ರಾಹುಲ್‌ ಗಾಂಧಿ ಬಗ್ಗೆ ಅಪಪ್ರಚಾರ: ಬಲಪಂಥೀಯ ಯೂಟ್ಯೂಬರ್ ಅಜಿತ್ ಭಾರ್ತಿ ವಿರುದ್ಧ ಎಫ್ಐಆರ್

Date:

Advertisements

ರಾಹುಲ್‌ ಗಾಂಧಿ ಬಗ್ಗೆ ಅಪಪ್ರಚಾರ ಮಾಡಿದ ಬಲಪಂಥೀಯ ಯೂಟ್ಯೂಬರ್ ಅಜಿತ್ ಭಾರ್ತಿ ವಿರುದ್ಧ ಬೆಂಗಳೂರು ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. “ಸುಳ್ಳು ಹೇಳಿಕೆಗಳ ಮೂಲಕ ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಹರಡುತ್ತಿದ್ದಾರೆ” ಎಂದು ಆರೋಪಿಸಿ ಬೆಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾನೂನು ಘಟಕದ ಕಾರ್ಯದರ್ಶಿ ಹಾಗೂ ವಕೀಲ ಬಿ.ಕೆ.ಬೋಪಣ್ಣ ಅವರ ದೂರಿನ ಆಧಾರದ ಮೇಲೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ತಮ್ಮ ಭಾಷಣಗಳಲ್ಲಿ ರಾಮಮಂದಿರದ ಜಾಗದಲ್ಲಿ ಬಾಬರಿ ಮಸೀದಿಯನ್ನು ನಿರ್ಮಿಸುವ ಪ್ರಸ್ತಾಪ ಮಾಡಿದ್ದಾರೆ ಎಂದು ಯೂಟ್ಯೂಬರ್ ಅಜಿತ್ ಭಾರ್ತಿ ವಿಡಿಯೋವೊಂದರಲ್ಲಿ ಸುಳ್ಳು ಆರೋಪವನ್ನು ಮಾಡಿದ್ದಾರೆ. ಬೋಪಣ್ಣ ತನ್ನ ದೂರಿನಲ್ಲಿ ಅಜಿತ್ ಭಾರ್ತಿ ಅವರು ಎಕ್ಸ್‌ನಲ್ಲಿ ಹಂಚಿಕೊಂಡಿರುವ ವಿಡಿಯೋವನ್ನು ಉಲ್ಲೇಖಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ?  ಈ ಚುನಾವಣೆಯಲ್ಲಿ ಮೋದಿಗಿಂತ ರಾಹುಲ್ ಗಾಂಧಿ ಹೆಚ್ಚು ಪ್ರಭಾವಶಾಲಿ ಆಗಿದ್ಹೇಗೆ?

ವಿಡಿಯೋದಲ್ಲಿ ಅಜಿತ್ ಭಾರ್ತಿ, “ನಮ್ಮ ಮಂದಿರ ಇದ್ದ ಜಾಗದಲ್ಲಿ ಮಸೀದಿ ಇದ್ದರೆ ಅದನ್ನು ನಾವು ಕೆಡವುತ್ತೇವೆ ಎಂದು ಮೋದಿ ಎಂದಿಗೂ ಹೇಳಿಲ್ಲ. ಬಿಜೆಪಿ ಕೆಲವು ನಾಯಕರು ಹೇಳಿರಬಹುದು. ಆದರೆ ಕೆಲವು ಪಕ್ಷದ ಪ್ರಮುಖ ನಾಯಕರು ಇಂತಹ ಭಾಷಣ ಮಾಡುತ್ತಾರೆ. ರಾಹುಲ್ ಗಾಂಧಿ ಮಾಡಿದ್ದಾರೆ. ರಾಮಮಂದಿರವನ್ನು ಕೆಡವಿ ಮತ್ತೆ ಬಾಬರಿ ಮಸೀದಿ ಕಟ್ಟುತ್ತೇವೆ ಎಂದು ಹೇಳಿದ್ದಾರೆ. ನೇರವಾಗಿ ಹೇಳಲಾಗುತ್ತದೆ” ಎಂದು ಹೇಳಿರುವುದು ಕಾಣಬಹುದು.


