ರಾಜ್ಯದ ಪಾಲಿನ‌ ಹಣ ಕೇಂದ್ರ ಕೊಟ್ಟಿದ್ದರೆ ನಾವು ಇಂಧನ ತೆರಿಗೆ ಹೆಚ್ಚಿಸುತ್ತಿರಲಿಲ್ಲ: ಸಿಎಂ ಸಿದ್ದರಾಮಯ್ಯ

Date:

Advertisements

ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆ ಹೆಚ್ಚಳದ ಬಳಿಕವೂ ಬಿಜೆಪಿ ಆಡಳಿತದ ರಾಜ್ಯಗಳಿಗಿಂತ, ದಕ್ಷಿಣ ಭಾರತದ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಇಂಧನ ಬೆಲೆ ಕಡಿಮೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಗೃಹ ಕಚೇರಿ ಕೃಷ್ಣದಲ್ಲಿ ಸೋಮವಾರ (ಜೂ.17) ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ತೆರಿಗೆ ಹೆಚ್ಚಳದ ಅನಿವಾರ್ಯತೆಯನ್ನು ಕೇಂದ್ರದ ಮೋದಿ ಸರ್ಕಾರ ಹೇಗೆ ಸೃಷ್ಟಿಸಿತು, ರಾಜ್ಯದ ಪಾಲಿನ ಹಣವನ್ನು ಕೊಡದೇ ಇರುವುದರಿಂದ ಸೃಷ್ಟಿ ಆಗಿದೆ” ಎಂದರು.

“2015 ರ ಬಳಿಕ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಅರ್ಧಕ್ಕರ್ಧ ಕಡಿಮೆ ಆದಾಗಲೂ ಅವರ ಲಾಭವನ್ನು ದೇಶದ ಜನರಿಗೆ ನೀಡದೆ ಮೋದಿ ಸರ್ಕಾರ ಇಂಧನ ಬೆಲೆಯನ್ನು ನಿರಂತರವಾಗಿ ಏರಿಸುತ್ತಾ ಹೋಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮೌಲ್ಯವರ್ಧಿತ ತೆರಿಗೆ ಹೆಚ್ಚಳದಿಂದ ಸಂಗ್ರಹವಾಗುವ ಅಂದಾಜು ಮೂರು ಸಾವಿರ ಕೋಟಿ ರೂಪಾಯಿಗಳು ರಾಜ್ಯದ ಜಾನೆಗೆ ಸಂದಾಯವಾಗುತ್ತದೆ. ಆ ಹಣ ಜನರ ಕಲ್ಯಾಣ ಕಾರ್ಯಕ್ರಮಗಳಿಗೆ ವಿನಿಯೋಗವಾಗುತ್ತದೆ ಅದು ನಮ್ಮ ಜೇಬಿಗೆ ಹೋಗುವುದಿಲ್ಲ” ಎಂದು ವಿವರಿಸಿದರು.

Advertisements

“ಹಿಂದಿನ ಬಿಜೆಪಿ ಸರ್ಕಾರದಲ್ಲಿ ರಾಜ್ಯದ ಪ್ರತಿಯೊಂದು ಯೋಜನೆಗಳಲ್ಲಿಯೂ 40% ತೆರಿಗೆ ಹಣ ಬಿಜೆಪಿ ನಾಯಕರ ಜೇಬಿಗೆ ಹೋಗುತ್ತಿತ್ತು. ಈ ರೀತಿ ಅಂದಾಜು ಒಂದುವರೆ ಲಕ್ಷ ಕೋಟಿ ರೂಪಾಯಿಗಳಷ್ಟು ರಾಜ್ಯದ ಜನರ ಬೆವರ ಗಳಿಕೆಯ ತೆರಿಗೆ ಹಣವನ್ನು ಈ ಬಿಜೆಪಿ ನಾಯಕರ ತಮ್ಮ ಜೇಬಿಗೆ ತುಂಬಿಸಿಕೊಂಡಿದ್ದಾರೆ. ಇಂತಹ ಲೂಟಿಕೋರ, ಭ್ರಷ್ಟ, ಜನವಿರೋಧಿ ಬಿಜೆಪಿ ನಾಯಕರಿಗೆ ಜನಕಲ್ಯಾಣಕ್ಕಾಗಿ ಸ್ಪಲ್ಪ ಪ್ರಮಾಣದ ತೆರಿಗೆ ಹೆಚ್ಚಿಸಿದ್ದನ್ನು ಪ್ರಶ್ನಿಸುವ ಯೋಗ್ಯತೆ ಎಲ್ಲಿದೆ” ಎಂದು ಪ್ರಶ್ನಿಸಿದರು.

“ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯ ಸರ್ಕಾರ 60 ಸಾವಿರ ಕೋಟಿ ರೂಪಾಯಿಗಳನ್ನು ವ್ಯಯ ಮಾಡುತ್ತಿದೆ. ಇಷ್ಟೂ ಹಣ ರಾಜ್ಯದ ಎಲ್ಲಾ ಜಾತಿ-ಸಮುದಾಯಗಳ ಬಡವರು ಮತ್ತು ಮಧ್ಯಮ ವರ್ಗದವರಿಗೆ ಹೋಗುತ್ತದೆ. ಸದ್ಯದ ಅಲ್ಪ ಪ್ರಮಾಣದ ಡೀಸೆಲ್-ಪೆಟ್ರೋಲ್ ತೆರಿಗೆ ಹೆಚ್ಚಳದಿಂದ ನಮಗೆ ಹೆಚ್ಚುವರಿಯಾಗಿ ಸಂಪನ್ಮೂಲ ಸಂಗ್ರಹ ಆಗುವುದು ಕೇವಲ 3 ಸಾವಿರ ಕೋಟಿ ರೂಪಾಯಿ ಮಾತ್ರ. ಆದರೆ ಗ್ಯಾರಂಟಿಗಳಿಗೆ ನಾವು ಕೊಡುತ್ತಿರುವುದು 60 ಸಾವಿರ ಕೋಟಿ ರೂಪಾಯಿ. ಹೀಗಾಗಿ ಆರ್.ಅಶೋಕ್ ಅವರ ಪೆದ್ದುತನದ ಮಾತುಗಳಿಗೆ ಅರ್ಥವಿಲ್ಲ” ಎಂದು ಲೇವಡಿ ಮಾಡಿದರು.

“ಜನರಿಗೆ ಹೆಚ್ಚಿನ ಹೊರೆಯಾಗದ ರೀತಿಯಲ್ಲಿ ರಾಜ್ಯದ ಅಭಿವೃದ್ಧಿ ಕೆಲಸಗಳಿಗೆ ಸಂಪನ್ಮೂಲ ಕ್ರೋಡೀಕರಣದ ಉದ್ದೇಶದೊಂದಿಗೆ ಪೆಟ್ರೋಲ್‌, ಡೀಸೆಲ್‌ ಮಾರಾಟ ತೆರಿಗೆಯಲ್ಲಿ 3 ರೂ. ಗಳಷ್ಟು ಹೆಚ್ಚಿಸಲಾಗಿದೆ. ಕೇಂದ್ರ ಸರ್ಕಾರ ಜಿ.ಎಸ್.ಟಿ. ವ್ಯವಸ್ಥೆ ಜಾರಿಗೊಳಿಸಿದ ನಂತರ ರಾಜ್ಯ ಸರ್ಕಾರಗಳ ಸಂಪನ್ಮೂಲ ಕ್ರೋಢೀಕರಣಕ್ಕೆ ಇರುವ ಅವಕಾಶ ಸೀಮಿತಗೊಂಡಿದೆ. ಕೇಂದ್ರ ಸರ್ಕಾರ ಜಿ.ಎಸ್.ಟಿ. , ಆದಾಯ ತೆರಿಗೆ, ಕೇಂದ್ರ ಅಬಕಾರಿ ಸುಂಕ ಮೊದಲಾದ ಮೂಲಗಳಿಂದ ತೆರಿಗೆ ಸಂಗ್ರಹಿಸುತ್ತದೆ. ರಾಜ್ಯ ಸರ್ಕಾರಕ್ಕೆ ಕೇವಲ ನೋಂದಣಿ ಮತ್ತು ಮುದ್ರಾಂಕ ಶುಲ್ಕ, ವಾಹನ ತೆರಿಗೆ, ಪೆಟ್ರೋಲ್‌, ಡೀಸೆಲ್‌ ಮೇಲಿನ ಮಾರಾಟ ತೆರಿಗೆ ಹಾಗೂ ಮದ್ಯದ ಮೇಲಿನ ಮಾರಾಟ ತೆರಿಗೆ ಹೊರತು ಪಡಿಸಿ ಯಾವುದೇ ಮೂಲಗಳಿಲ್ಲ” ಎಂದು ವಿವರಿಸಿದರು.

