ಪ್ರಸ್ತುತ ಶೈಕ್ಷಣಿಕ ವರ್ಷ ಪ್ರಾರಂಭವಾಗಿದ್ದು, ತರಗತಿವಾರು ಲಭ್ಯವಿರದ ಪಠ್ಯಪುಸ್ತಕಗಳನ್ನು ಕೂಡಲೇ ವಿದ್ಯಾರ್ಥಿಗಳಿಗೆ ತಲುಪಿಸುವಂತೆ ದಲಿತ ಸಂಘರ್ಷ ಸಮಿತಿ ಜೇವರ್ಗಿ ತಾಲೂಕು ಘಟಕದಿಂದ ಕ್ಷೇತ್ರ ಶಿಕ್ಷಣಾಧಿಕಾರಿ ಮುಖಾಂತರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕು ಸಂಚಾಲಕ ಸಿದ್ರಾಮ್ ಕಟ್ಟಿ ಮಾತನಾಡಿ, “ಪ್ರಸ್ತುತ ಶೈಕ್ಷಣಿಕ ವರ್ಷ ಪ್ರಾರಂಭವಾಗಿದ್ದು ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತರಗತಿವಾರು ಕೆಲವೊಂದು ಪಠ್ಯ ಪುಸ್ತಕಗಳು ಸರ್ಕಾರದಿಂದ ಬಂದಿಲ್ಲದಿರುವುದು ವಿದ್ಯಾರ್ಥಿಗಳಿಂದ ದಸಂಸ ಗಮನಕ್ಕೆ ಬಂದಿದೆ. ಆದ್ದರಿಂದ ಪಠ್ಯಭೋದನೆ ಮಾಡಲು ಶಿಕ್ಷಕರಿಗೆ ಮತ್ತು ಅಭ್ಯಾಸ ಮಾಡಲು ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಅವಶ್ಯಕ ಇರುವದರಿಂದ, ಶಿಕ್ಷಣ ಸಚಿವರು ರಾಜ್ಯದ ವಿದ್ಯಾರ್ಥಿ/ವಿದ್ಯಾರ್ಥಿನಿಯರ ಅಭ್ಯಾಸಕ್ಕೆ ತೊಂದರೆಯಾಗದಂತೆ ತರಗತಿವಾರು ಲಭ್ಯವಿರದ ಪುಸ್ತಕಗಳನ್ನು ಆಯಾ ಶಾಲೆಗಳಿಗೆ ತಲುಪಿಸಲು ಕೂಡಲೇ ಸೂಕ್ತ ಕ್ರಮ ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿದರು.
ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾದೃಷ್ಠಿಯಿಂದ ಸರ್ಕಾರ ಮತ್ತು ಸಚಿವರು ಮುತುವರ್ಜಿ ವಹಿಸಿ ಕೂಡಲೇ ತರಗತಿವಾರು ಲಭ್ಯವಿರದ ಎಲ್ಲ ಪಠ್ಯ ಪುಸ್ತಕಗಳನ್ನು ವಿಲೇವಾರಿ ಮಾಡಲು ಕ್ರಮ ಜರುಗಿಸಬೇಕು. ವಿಳಂಬವಾದರೆ ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಎದುರು ವಿದ್ಯಾರ್ಥಿಗಳು ಮತ್ತು ಪಾಲಕರ ನೇತೃತ್ವದಲ್ಲಿ ದಲಿತ ಸಂಘರ್ಷ ಸಮಿತಿಯಿಂದ ತೀವ್ರ ಹೋರಾಟ ರೂಪಸಿಲಾಗುವುದು” ಎಂದು ಎಚ್ಚರಿಕೆ ನೀಡಿದರು.
ಈ ಸುದ್ದಿ ಓದಿದ್ದೀರಾ? ಮಂಡ್ಯ | ಮೈಶುಗರ್ ಕಾರ್ಖಾನೆ ಪುನರಾರಂಭ; ಜೂನ್ 23ರಿಂದ ಕಬ್ಬು ಅರೆಯುವಿಕೆಗೆ ಚಾಲನೆ
ಈ ಸಂದರ್ಭದಲ್ಲಿ ದಸಂಸ ಜೇವರ್ಗಿ ತಾಲೂಕು ಸಂಚಾಲಕ ಸಿದ್ರಾಮ ಕಟ್ಟಿ, ಸಂಚಾಲಕರಾದ ಶಿವಕುಮಾರ ಹೆಗಡೆ, ಸಂಗಣ್ಣ ಹೊಸಮನಿ, ಜಟ್ಟೆಪ್ಪ ಇದ್ದರು.