ಈ ವಿಡಿಯೋ ಆಧಾರದಲ್ಲಿ ದೂರು ನೀಡಿರುವ ಬಿ.ಕೆ.ಬೋಪಣ್ಣ, “ರಾಹುಲ್ ಗಾಂಧಿಯವರು ತಮ್ಮ ಭಾಷಣಗಳಲ್ಲಿ ರಾಮ ಮಂದಿರದ ಬದಲಿಗೆ ಬಾಬರಿ ಮಸೀದಿಯನ್ನು ಮರಳಿ ತರಲು ಉದ್ದೇಶಿಸಿದ್ದಾರೆ ಎಂದು ಅಜಿತ್ ಭಾರ್ತಿ ಸುಳ್ಳು ಹೇಳಿದ್ದಾರೆ. ರಾಹುಲ್ ಗಾಂಧಿ ತಮ್ಮ ಯಾವುದೇ ಭಾಷಣದಲ್ಲಿ ಇಂತಹ ಹೇಳಿಕೆಗಳನ್ನು ನೀಡಿಲ್ಲ” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಜಮ್ಮು ಕಾಶ್ಮೀರ ಉಗ್ರ ದಾಳಿ ಬಗ್ಗೆ ಪ್ರಧಾನಿ ಮೋದಿ ‘ಮೌನ’ ಪ್ರಶ್ನಿಸಿದ ರಾಹುಲ್ ಗಾಂಧಿ

“ವಿವಿಧ ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಹುಟ್ಟುಹಾಕಲು ಸುಳ್ಳು ಮಾಹಿತಿಯನ್ನು ಹರಡಿದ್ದಾರೆ. ಭಾರ್ತಿ ಅವರ ಹೇಳಿಕೆಗಳು ಸಾರ್ವಜನಿಕ ಶಾಂತಿಯನ್ನು ಕದಡುವ ಮತ್ತು ಜನರನ್ನು ಕೆರಳಿಸುವ ಉದ್ದೇಶವನ್ನು ಹೊಂದಿವೆ. ಧಾರ್ಮಿಕ ಗುಂಪುಗಳ ನಡುವೆ ಸಂಘರ್ಷ ಮತ್ತು ದ್ವೇಷದ ಬೀಜಗಳನ್ನು ಬಿತ್ತುವ ಮೂಲಕ ಸಾಮಾಜಿಕ ಶಾಂತಿಯನ್ನು ನಾಶಪಡಿಸುವಲ್ಲಿ ತೊಡಗಿದ್ದಾರೆ” ಎಂದು ಬೋಪಣ್ಣ ಆರೋಪಿಸಿದರು.

ಪೊಲೀಸರು ಐಪಿಸಿ ಸೆಕ್ಷನ್ 153ಎ (ಧರ್ಮ, ಜನಾಂಗ, ಹುಟ್ಟಿದ ಸ್ಥಳ ಅಥವಾ ವಾಸಸ್ಥಳದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 505 (2) (ವರ್ಗಗಳ ನಡುವೆ ದ್ವೇಷ, ಅಥವಾ ಕೆಟ್ಟ ಇಚ್ಛೆಯನ್ನು ಸೃಷ್ಟಿಸುವ ಅಥವಾ ಉತ್ತೇಜಿಸುವ ಹೇಳಿಕೆಗಳು) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

ಬೆಂಗಳೂರು ಮೆಟ್ರೋ: ನಾಳೆ ಹಳದಿ ಮಾರ್ಗದಲ್ಲಿ ಬೆಳಿಗ್ಗೆ 5ಕ್ಕೆ ಸಂಚಾರ ಆರಂಭ

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್‌ ಲಿಮಿಟೆಡ್‌ (ಬಿಎಂಆರ್‌ಸಿಎಲ್‌) ಹಳದಿ ಮಾರ್ಗದಲ್ಲಿ ಸೋಮವಾರ...

Download Eedina App Android / iOS

X