ಸರ್ಕಾರ ರಾಜ್ಯದ ಬಿಜೆಪಿ ಸರ್ಕಾರವನ್ನು ಬಳಸಿಕೊಂಡು ಕರ್ನಾಟಕದಲ್ಲಿ ಮೌಲ್ಯವರ್ಧಿತ ತೆರಿಗೆ ದರವನ್ನು ಕಡಿತಗೊಳಿಸುವಂತೆ ಮಾಡಿ, ತನ್ನ ಪಾಲಿನ ತೆರಿಗೆ ಹೆಚ್ಚಳ ಮಾಡುವ ಮೂಲಕ ಲಕ್ಷಾಂತರ ಕೋಟಿ ಸಂಗ್ರಹಿಸಿತ್ತು. ಈ ಅನರ್ಥ ನೀತಿಯಿಂದಾಗಿ ರಾಜ್ಯದ ರಾಜಸ್ವ ಸಂಗ್ರಹಕ್ಕೆ ದೊಡ್ಡ ಹೊಡೆತ ಬಿದ್ದರೆ, ಇದೇ ವೇಳೆ ಕೇಂದ್ರವು ಕನ್ನಡಿಗರಿಗೆ ದ್ರೋಹ ಬಗೆದು ಭರಪೂರ ತೆರಿಗೆ ಸಂಗ್ರಹಿಸಿತ್ತು” ಎಂದು ಸಿಎಂ ಸಿದ್ದರಾಮಯ್ಯ ದೂರಿದ್ದಾರೆ.

“ಕೇಂದ್ರ ಸರ್ಕಾರವು ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ರೂ. 9.21 ರಿಂದ ರೂ. 32.98 ಗೆ ಹಾಗೂ ಡೀಸೆಲ್‌ ಮೇಲೆ ರೂ. 3.45 ರಿಂದ ರೂ. 31.84 ಕ್ಕೆ ಹೆಚ್ಚಳ ಮಾಡಿತ್ತು. ಇದು ನಿಜವಾಗಿಯೂ ಜನರ ಮೇಲಿನ ಹೊರೆ. ಆಗಾಗ್ಗೆ ಕೇಂದ್ರ ಸರ್ಕಾರವು ತೆರಿಗೆ ಕಡಿತಗೊಳಿಸಿದ ಹೊರತಾಗಿಯೂ ಈಗಿನ ಅಬಕಾರಿ ಸುಂಕವು ಪೆಟ್ರೋಲ್ ಮೇಲೆ ರೂ. 19.9 ಹಾಗೂ ಡೀಸೆಲ್‌ ಮೇಲೆ ರೂ. 15.8 ಇದೆ. ನರೇಂದ್ರ ಮೋದಿ ಅವರ ಸರ್ಕಾರ ಜನಹಿತದ ದೃಷ್ಟಿಯಿಂದ ಈ ತೆರಿಗೆಯನ್ನು ಇಳಿಕೆ ಮಾಡಬೇಕು ಎಂದು ಒತ್ತಾಯಿಸುತ್ತೇನೆ” ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ | ‘ಬಿಜೆಪಿಗೆ ಮತ ಹಾಕಿದ್ದಕ್ಕೆ ಸೇಡು’ ಎಂದ ವಿಪಕ್ಷ ನಾಯಕ ಅಶೋಕ್!

“ರಾಜ್ಯ ಸರ್ಕಾರದ ಮೌಲ್ಯವರ್ಧಿತ ತೆರಿಗೆಯಲ್ಲಾದ ಬದಲಾವಣೆಯಿಂದ ಸಂಗ್ರಹವಾಗುವ ಹಣವು ನಾಡಿನ ಜನರ ಮೂಲಭೂತ ಸೇವೆಗಳು ಹಾಗೂ ಅಭಿವೃದ್ಧಿ ಯೋಜನೆಗಳಿಗೆ ಬಳಸಲ್ಪಡುತ್ತದೆ ಎಂಬ ಗ್ಯಾರಂಟಿಯನ್ನು ನಾನು ನೀಡುತ್ತೇನೆ. ನಾವು ಸರ್ವರ ಹಿತಕಾಯಲು ಮತ್ತು ಜವಾಬ್ದಾರಿಯುತ ಸರ್ಕಾರವಾಗಿ ಮುನ್ನಡೆಯಲು ಬದ್ಧರಿದ್ದೇವೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X