“ಬಿಜೆಪಿಯವರು ಪ್ರತಿಭಟನೆ ಮಾಡುತ್ತಿದ್ದಾರೆ. ಆದರೆ ಅವರಿಗೆ ಪ್ರತಿಭಟನೆ ಮಾಡುವ ನೈತಿಕ ಹಕ್ಕು ಎಲ್ಲಿದೆ? ಡಾ ಮನಮೋಹನ್‌ ಸಿಂಗ್‌ ಅವರ ಅವಧಿಯಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ 113 ಡಾಲರ್‌ ಇತ್ತು. 2015ರಲ್ಲಿ ಈ ಬೆಲೆ ಅರ್ಧಕ್ಕರ್ಧ ಕಡಿಮೆಯಾದರೂ, ಬೆಲೆ ಇಳಿಸಿ, ಜನರ ಹೊರೆ ಕಡಿಮೆ ಮಾಡುವ ಕಾಳಜಿಯನ್ನು ನರೇಂದ್ರ ಮೋದಿಯವರು ತೋರಲಿಲ್ಲ. ಬಿಜೆಪಿಯವರು ಯಾರ ವಿರುದ್ಧ ಹೋರಾಡಬೇಕು” ಎಂದು ಪ್ರಶ್ನಿಸಿದರು?

ಕರ್ನಾಟಕಕ್ಕೆ ನಿರಂತರ ಅನ್ಯಾಯ

“ಕರ್ನಾಟಕ ರಾಜ್ಯಕ್ಕೆ ಬಿಜೆಪಿ ಸರ್ಕಾರದಿಂದ ನಿರಂತರ ಅನ್ಯಾಯವಾಗುತ್ತ ಬಂದಿದ್ದರೂ, ಬಿಜೆಪಿಯವರು ದನಿ ಎತ್ತಿಲ್ಲ? ತೆರಿಗೆ ಅನ್ಯಾಯವಾದಾಗ ಸಂಸದರು ಈ ವಿಷಯದ ಕುರಿತು ಮಾತನಾಡಿಲ್ಲ; ರಾಜ್ಯಕ್ಕೆ 15ನೇ ಹಣಕಾಸು ಆಯೋಗವು ವಿಶೇಷ ಅನುದಾನ ನೀಡುವಂತ ಶಿಫಾರಸು ಮಾಡಿದ್ದರೂ, ಕೇಂದ್ರ ಸರ್ಕಾರ ನೀಡಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ ಆಯವ್ಯಯದಲ್ಲಿ ನಿರ್ಮಲಾ ಸೀತಾರಾಮನ್‌ ಅವರು 5,000 ಕೋಟಿ ರೂ. ಒದಗಿಸುವುದಾಗಿ ಘೋಷಿಸಿದರೂ, ಬಿಡಿಗಾಸೂ ನೀಡಿಲ್ಲ. ಈ ವಿಷಯಗಳ ಕುರಿತು ಬಿಜೆಪಿಯವರು ದನಿ ಎತ್ತಿದ್ದಾರೆಯೇ? ಬಿಜೆಪಿಯು ಬಡವರು, ದಲಿತರ ವಿರೋಧಿ ಧೋರಣೆ ಹೊಂದಿದೆ” ಎಂದು ಹರಿಹಾಯ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X